Monday, 11th December 2017  

Vijayavani

1. ಜೈಲಿನ ಆಸ್ಪತ್ರೆಯಲ್ಲಿ ಬೆಳಗೆರೆಗೆ ಚಿಕಿತ್ಸೆ – ಚೇತರಿಸಿಕೊಂಡ್ರೆ ಬ್ಯಾರಕ್‌ಗೆ ರವಾನೆ – ನೆಲದ ಮೇಲೆ ಕೂರಲು ರವಿ ಪರದಾಟ 2. ಕೊತ ಕೊತ ಕುದಿಯುತ್ತಿದೆ ಕುಮಟಾ – ಉಗ್ರ ಸ್ವರೂಪ ಪಡೆದ ಹಿಂದೂ ಸಂಘಟನೆಗಳ ಪ್ರತಿಭಟನೆ – ಆಕ್ರೋಶಕ್ಕೆ ಹೊತ್ತಿ ಉರಿದ ಐಜಿಪಿ ಕಾರು 3. ರಾಹುಲ್ ಗಾಂಧಿಗೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನ – ಪ್ರತಿಸ್ಪರ್ಧಿ ಇಲ್ಲದ್ದಕ್ಕೆ ಯುವರಾಜನಿಗೆ ಸಾರಥ್ಯ – ದೆಹಲಿಯಲ್ಲಿ ಕಾರ್ಯಕರ್ತರ ಸಂಭ್ರಾಮಾಚರಣೆ 4. ಮಂಡ್ಯದ ಸಂತೆಬಾಚಹಳ್ಳಿ ಕ್ರಾಸ್‌ ಬಳಿ ಭೀಕರ ಅಪಘಾತ – ಟ್ಯಾಂಕರ್ ಹರಿದು ಬೈಕ್ ಸವಾರರು ಸಾವು – ಕೆ.ಆರ್.ಪೇಟೆ ಗ್ರಾಮಾಂತರ ಠಾಣೆ ಪ್ರಕರಣ 5. ಸ್ಟೀಲ್‌ ಬ್ರಿಡ್ಜ್ ಹೋಯ್ತು ಮೆಟ್ರೋ ಬಂತು – ಏರ್‌ಪೋರ್ಟ್‌ಗೆ ರೈಲು ಬಿಡಲು ಸರ್ಕಾರದ ಒಪ್ಪಿಗೆ – ಮಹತ್ವದ ಯೋಜನೆಗೆ ಕ್ಯಾಬಿನೆಟ್‌ನಲ್ಲಿ ಅಸ್ತು
Breaking News :

ಕರ್ನಾಟಕದಲ್ಲಿ ಐಟಿ ದಾಳಿ: ಮೋದಿ ಒಬ್ಬ ಹಿಟ್ಲರ್​, ಭಸ್ಮಾಸುರ ಅಂತೆ

Wednesday, 02.08.2017, 3:35 PM       No Comments

ಬೆಂಗಳೂರು/ರಾಮನಗರ: ಬೆಳ್ಳಂಬೆಳಗ್ಗೆ ಆದಾಯ ತೆರಿಗೆ ಇಲಾಖೆಯು ಇಂಧನ ಸಚಿವ ಡಿ.ಕೆ ಶಿವಕುಮಾರ್​ ಅವರಿಗೆ ಶಾಕ್​ ನೀಡಿತು. ಇಂಧನ ಸಚಿವರಿಗೆ ಸಂಬಂಧಿಸಿದ ಎಲ್ಲಾ ಕಡೆಗಳಲ್ಲೂ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿ ಕಾಂಗ್ರೆಸ್​ ವಲಯಕ್ಕೆ ಅಕ್ಷರಶಃ ಬಿಸಿ ಮುಟ್ಟಿಸಿದೆ. ಇತ್ತ ರಾಜಕೀಯ ದುರುದ್ಧೇಶದಿಂದ ಕೇಂದ್ರ ಬಿಜೆಪಿ ಸರ್ಕಾರ ಆದಾಯ ತೆರಿಗೆಯನ್ನು ಛೂ ಬಿಟ್ಟಿದೆ ಎಂದು ಆರೋಪಿಸಿ ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಸರ್ಕಾರ ಕಿಡಿಕಾರಿದೆ.

ಕೇಂದ್ರದ ಮೇಲೆ ಸಿಎಂ ಸಿದ್ದು ಟ್ವೀಟ್​ ಗುದ್ದು

ಆದಾಯ ತೆರಿಗೆ ದಾಳಿಯನ್ನು ತೀವ್ರವಾಗಿ ಖಂಡಿಸಿರುವ ಸಿಎಂ ಸಿದ್ದರಾಮಯ್ಯ ತಮ್ಮ ಟ್ವಿಟ್ಟರ್​ ಮೂಲಕ ಗುಡುಗಿದ್ದಾರೆ. ಬಿಜೆಪಿಯನ್ನು ರಾಜಕೀಯವಾಗಿಯೇ ಎದುರಿಸುತ್ತೇವೆ ಇಂತಹ ಬೆದರಿಕೆಗೆ ನಾವು ಬಗ್ಗುವುದಿಲ್ಲ. ಕರ್ನಾಟಕದ ಸ್ವಾಭಿಮಾನಿ ಜನತೆ ನಮ್ಮ ಜತೆ ಇರುತ್ತಾರೆ ರಾಜಕೀಯ ದ್ವೇಷ ಸಾಧನೆಗೆ ಐಟಿ ದಾಳಿ ಎಂಬ ಬ್ರಹ್ಮಾಸ್ತ್ರ ಉಪಯೋಗಿಸಿದ್ದಾರೆ. ಇದು ಕೇವಲ ಅಧಿಕಾರ ದುರುಪಯೋಗವಲ್ಲ, ಬದಲಾಗಿ ಪ್ರಜಾಪ್ರಭುತ್ವದ ಕೊಲೆಯಾಗುತ್ತಿದೆ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟರ್​ನಲ್ಲಿ ಗುಡುಗಿದ್ದಾರೆ.

ಮೋದಿಗೂ ಹಿಟ್ಲರ್‌ಗೂ ಏನೂ ವ್ಯತ್ಯಾಸವಿಲ್ಲ

ಮೋದಿ ವಿರುದ್ಧ ಕೆಂಡಾಮಂಡಲರಾಗಿರುವ ದಿನೇಶ್ ಗುಂಡೂರಾವ್ ಅವರು ಕರ್ನಾಟಕ ರಾಜ್ಯ ಸರ್ಕಾರವನ್ನು ಉರುಳಿಸಲು ಕೇಂದ್ರ ಷಡ್ಯಂತ್ರ ಮಾಡುತ್ತಿದೆ. ಕೇವಲ ಕಾಂಗ್ರೆಸ್ ಟಾರ್ಗೆಟ್ ಮಾಡಿ ದಾಳಿ ಮಾಡಲಾಗಿದೆ. ಸಿಆರ್‌ಪಿಎಫ್ ಪಡೆಯನ್ನ ರಾಜ್ಯಕ್ಕೆ ಕಳುಹಿಸೋ ಅವಶ್ಯಕತೆ ಇತ್ತಾ?, ಕೇಂದ್ರ ಸರ್ಕಾರ ರಾಜ್ಯದ ವಿರುದ್ಧ ಸಂಚು ರೂಪಿಸುತ್ತಿದೆ. ಮೋದಿಗೂ ಹಿಟ್ಲರ್‌ಗೂ ಏನೂ ವ್ಯತ್ಯಾಸವಿಲ್ಲ ಎಂದು ಗುಡುಗಿದ್ದಾರೆ.

ಮೋದಿ ಆಧುನಿಕ ಭಸ್ಮಾಸುರ

ಕೇಂದ್ರ ಸರ್ಕಾರದ ವಿರುದ್ಧ ಉಗ್ರ ರೂಪ ತಾಳಿರುವ ಕಾಂಗ್ರೆಸ್​ ಮುಖಂಡ ವಿ.ಎಸ್​. ಉಗ್ರಪ್ಪ ಅವರು ದಾಳಿ ಮೂಲಕ ಭಯ ಹುಟ್ಟಿಸುವ ಕೆಲಸವಾಗ್ತಿದೆ. ಕೇಂದ್ರ ಸರ್ಕಾರ ಪ್ರತಿ ಪಕ್ಷಗಳ ವಿರುದ್ಧ ಸಂಚು ಮಾಡುತ್ತಿದೆ. ಪ್ರಧಾನಿ ಮೋದಿ ಆಧುನಿಕ ಭಸ್ಮಾಸುರ, ಮುಂದೆ ಅವರೇ ಭಸ್ಮ ಆಗ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.(ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *

Back To Top