Thursday, 18th January 2018  

Vijayavani

ಹಿರಿಯ ನಟ ನಿರ್ದೇಶಕ ಕಾಶಿನಾಥ್ ಇನ್ನಿಲ್ಲ - ಬೆಂಗಳೂರಿನ ಶಂಕರ ಕ್ಯಾನ್ಸರ್​ ಆಸ್ಪ್ರೆಯಲ್ಲಿ ಕೊನೆಯುಸಿರು- ಕಳಚಿದ ಅನುಭವದ ಕೊಂಡಿ        ಡೈರೆಕ್ಟರ್​ ಎಪಿ ಅರ್ಜುನ್​ ಕಚೇರಿಯಲ್ಲಿ ಕಳ್ಳತನ - ಯಶ್​ ಬರ್ತಡೇ ದಿನ ಕೃತ್ಯ - ಮಾಜಿ ಕಾರು ಡ್ರೈವರ್ ವಿರುದ್ಧ ಅನುಮಾನದ ಹುತ್ತ         ಒಂಟಿ ಮಹಿಳೆಗೆ ಜಡೆ ಹಿಡಿದು ಥಳಿತ - ಕೊಪ್ಪಳ ಬಸ್​ಸ್ಟಾಪ್​ನಲ್ಲಿ ಪುರುಷರ ಅಟ್ಟಹಾಸ - ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್         ನೈಂಟಿ ಕೊಡ್ತೇವೆ ಅಂತ ಹರಕೆ ಹೊರ್ತಾರೆ ಭಕ್ತರು - ದೇವರ ಹೆಸರಲ್ಲಿ ಸಾಮೂಹಿಕ ಮದ್ಯಾರಾಧನೆ - ಕುಣಿಗಲ್‍ನ ಒಡೇಭೈರವನಿಗೆ ಬ್ರಾಂದಿ ವಿಸ್ಕಿಯೇ ನೈವೇದ್ಯ        ಕೃಷ್ಣನಗರಿಯಲ್ಲಿ ಪರ್ಯಾಯ ಸಂಭ್ರಮ - ಕೃಷ್ಣಪೂಜೆ ನೆರವೇರಿಸಿದ ಪಲಿಮಾರು ಶ್ರೀಗಳು - ಅದ್ಧೂರಿಯಿಂದ ಸರ್ವಜ್ಞ ಪೀಠಾರೋಹಣ       
Breaking News :

ಎಚ್‌.ಡಿ. ಕುಮಾರಸ್ವಾಮಿಗೆ ಹುಟ್ಟುಹಬ್ಬದ ಸಂಭ್ರಮ; ಕಿಚ್ಚ ಸುದೀಪ್‌ ಹೇಳಿದ್ದೇನು?

Saturday, 16.12.2017, 8:51 AM       No Comments

ಬೆಂಗಳೂರು: ಜೆಡಿಎಸ್‌ ರಾಧ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಇಂದು 59 ನೇ ಹುಟ್ಟುಹಬ್ಬದ ಸಂಭ್ರಮ.

ಕುಮಾರಸ್ವಾಮಿ ಅವರ ಹುಟ್ಟುಹಬ್ಬಕ್ಕೆ ಕಿಚ್ಚ ಸುದೀಪ್‌ ಶುಭ ಕೋರಿರುವುದು ವಿಶೇಷ ಎನಿಸಿದೆ. ‘ಹ್ಯಾಪಿ ಬರ್ತ್​​​​​​ ಡೇ ಕುಮಾರಣ್ಣ. ನಿಮಗೆ ಆರೋಗ್ಯ ಆಯಸ್ಸು ಜಾಸ್ತಿ ಜಾಸ್ತಿ ಸಿಗಲಿ’ ಎಂದು ವಿಡಿಯೋ ಮೂಲಕ ಸುದೀಪ್‌ ಶುಭಾಶಯ ತಿಳಿಸಿದ್ದಾರೆ.

ಜೆ.ಪಿ.ನಗರದ ನಿವಾಸದಲ್ಲಿ ಅಭಿಮಾನಿಗಳ ಜತೆ ಕೇಕ್‌ ಕತ್ತರಿಸಿ ತಮ್ಮ ಹುಟ್ಟು ಹಬ್ಬವನ್ನು ಎಚ್‌ಡಿಕೆ ಆಚರಿಸಿಕೊಂಡರು. ಎಚ್‌ಡಿಕೆ ಪುತ್ರ ನಿಖಿಲ್‌, ಜೆಡಿಎಸ್‌ ಶಾಸಕರು ಮತ್ತು ಪರಿಷತ್‌ ಸದಸ್ಯರು, ಜೆಡಿಎಸ್‌ ಕಾರ್ಯಕರ್ತರು ಭಾಗವಹಿಸಿ ಕುಮಾರಸ್ವಾಮಿ ಅವರಿಗೆ ಶುಭ ಕೋರಿದರು.

ನಂತರ ಮಾತನಾಡಿದ ಕುಮಾರಸ್ವಾಮಿ, ಕಾರ್ಯಕರ್ತರ ಜತೆ ತನ್ನ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದು ಸಂತಸ ತಂದಿದೆ ಎಂದು ಹೇಳಿದರು.

ದಂಪತಿ ಸಮೇತ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ರಾಜರಾಜೇಶ್ವರಿ ದೇಗುಲಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಈ ವೇಳೆ ದೇವರು ಎಚ್​​ಡಿಕೆಗೆ ಆಯುರಾರೋಗ್ಯ ನೀಡಲಿ, ಎಚ್​​ಡಿಕೆ ಮುಂದಿನ ಬಾರಿ ಸಿಎಂ ಆಗಲಿ ಎಂದು ಅನಿತಾ ಕುಮಾರಸ್ವಾಮಿ ಪ್ರಾರ್ಥನೆ ಸಲ್ಲಿಸಿದರು.

ಬೆಂಗಳೂರಿನ ವಿಜಯನಗರದ ಆದಿಚುಂಚನಗಿರಿ ಶಾಖಾ ಮಠದಲ್ಲಿ  ಡಾ. ನಿರ್ಮಲಾನಂದನಾಥ ಸ್ವಾಮೀಜಿಯನ್ನು ಭೇಟಿ ಮಾಡಿದ ಕುಮಾರಸ್ವಾಮಿ ಅವರು ಸ್ವಾಮೀಜಿಯಿಂದ ಆಶೀರ್ವಾದ ಪಡೆದರು. (ದಿಗ್ವಿಜಯ ನ್ಯೂಸ್‌)

Leave a Reply

Your email address will not be published. Required fields are marked *

Back To Top