Thursday, 18th January 2018  

Vijayavani

ಹಿರಿಯ ನಟ ನಿರ್ದೇಶಕ ಕಾಶಿನಾಥ್ ಇನ್ನಿಲ್ಲ - ಬೆಂಗಳೂರಿನ ಶಂಕರ ಕ್ಯಾನ್ಸರ್​ ಆಸ್ಪ್ರೆಯಲ್ಲಿ ಕೊನೆಯುಸಿರು- ಕಳಚಿದ ಅನುಭವದ ಕೊಂಡಿ        ಡೈರೆಕ್ಟರ್​ ಎಪಿ ಅರ್ಜುನ್​ ಕಚೇರಿಯಲ್ಲಿ ಕಳ್ಳತನ - ಯಶ್​ ಬರ್ತಡೇ ದಿನ ಕೃತ್ಯ - ಮಾಜಿ ಕಾರು ಡ್ರೈವರ್ ವಿರುದ್ಧ ಅನುಮಾನದ ಹುತ್ತ         ಒಂಟಿ ಮಹಿಳೆಗೆ ಜಡೆ ಹಿಡಿದು ಥಳಿತ - ಕೊಪ್ಪಳ ಬಸ್​ಸ್ಟಾಪ್​ನಲ್ಲಿ ಪುರುಷರ ಅಟ್ಟಹಾಸ - ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್         ನೈಂಟಿ ಕೊಡ್ತೇವೆ ಅಂತ ಹರಕೆ ಹೊರ್ತಾರೆ ಭಕ್ತರು - ದೇವರ ಹೆಸರಲ್ಲಿ ಸಾಮೂಹಿಕ ಮದ್ಯಾರಾಧನೆ - ಕುಣಿಗಲ್‍ನ ಒಡೇಭೈರವನಿಗೆ ಬ್ರಾಂದಿ ವಿಸ್ಕಿಯೇ ನೈವೇದ್ಯ        ಕೃಷ್ಣನಗರಿಯಲ್ಲಿ ಪರ್ಯಾಯ ಸಂಭ್ರಮ - ಕೃಷ್ಣಪೂಜೆ ನೆರವೇರಿಸಿದ ಪಲಿಮಾರು ಶ್ರೀಗಳು - ಅದ್ಧೂರಿಯಿಂದ ಸರ್ವಜ್ಞ ಪೀಠಾರೋಹಣ       
Breaking News :

ಪರೇಶ್ ಮೇಸ್ತಾ ಸಾವು ಪ್ರಕರಣ: ಬಿಜೆಪಿ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

Tuesday, 12.12.2017, 4:57 PM       No Comments

<< ಸರಿಯಾದ ಕ್ರಮಕೈಗೊಳ್ಳದ ಸರ್ಕಾರದ ವಿರುದ್ಧವೂ ಗುಡುಗಿದ ಕುಮಾರಸ್ವಾಮಿ >>

ಬೆಂಗಳೂರು: ಹೊನ್ನಾವರದ ಪರೇಶ್ ಮೇಸ್ತಾ ಸಾವು ಪ್ರಕರಣ ಕುಮಟಾದಲ್ಲಿ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿಯ ಬಗ್ಗೆ ದಿಗ್ವಿಜಯ ನ್ಯೂಸ್​ಗೆ ಹೇಳಿಕೆ ನೀಡಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್​.ಡಿ.ಕುಮಾರಸ್ವಾಮಿ ಅವರು ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.

ಪರೇಸ್ ಮೇಸ್ತಾ ಸಾವಿನ ಬಗ್ಗೆ ಮರಣೋತ್ತರ ಪರೀಕ್ಷೆ ವರದಿ ಬಂದಿದೆ. ದೈಹಿಕವಾಗಿ ಹಲ್ಲೆಯಾಗಿಲ್ಲ ಎಂದು ವರದಿ ನೀಡಿದ್ದಾರೆ. ಅಪಘಾತದಿಂದ ಮೃತಪಟ್ಟಿದನ್ನ ಬಿಜೆಪಿ ಅವರು ಕೊಲೆ ಎಂದು ಹೇಳುತ್ತಾರೆ. ನನ್ನ ಪಕ್ಷದ 8 ಮಂದಿ ಸಾವನ್ನಪ್ಪಿದ್ದಾರೆ. ಮೊನ್ನೆ ಗೋವಿಂದೇಗೌಡರ ಕೊಲೆಯಾಗಿದೆ. ಬಸ್​ ಹಾಗೂ ಅಂಗಡಿಗಳಿಗೆ ಬೆಂಕಿ ಹಾಕಿ ಎಂದು ನಾನು ಕಾರ್ಯಕರ್ತರಿಗೆ ಹೇಳ್ಲಾ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದರು.

ಬಿಜೆಪಿ ನಾಯಕರಿಗೆ ಜವಾಬ್ದಾರಿ ಇರಬೇಕು. ನೈಜತೆ ಏನೆಂದು ತಿಳಿದು ಮಾಹಿತಿ ಪಡೆಯಬೇಕು. ಅದು ಬಿಟ್ಟು ಬೆಂಕಿ ಇಡಿಸುವಂಥ ಕೆಲಸ ಮಾಡಬಾರದು. ಇದರಿಂದ ರಾಜಕೀಯದಲ್ಲಿ ಮೇಲೆ ಬರಲು ಸಾಧ್ಯವಿಲ್ಲ ಎಂದು ಬಿಜೆಪಿ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ಈ ಸರ್ಕಾರಕ್ಕೆ ಇದನ್ನು ನಿಯಂತ್ರಿಸಬೇಕೆಂಬ ಜವಾಬ್ದಾರಿ ಇಲ್ಲ. ಇಂತಹ ಸಮಯದಲ್ಲಿ ಸರ್ಕಾರ 24 ಗಂಟೆಯಲ್ಲಿ ಕಠಿಣ ಕ್ರಮ ತೆಗೆದುಕೊಂಡು ನಿಯಂತ್ರಿಸಬೇಕು. ಸಿಎಂ ಬೃಹದಾಕಾರ ಜಾಹೀರಾತು ನೀಡುವ ಮೊದಲು ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲಿ. ಆನಂತರ ಪ್ರವಾಸ ಹೋಗಲಿ. ರಾಜ್ಯ ಸುತ್ತುವ ಮೊದಲು ಈ ಬಗ್ಗೆ ಗಮನ ಹರಿಸಿ ಎಂದು ಸಿಎಂ ಪ್ರವಾಸದ ವಿರುದ್ಧ ಎಚ್ ಡಿಕೆ ಕಿಡಿಕಾರಿದರು. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *

Back To Top