Friday, 20th October 2017  

Vijayavani

1. ಲಿಂಗಾಯತ ಪ್ರತಿಪಾದಕರಾಗಿದ್ದಕ್ಕೆ ಕಲಬುರ್ಗಿ ಹತ್ಯೆ – ಲಿಂಗಾಯತ ವಿಚಾರ ಬರೆದಿದ್ದಕ್ಕೆ ಗೌರಿ ಲಂಕೇಶ್​ ಕೊಲೆ ಶಂಕೆ – ಬೆಂಗಳೂರಿನಲ್ಲಿ ಜಾಮದಾರ್​ ವಿವಾದಾತ್ಮಕ ಹೇಳಿಕೆ 2. ಬಿಜೆಪಿ ಬಿಟ್ಟು ಕಾಂಗ್ರೆಸ್​ ಸೇರಿದಕ್ಕೆ ಮಾರಣಾಂತಿಕ ಹಲ್ಲೆ – ಮಾಜಿ ಕಾರ್ಪೊರೇಟರ್​ ರವೀಂದ್ರ ವಿರುದ್ಧ ಮಹಿಳೆ ಆರೋಪ – ಗಾಯಾಳುವಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ 3. ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾರಥೋತ್ಸವ – ರಥೋತ್ಸವದ ವೇಳೆ ನೂಕು ನುಗ್ಗಲು – ಭಕ್ತರ ನಿಯಂತ್ರಿಸಲು ಪೊಲೀಸರಿಂದ ಲಾಠಿ ಚಾರ್ಜ್ 4. ಹಾಲಿವುಡ್, ಬಾಲಿವುಡ್​ ಬೇರೆ ಅಲ್ಲ – ಎರಡೂ ಕಡೆ ಲೈಂಗಿಕ ಶೋಷಣೆ ಇದ್ದೆ ಇದೆ – ಸಂದರ್ಶನದಲ್ಲಿ ಸತ್ಯ ತೆರೆದಿಟ್ಟ ಪ್ರಿಯಾಂಕ ಚೋಪ್ರಾ 5. ದೀಪಾವಳಿಗೆ ಪ್ರಧಾನಿ ತಾಯಿ ಫುಲ್ ಖುಷ್​ – ರಾಮನ ಹಾಡಿಗೆ ಸಖತ್ ಸ್ಟೆಪ್ಸ್​ – 97ರ ಹರೆಯದಲ್ಲೂ ಹೀರಾಬೆನ್​ ಜೀವನ ಪ್ರೀತಿ
Breaking News :

ಬಾವುಟ ಆವುಟ: ಮಾಲೂರಿನ ದೇಶದ್ರೋಹಿ ಸಾದಿಕ್ ಪರಾರಿ

Friday, 01.09.2017, 11:01 AM       No Comments

ಕೋಲಾರ: ಪೇಸ್‌ಬುಕ್‌ನಲ್ಲಿ ದೇಶದ್ರೋಹಿ ಸಂದೇಶ ಹೊಂದಿದ್ದ ಪೋಸ್ಟ್‌ನ್ನು ಶೇರ್‌ ಮಾಡಿದ್ದ ಯುವಕನ ವಿರುದ್ಧ ಪ್ರಕರಣ ದಾಖಲಾಗಿದೆ.

ಕೋಲಾರ ಜಿಲ್ಲೆಯ ಮಾಲೂರು ಪಟ್ಟಣದ ರಾಜೀವ್ ನಗರದ ಸಾದಿಕ್ ಶೇಕ್ ಎಂಬವನ ಮೇಲೆ ಐಪಿಸಿ ಸೆಕ್ಷನ್ 153(A) and (B) ಅಡಿಯಲ್ಲಿ ಮಾಲೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾದಿಕ್ ಶೇಕ್ ಪೇಸ್‌ಬುಕ್‌ನಲ್ಲಿ ದೇಶದ್ರೋಹಿ ಸಂದೇಶವಿರುವ ಪಾಕಿಸ್ತಾನದ ಬಾವುಟದ ಚಿತ್ರ ಹಾಕಿಕೊಂಡಿದ್ದ ಗಿಡುಗವೊಂದು ಭಾರತದ ಬಾವುಟದ ಚಿತ್ರ ಹಾಕಿಕೊಂಡ ಪಾರಿವಾಳವನ್ನು ಕೊಲ್ಲುತ್ತಿವಂತಿರುವ ಚಿತ್ರವನ್ನು ಹಂಚಿಕೊಂಡಿದ್ದ. ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು.

ಮಾಲೂರಿನ ಮನೋಜ್ ಎಂಬವರು ನೀಡಿದ ದೂರಿನ ಮೇಲೆ ಪ್ರಕರಣ ದಾಖಲಾಗಿದ್ದು, ಆರೋಪಿ ಪರಾರಿಯಾಗಿದ್ದಾನೆ. ಆರೋಪಿಯ ಪತ್ತೆಗೆ ಪೊಲೀಸರು ಶೋಧಕಾರ್ಯ ಮುಂದುವರಿಸಿದ್ದಾರೆ. (ದಿಗ್ವಿಜಯ ನ್ಯೂಸ್‌)

 

Leave a Reply

Your email address will not be published. Required fields are marked *

Back To Top