Wednesday, 24th October 2018  

Vijayavani

ರಂಗೇರಿದ ಉಪ ಚುನಾವಣಾ ಕಣ-ಜಮಖಂಡಿಯಲ್ಲಿಂದು ಬಿಎಸ್ ವೈ ಮತಬೇಟೆ-ಸಕ್ಕರೆ ನಾಡು ಮಂಡ್ಯದಲ್ಲಿಂದು ಸಿದ್ದರಾಮಯ್ಯ ಪ್ರಚಾರ        ದೀಪಾವಳಿಯಿಂದ ಲೋಡ್​ ಶೆಡ್ಡಿಂಗ್-ಇಂಧನ ಇಲಾಖೆ ಅಧಿಕಾರಿಗಳ ಜತೆ ಸಿಎಂ ಸಭೆ-ಕತ್ತಲಲ್ಲಿ ಮುಳುಗುತ್ತಾ ಕರ್ನಾಟಕ..?        ಸಾಲಮನ್ನಾವೂ ಇಲ್ಲ, ಬೆಲೆಯೂ ಇಲ್ಲ-ಬೆವರು ಸುರಿಸಿ ಬೆಳೆದ ಬೆಳೆ ಕೇಳೋರೂ ಇಲ್ಲ-ಅನ್ನದಾತನಿಗೆ ಕಣ್ಣೀರು ತರಿಸುತ್ತಿದೆ ಈರುಳ್ಳಿ        ಬೆಂಗಳೂರಲ್ಲಿ ಅನಧಿಕೃತ ಬಿಟ್ ಕಾಯಿನ್ ATM-ಆರೋಪಿ ಹರೀಶ್ ಬಂಧನ-ಕೆಂಪ್ ಫೋರ್ಟ್​ನಲ್ಲಿದ್ದ ಎಟಿಎಂ ಪೊಲೀಸರ ವಶಕ್ಕೆ        ಕೊಳ್ಳೆಗಾಲದಲ್ಲಿ 17 ವರ್ಷಗಳಿಂದ ಕಾಮಗಾರಿ ಅಪೂರ್ಣ-ಇನ್ನೂ ಆಗಿಲ್ಲ ವಾಲ್ಮೀಕಿ ಭವನ ನಿರ್ಮಾಣ-ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ        ವಿಜಯಪುರದಲ್ಲಿ ಗಂಗಾಕಲ್ಯಾಣ ಗೋಲ್ಮಾಲ್-ಫಲಾನುಭವಿಗಳಿಗೆ ಸಿಗದ ಬೋರ್ ವೇಲ್ ಸೌಲಭ್ಯ-ಯಾರದ್ದೋ ಹೆಸರಲ್ಲಿ ಅನುದಾನ ನೀಡಿದ ಅಧಿಕಾರಿಗಳು       
Breaking News

ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದ ಸುಧಾಮೂರ್ತಿ

Wednesday, 10.10.2018, 7:43 AM       No Comments

ಮೈಸೂರು: ನಾಡಿನ ಪರಂಪರೆ ಮತ್ತು ಸಾಂಪ್ರದಾಯಿಕ ವಿಶ್ವವಿಖ್ಯಾತ ದಸರಾ ಮಹೋತ್ಸವಕ್ಕೆ ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾ ಮೂರ್ತಿ ಚಾಲನೆ ನೀಡಿದರು.

ಬುಧವಾರ ಬೆಳಗ್ಗೆ 7.05ರಿಂದ 7.35ಕ್ಕೆ ಸಲ್ಲುವ ತುಲಾ ಲಗ್ನದ ಶುಭ ಮುಹೂರ್ತದಲ್ಲಿ ಚಾಮುಂಡಿ ಬೆಟ್ಟದಲ್ಲಿ ನಾಡದೇವತೆ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿದ ನಂತರ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡುವ ಮೂಲಕ ವಿಧ್ಯುಕ್ತವಾಗಿ ದಸರಾ ಉತ್ಸವಕ್ಕೆ ಚಾಲನೆ ನೀಡಿದರು.

ಇದಕ್ಕೂ ಮುನ್ನ ಸುಧಾಮೂರ್ತಿ ಮತ್ತು ಅವರ ಕುಟುಂಬ ಸದಸ್ಯರು ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು. ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.

ಉದ್ಘಾಟನಾ ಕಾರ್ಯಕ್ರಮದಲ್ಲಿ ಸಚಿವೆ ಜಯಮಾಲಾ, ಸಚಿವರಾದ ಜಿ.ಟಿ.ದೇವೇಗೌಡ, ಸಾ.ರಾ.ಮಹೇಶ್, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್, ಸಂಸದ ಪ್ರತಾಪ್ ಸಿಂಹ ಪಾಲ್ಗೊಂಡಿದ್ದರು.

ನಾಡಹಬ್ಬ ದಸರಾ ಮಹೋತ್ಸವಕ್ಕೆ ಇಂದು ಚಾಲನೆ

Leave a Reply

Your email address will not be published. Required fields are marked *

Back To Top