Friday, 25th May 2018  

Vijayavani

ನಾಮಪತ್ರ ವಾಪಸ್ ಪಡೆದ ಸುರೇಶ್​ಕುಮಾರ್​- ಅವಿರೋಧವಾಗಿ ರಮೇಶ್​ಕುಮಾರ್​ ಆಯ್ಕೆ- ಎರಡನೇ ಬಾರಿಗೆ ಸ್ಪೀಕರ್​ ಆಗಿ ನೇಮಕ        ಸದನದಲ್ಲಿ ವಿಶ್ವಾಮತ ಪರೀಕ್ಷೆ- ಮೂರು ಪಕ್ಷಗಳ ಎಲ್ಲಾ ಶಾಸಕರು ಹಾಜರ್​- ಪ್ರತಿಪಕ್ಷ ನಾಯಕನ ಸ್ಥಾನದಲ್ಲಿ ಬಿಎಸ್​ವೈ        ಮೈತ್ರಿ ಸರ್ಕಾರದ ಪರ್ವ ಆರಂಭ- ಸಾಲ ಮನ್ನಾ ಮಾಡ್ತಾರಾ ಎಚ್​ಡಿಕೆ- ಕೊಟ್ಟ ಮಾತು ಉಳಿಸಿಕೊಳ್ತಾರಾ ಕಾಂಗ್ರೆಸ್​ ನಾಯಕರು        ಸಚಿವ ಸ್ಥಾನಕ್ಕಾಗಿ ಲಾಬಿ ಶುರು- ಕೆಪಿಸಿಸಿ ಅಧ್ಯಕ್ಷ ಸ್ಥಾನ, ಗೃಹಖಾತೆಗೆ ಡಿಕೆಶಿ ಪಟ್ಟು- ಹೈಕಮಾಂಡ್ ಭೇಟಿಗೆ ತೆರಳಲಿರುವ ಕೈ ನಾಯಕರು        ಮುಗಿದ ಬಹುಮತ ಸಾಬೀತಿನ ಪರೀಕ್ಷೆ- ಶಾಸಕರ ರೆಸಾರ್ಟ್​ ರಾಜಕೀಯ ಅಂತ್ಯ- ಇನ್ನಾದ್ರೂ ಕ್ಷೇತ್ರಗಳತ್ತ ತೆರಳ್ತಾರಾ ಎಂಎಲ್​ಎಗಳು        ಸಿಎಂಗೆ ಹೊಸ ಕಾರು ನೀಡಿದ ಡಿಪಿಎಆರ್- ಜಿಎ 6363 ಕಾರ್​ ನಂಬರ್​- ಹೊಸ ಕಾರು ಬಳಸಲು ಸಿಎಂ ನಿರ್ಧಾರ       
Breaking News

ಕರಣ್‌ ನಗರ್‌ ಗುಂಡಿನ ಚಕಮಕಿ ಅಂತ್ಯ: ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ

Tuesday, 13.02.2018, 4:25 PM       No Comments

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕರಣ್‌ ನಗರದ ಸಿಆರ್‌ಪಿಎಫ್‌ ಕ್ಯಾಂಪ್‌ ಬಳಿಯಲ್ಲಿ ಉಗ್ರರ ವಿರುದ್ಧದ ಕಾರ್ಯಾಚರಣೆಯು ಅಂತಿಮಗೊಂಡಿದ್ದು, ಇಬ್ಬರು ಉಗ್ರರನ್ನು ಭಾರತೀಯ ಸೇನಾಪಡೆ ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದೆ.

ಸೋಮವಾರ ಮುಂಜಾನೆ ಸಿಆರ್‌ಪಿಎಫ್‌ ಕ್ಯಾಂಪ್‌ ಮೇಲೆ ದಾಳಿ ನಡೆಸಲು ನುಗ್ಗುತ್ತಿದ್ದ ಉಗ್ರರ ಮೇಲೆ ಸೇನೆ ಎನ್‌ಕೌಂಟರ್‌ ಆರಂಭಿಸಿತ್ತು. ಆಗ ಸಮೀಪದ ಜನವಸತಿ ಪ್ರದೇಶದ ಕಟ್ಟಡದಲ್ಲಿ ಅವಿತು ಕುಳಿತು ಸೇನಾಪಡೆ ಮೇಲೆ ಉಗ್ರರು ಗುಂಡಿನ ದಾಳಿಗೆ ಮುಂದಾಗಿದ್ದರು. ಅವಿತಿದ್ದ ಉಗ್ರರಿಗಾಗಿ ಕಳೆದ 24 ಗಂಟೆಗಳಿಂದ ನಿರಂತರ ಕಾರ್ಯಾಚರಣೆ ನಡೆಸಲಾಗುತ್ತಿತ್ತು.

ಮೂಲಗಳ ಪ್ರಕಾರ ಸೇನಾಪಡೆ ಇಬ್ಬರು ಉಗ್ರನನ್ನು ಹೊಡೆದುರುಳಿಸಿದ್ದು, ಕಾರ್ಯಾಚರಣೆ ಮುಕ್ತಾಯಗೊಂಡಿದೆ ಎನ್ನಲಾಗುತ್ತಿದೆ. ದಾಳಿಯಲ್ಲಿ ಓರ್ವ ಸಿಆರ್‌ಪಿಎಫ್ ಯೋಧ ಹುತಾತ್ಮನಾಗಿದ್ದು, ಮತ್ತೋರ್ವ ಪೊಲೀಸ್ ಗಾಯಗೊಂಡಿದ್ದರು. (ಏಜೆನ್ಸೀಸ್‌)

Leave a Reply

Your email address will not be published. Required fields are marked *

Back To Top