Monday, 25th September 2017  

Vijayavani

1. ರಾಜ್ಯದೆಲ್ಲೆಡೆ ವರುಣನ ಆರ್ಭಟ- ಬೆಂಗಳೂರು, ದಾವಣೆಗೆರೆಯಲ್ಲಿ ಮಳೆ ಅವಾಂತರ- ಕೆರೆಗಳೆಲ್ಲ ಭರ್ತಿ, ಮಂಡ್ಯದಲ್ಲಿ ಜಮೀನಿಗೆ ನುಗ್ಗಿತು ನೀರು 2. ಕಲ್ಯಾಣಿಯಲ್ಲಿ ಮುಳುಗಿ ವಿದ್ಯಾರ್ಥಿ ಸಾವು ಪ್ರಕರಣ- ಬೆಂಗಳೂರಿನ ನ್ಯಾಷನಲ್​ ಕಾಲೇಜು ವಿರುದ್ಧ ನಿರ್ಲಕ್ಷ್ಯದ ಆರೋಪ- ಸಿಬ್ಬಂದಿ ವಿರುದ್ಧ ಪೋಷಕರ ಆಕ್ರೋಶ 3. ಇಂದು ದೀನ್​ ದಯಾಳ್​​ ಜನುಮದಿನ- ಲೋಕಾರ್ಪಣೆಗೊಳ್ಳಲಿದೆ ವಿದ್ಯುತ್​ ಭವನ- ಕುಸಿದ ಅರ್ಥವ್ಯವಸ್ಥೆಗೆ ಮೋದಿ ನೀಡ್ತಾರಾ ಟಾನಿಕ್​ 4. ಜೆಮ್​ಶೆಡ್​ಪುರದಲ್ಲಿ ಭೀಕರ ಅಗ್ನಿ ಅವಘಡ- 8 ಜನ ಸಜೀವ ದಹನ, 25 ಮಂದಿಗೆ ಗಾಯ- ಪಟಾಕಿ ಕಾರ್ಖಾನೆಗೆ ಧಗಧಗಿಸಿದ ಕಿಡಿ 5. ಹುಟ್ಟಿದ ಆರೇ ನಿಮಿಷದಲ್ಲಿ ಮಗುವಿಗೆ ಆಧಾರ್- ಜನನ ಪ್ರಮಾಣಪತ್ರಕ್ಕೆ ಲಿಂಕ್​ ಮಾಡಿಸಿದ ಪೋಷಕರು- ಒಸ್ಮಾನಾಬಾದ್​ ಆಸ್ಪತ್ರೆಯಲ್ಲಿ ಭಾರಿ ಕಮಾಲ್​
Breaking News :

IBPS ಪರೀಕ್ಷೆಯಲ್ಲಿ ಕನ್ನಡಿಗರಿಗೆ ಅನ್ಯಾಯ: ಬೀದಿಗಿಳಿದ ವಿದ್ಯಾರ್ಥಿ, ಕನ್ನಡ ಸಂಘಟನೆಗಳು

Saturday, 09.09.2017, 10:17 AM       No Comments

ಹುಬ್ಬಳ್ಳಿ: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕನ್ನಡಿಗರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ರಾಜ್ಯದ ಹಲವೆಡೆ ಕನ್ನಡ ಅಭ್ಯರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಐಬಿಪಿಎಸ್ ಪರೀಕ್ಷಾ ಕೇಂದ್ರದ ಎದುರು ಹುಬ್ಬಳ್ಳಿ, ಬಳ್ಳಾರಿ, ದಾವಣಗೆರೆ, ಕಲಬುರಗಿ ಸೇರಿದಂತೆ ಹಲವೆಡೆ ಪ್ರತಿಭಟನೆ ನಡೆಯುತ್ತಿದೆ.

ಬ್ಯಾಕಿಂಗ್‌ ಸೇವೆಗೆ ಸ್ಥಳೀಯ ಭಾಷೆ ಕಡ್ಡಾಯವಲ್ಲ ಎನ್ನುವ ನಿಯಮ ಜಾರಿಯಿಂದ ಕನ್ನಡಿಗರಿಗೆ ಅನ್ಯಾಯವಾಗಿದೆ. ಆಂಧ್ರ, ತಮಿಳುನಾಡಿನವರು ಇಲ್ಲಿ ಬಂದು ಪರೀಕ್ಷೆ ಬರೆಯುತ್ತಾರೆ. ಕನ್ನಡ ಬಾರದವರು ಹೇಗೆ ವ್ಯವಹರಿಸುತ್ತಾರೆ ಎಂದು ಆರೋಪಿಸಿ ಕನ್ನಡಪರ ಸಂಘಟನೆಗಳು ಹುಬ್ಬಳ್ಳಿ Institute of Banking Personnel Selection ಪರೀಕ್ಷಾ ಕೇಂದ್ರದ ಎದುರು ಪ್ರತಿಭಟನೆಗೆ ಮುಂದಾಗಿವೆ.

ನಗರದ IBMR ಕಾಲೇಜ್‌ನಲ್ಲಿ ನಡೆಯಬೇಕಿದ್ದ ಪರೀಕ್ಷೆಯನ್ನು ಬಹಿಷ್ಕರಿಸಿ ಕರ್ನಾಟಕದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದು, ಆಂಧ್ರ ಮೂಲದ ವಿದ್ಯಾರ್ಥಿಗಳಿಗೆ ಅವಕಾಶ ನೀಡದಂತೆ ಒತ್ತಾಯಿಸಿದ್ದಾರೆ.

ಶೇ.80ಕ್ಕೂ ಹೆಚ್ಚು ಆಂಧ್ರ ಮೂಲದವರು ಪರೀಕ್ಷೆ ಬರೆಯುತ್ತಿದ್ದು, ಇದರಿಂದ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ. ಈ ಕೂಡಲೇ ಐಬಿಪಿಎಸ್ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಲು ಆಗ್ರಹಿಸಿದ್ದಾರೆ.

ಬಳ್ಳಾರಿಯಲ್ಲೂ ಐಬಿಪಿಎಸ್‌ ಪರಿಕ್ಷಾರ್ಥಿಗಳಿಂದ ಪ್ರತಿಭಟನೆ

ಬಳ್ಳಾರಿ: ಐಬಿಪಿಎಸ್ ಪರೀಕ್ಷೆಯನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಬಳ್ಳಾರಿಯ ವೀರಶೈವ ಕಾಲೇಜ್ ಎದುರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಕನ್ನಡಿಗರಿಗೆ ಗ್ರಾಮೀಣ ಬ್ಯಾಂಕ್‌ಗಳ ಉದ್ಯೋಗದಲ್ಲಿ ಅನ್ಯಾಯವಾಗುತ್ತಿದೆ. ಕನ್ನಡಿಗ ಬ್ಯಾಂಕ್ ಉದ್ಯೋಗಾಕಾಂಕ್ಷಿಗಳಿಗೆ ಆಂಧ್ರದ ಕೊಚಿಂಗ್ ಸೆಂಟರ್‌ಗಳಿಂದ ವಂಚನೆಯಾಗುತ್ತಿದೆ. ಗ್ರಾಮೀಣ ಬ್ಯಾಂಕ್‌ಗಳಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡಬೇಕು ಎಂದು ಒತ್ತಾಯಿಸಿದರು.

ಈ ವೇಳೆ ಪೊಲೀಸರು ಮತ್ತು ವಿದ್ಯಾರ್ಥಿಗಳ ನಡುವೆ ಮಾತಿನ ಚಕಮಕಿ ನಡೆಯಿತು. ಪ್ರತಿಭಟನಾ ನಿರತರು ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡುವಂತೆ ಆಗ್ರಹಿಸಿದರು.

ಬ್ಯಾಂಕ್‌ ನೇಮಕಾತಿಯಲ್ಲಿ ಕನ್ನಡಿಗರಿಗೆ ಅನ್ಯಾಯ ಖಂಡಿಸಿ ಪ್ರತಿಭಟನೆ

ದಾವಣಗೆರೆ: ವಿವಿಧ ಬ್ಯಾಂಕ್ ಹುದ್ದೆಗಳ ನೇಮಕಾತಿಗೆ ಪರೀಕ್ಷೆ ಹಿನ್ನೆಲೆಯಲ್ಲಿ ನೂರಾರು ವಿದ್ಯಾರ್ಥಿಗಳು ಪರೀಕ್ಷೆಯನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು.

ದಾವಣಗೆರೆ ನಗರದ ಬಿಐಟಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆಯಬೇಕಿದ್ದ ಬ್ಯಾಂಕ್ ಪರೀಕ್ಷೆಯನ್ನು ವಿದ್ಯಾರ್ಥಿಗಳು ಬಹಿಷ್ಕರಿಸಿದ್ದಾರೆ.

ಬ್ಯಾಂಕ್ ಪರೀಕ್ಷೆಯಲ್ಲಿ ಹಾಗೂ ಹುದ್ದೆ ನೇಮಕಾತಿಯಲ್ಲಿ ಹೊರರಾಜ್ಯದ ವಿದ್ಯಾರ್ಥಿಗಳಿಗೆ ಅವಕಾಶ ನೀಡಬಾರದು. ಹೊರ ರಾಜ್ಯದ ವಿದ್ಯಾರ್ಥಿಗಳನ್ನು ನೇಮಕ ಮಾಡಿದ್ದೇ ಆದರೆ ಕನ್ನಡದ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ. (ದಿಗ್ವಿಜಯ ನ್ಯೂಸ್‌)

Leave a Reply

Your email address will not be published. Required fields are marked *

Back To Top