Saturday, 22nd September 2018  

Vijayavani

ಸಂಕಷ್ಟ ತಂದ ದಂಗೆ ಹೇಳಿಕೆ - ಬಿಜೆಪಿ ನಿಯೋಗದಿಂದ ರಾಜ್ಯಪಾಲರಿಗೆ ದೂರು - ರಾಷ್ಟ್ರಪತಿಗಳಿಗೆ ಮಾಹಿತಿ ರವಾನೆ ಸಾಧ್ಯತೆ        ಸಿಎಂ ಬೇಜವಾಬ್ಧಾರಿ ಹೇಳಿಕೆಗೆ ರಾಜ್ಯಾದ್ಯಂತ ಖಂಡನೆ - ಬಿಜೆಪಿ ಕಾರ್ಯಕರ್ತರ ಪ್ರೊಟೆಸ್ಟ್​ - ಬಾಗಲಕೋಟೆಯಲ್ಲಿ ಬ್ಯಾನರ್​ ದಹನ        ಮಲೆನಾಡಲ್ಲಿ ಪ್ರವಾಹದ ಬೆನ್ನಲ್ಲೇ ಮತ್ತೊಂದು ಬರೆ - ನೆರೆ ಬಳಿಕ ಬತ್ತುತ್ತಿವೆ ನದಿಗಳು - ಆತಂಕದಲ್ಲಿ ಚಿಕ್ಕಮಗಳೂರು ಜನತೆ        ಶತಮಾನದ ಆಸ್ಪತ್ರೆಗೆ ಸರ್ಕಾರದ ಬೀಗ - ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆಗೆ ಜಾಗ - ಉಡುಪಿಯಲ್ಲಿ ಉಚಿತ ಚಿಕಿತ್ಸೆ ಇನ್ನು ಮರೀಚಿಕೆ..?        ಮೈಸೂರಲ್ಲಿ ನಾಡಹಬ್ಬಕ್ಕೆ ತಯಾರಿ - ಮಾವುತರಿಗೆ ಜಿಲ್ಲಾಡಳಿತದ ಭೂರಿ ಭೋಜನ - ಕೇರಂ ಆಡಿ ಸಂತಸಪಟ್ಟ ಕಾವಾಡಿಗರು        ಹುಬ್ಬಳ್ಳಿಯಲ್ಲಿ ಅಷ್ಟವಿನಾಯಕ ಸ್ಪರ್ಧೆ - ಅಲಂಕಾರದಲ್ಲಿ ಹಿರೇಪೇಟೆಯ ವಿನಾಯಕ ಪ್ರಥಮ- ಗಾಂಧಿ ಚೌಕ್ ಗಣಪ ಉತ್ತಮ ವಿಗ್ರಹ       
Breaking News

ರಾಹುಲ್​ ರ‍್ಯಾಲಿಯಲ್ಲಿ ಲಾಠಿ ಚಾರ್ಜ್​ ಮಾಡಿದ ಪೊಲೀಸರ​ ಅಮಾನತು

Wednesday, 21.03.2018, 11:54 AM       No Comments

< ಪೊಲೀಸ್​ ಜೀಪ್​ ಏರಿ ಪುಂಡಾಟ ತೋರಿದ ಕಾರ್ಯಕರ್ತರನ್ನು ಚೆದುರಿಸಲು ಲಾಠಿ ಪ್ರಹಾರ >

ಮಂಗಳೂರು: ಎಐಸಿಸಿ ಅಧ್ಯಕ್ಷ ರಾಹುಲ್​ ಗಾಂಧಿ ಉಳ್ಳಾಲಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಸಾವಿರಾರು ಕಾರ್ಯಕರ್ತರು ಸೇರಿದ್ದ ಹಿನ್ನೆಲೆಯಲ್ಲಿ ಉಂಟಾದ ಜನಜಂಗುಳಿ ನಿಯಂತ್ರಿಸಲು ಲಾಠಿ ಚಾರ್ಜ್​ ಮಾಡಿದ ಪೊಲೀಸ್​ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.

ಕಲ್ಲಾಪು, ಓವರ್​ಬಿಡ್ಜ್​, ಉಳ್ಳಾಲ ದರ್ಗಾ ಬಳಿ ಬಹುಸಂಖ್ಯೆಯಲ್ಲಿ ಕಾರ್ಯಕರ್ತರು ಸೇರಿದ್ದರಿಂದ ಜನಜಂಗುಳಿ ಉಂಟಾಗಿತ್ತು. ಅವರನ್ನು ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದರು. ಈ ಬಗ್ಗೆ ಕಾಂಗ್ರೆಸ್ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಸ್ಥಳಕ್ಕೆ ಆಗಮಿಸಿದ ಪೊಲೀಸ್​ ಕಮಿಷನರ್​ ತಕ್ಷಣವೇ ಸಿಬ್ಬಂದಿಯನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಅಲ್ಲದೆ, ಡಿಸಿಪಿಗೆ ಶೋಕಾಸ್​ ನೋಟಿಸ್​ ಜಾರಿ ಮಾಡಲಾಗಿದೆ. ಸಚಿವ ಯು.ಟಿ.ಖಾದರ್​ ಮನವಿ ಮೇರೆಗೆ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಆದೇಶಿಸಿದ್ದಾರೆ.

ಅತಿಯಾಗಿತ್ತು ಕಾರ್ಯಕರ್ತರ ಪುಂಡತನ

ರಾಹುಲ್​ ಗಾಂಧಿ ರ‍್ಯಾಲಿ ವೇಳೆ ಕಾಂಗ್ರೆಸ್​ ಕಾರ್ಯಕರ್ತರು ಪುಂಡಾಟ ತೋರಿದ್ದಾರೆ. ಮಂಗಳೂರಿನ ಜ್ಯೋತಿ ವೃತ್ತದಿಂದ ರ‍್ಯಾಲಿ ತೆರಳುತ್ತಿದ್ದಾಗ ರಾಹುಲ್​ ಬೆಂಗಾವಲಿಗೆ ಬರುತ್ತಿದ್ದ ಪೊಲೀಸ್​ ಜೀಪ್​ ಹತ್ತಿದ್ದಾರೆ. ಪೊಲೀಸರು ಜೀಪಿನಿಂದ ಇಳಿಯಲು ಸೂಚಿಸಿದರೂ ಕಾರ್ಯಕರ್ತರು ಮಾತು ಕೇಳಲಿಲ್ಲ. ಭದ್ರತೆಗೆ ನಿಯೋಜಿಸಿದ್ದ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ, ಲಾಠಿ, ಹಿಡಿದುಕೊಂಡಿದ್ದ ಹಗ್ಗವನ್ನು ಎಳೆದಾಡಿದ್ದಾರೆ‌.

ಆದರೆ, ಪೊಲೀಸರು ಕ್ರಮ ಕೈಗೊಳ್ಳಲು ಹಿಂದೇಟು ಹಾಕಿದ್ದಾರೆ. ಉಳ್ಳಾಲ ರಸ್ತೆ ಮಧ್ಯ ತಳ್ಳಾಟ ನಡೆಸಿದ ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್​ ಮಾಡಿದ್ದಕ್ಕೆ ಪೊಲೀಸರನ್ನೇ ಅಮಾನತು ಮಾಡಿರುವುದರಿಂದ ವಿಡಿಯೋ ಸಾಕ್ಷಿ ಇದ್ದರೂ ಆ್ಯಕ್ಷನ್​ ತೆಗೆದುಕೊಳ್ಳಲಾಗಿಲ್ಲ ಎಂಬ ಮಾತುಗಳೂ ಕೇಳಿಬರುತ್ತಿವೆ.

Leave a Reply

Your email address will not be published. Required fields are marked *

Back To Top