Saturday, 26th May 2018  

Vijayavani

ನಾಮಪತ್ರ ವಾಪಸ್ ಪಡೆದ ಸುರೇಶ್​ಕುಮಾರ್​- ಅವಿರೋಧವಾಗಿ ರಮೇಶ್​ಕುಮಾರ್​ ಆಯ್ಕೆ- ಎರಡನೇ ಬಾರಿಗೆ ಸ್ಪೀಕರ್​ ಆಗಿ ನೇಮಕ        ಸದನದಲ್ಲಿ ವಿಶ್ವಾಮತ ಪರೀಕ್ಷೆ- ಮೂರು ಪಕ್ಷಗಳ ಎಲ್ಲಾ ಶಾಸಕರು ಹಾಜರ್​- ಪ್ರತಿಪಕ್ಷ ನಾಯಕನ ಸ್ಥಾನದಲ್ಲಿ ಬಿಎಸ್​ವೈ        ಮೈತ್ರಿ ಸರ್ಕಾರದ ಪರ್ವ ಆರಂಭ- ಸಾಲ ಮನ್ನಾ ಮಾಡ್ತಾರಾ ಎಚ್​ಡಿಕೆ- ಕೊಟ್ಟ ಮಾತು ಉಳಿಸಿಕೊಳ್ತಾರಾ ಕಾಂಗ್ರೆಸ್​ ನಾಯಕರು        ಸಚಿವ ಸ್ಥಾನಕ್ಕಾಗಿ ಲಾಬಿ ಶುರು- ಕೆಪಿಸಿಸಿ ಅಧ್ಯಕ್ಷ ಸ್ಥಾನ, ಗೃಹಖಾತೆಗೆ ಡಿಕೆಶಿ ಪಟ್ಟು- ಹೈಕಮಾಂಡ್ ಭೇಟಿಗೆ ತೆರಳಲಿರುವ ಕೈ ನಾಯಕರು        ಮುಗಿದ ಬಹುಮತ ಸಾಬೀತಿನ ಪರೀಕ್ಷೆ- ಶಾಸಕರ ರೆಸಾರ್ಟ್​ ರಾಜಕೀಯ ಅಂತ್ಯ- ಇನ್ನಾದ್ರೂ ಕ್ಷೇತ್ರಗಳತ್ತ ತೆರಳ್ತಾರಾ ಎಂಎಲ್​ಎಗಳು        ಸಿಎಂಗೆ ಹೊಸ ಕಾರು ನೀಡಿದ ಡಿಪಿಎಆರ್- ಜಿಎ 6363 ಕಾರ್​ ನಂಬರ್​- ಹೊಸ ಕಾರು ಬಳಸಲು ಸಿಎಂ ನಿರ್ಧಾರ       
Breaking News

ಜೆಡಿಎಸ್​ ಚುನಾವಣೆ ರಣತಂತ್ರ: ಕೆಟಗರಿವಾರು ಕಾರ್ಯತಂತ್ರಕ್ಕೆ ಮಣೆ

Wednesday, 06.12.2017, 1:17 PM       No Comments

<< 170 ಕ್ಷೇತ್ರಗಳಲ್ಲಿ ಮಾತ್ರ ಸ್ಪರ್ಧೆಗೆ ಚಿಂತನೆ ; 224 ವಿಧಾನಸಭೆ ಕ್ಷೇತ್ರಗಳನ್ನು 3 ವಿಭಾಗಗಳಾಗಿ ವಿಂಗಡಣೆ >>

ಬೆಂಗಳೂರು: ಮತ್ತೊಮ್ಮೆ ಅಧಿಕಾರದ ಗದ್ದುಗೆಗೇರಲು ಸರ್ವ ಪ್ರಯತ್ನ ನಡೆಸುತ್ತಿರುವ ಜೆಡಿಎಸ್​ ರಾಷ್ಟ್ರೀಯ ಅಧ್ಯಕ್ಷ ಎಚ್​.ಡಿ. ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಅವರು ವಿಧಾನಸಭೆ ಚುನಾವಣೆಗಾಗಿ ರಣತಂತ್ರ ಹೆಣೆಯುತ್ತಿದ್ದಾರೆ.

ಈ ಸಲದ ಚುನಾವಣೆಯಲ್ಲಿ ನಿಖರ ಯೋಜನೆಯೊಂದಿಗೆ ಕಣಕ್ಕಿಳಿಯಲು ಜೆಡಿಎಸ್​ ತೀರ್ಮಾನಿಸಿದೆ. ಇದಕ್ಕಾಗಿ 224 ಕ್ಷೇತ್ರಗಳನ್ನು ವಿವಿಧ ವಿಭಾಗಗಳಾಗಿ ವಿಂಗಡಿಸಿದೆ. ಜತೆಗೆ ಹಣ ಮತ್ತು ಸಮಯ ವ್ಯರ್ಥವಾಗದಂತೆ ಕೇವಲ 170 ಕ್ಷೇತ್ರಗಳಲ್ಲಿ ಮಾತ್ರ ಸ್ಪರ್ಧಿಸಲು ಜೆಡಿಎಸ್ ಯೋಜನೆ ಸಿದ್ಧಪಡಿಸಿದೆ.

ಹಳೇ ಮೈಸೂರು (ಎ ಕೆಟಗರಿ), ಉತ್ತರ ಕರ್ನಾಟಕ (ಬಿ ಕೆಟಗರಿ) ಮತ್ತು ಕರಾವಳಿ (ಸಿ ಕೆಟಗರಿ) ಭಾಗಗಳ ಕ್ಷೇತ್ರಗಳನ್ನು ವಿಂಗಡಿಸಿದೆ. ಎ ಕೆಟಗರಿಯಲ್ಲಿ 80 ಕ್ಷೇತ್ರಗಳು, ಬಿ ಕೆಟಗರಿಯಲ್ಲಿ 90 ಕ್ಷೇತ್ರಗಳು ಮತ್ತು ಸಿ ಕೆಟಗರಿಯಲ್ಲಿ 54 ಕ್ಷೇತ್ರಗಳನ್ನು ಗುರುತಿಸಲಾಗಿದೆ.

ಅದರಲ್ಲಿ ಜೆಡಿಎಸ್​ ಪ್ರಾಬಲ್ಯವಿರುವ ಹಳೇ ಮೈಸೂರು ಮತ್ತು ಮಧ್ಯ ಕರ್ನಾಟಕಕ್ಕೆ ಹೆಚ್ಚಿನ ಗಮನ ನೀಡಲು ನಿರ್ಧರಿಸಿದ್ದು, ಈಗಾಗಲೇ 60 ಅಭ್ಯರ್ಥಿಗಳಿಗೆ ತಮ್ಮ ಕ್ಷೇತ್ರಗಳಲ್ಲಿ ಕೆಲಸ ಪ್ರಾರಂಭಿಸುವಂತೆ ಎಚ್​ಡಿಕೆ ಮೌಖಿಕವಾಗಿ ಸೂಚಿಸಿದ್ದಾರೆ.

ಬಿ ಕೆಟಗರಿಯ ಕ್ಷೇತ್ರಗಳ ಉಸ್ತುವಾರಿಯನ್ನು 2ನೇ ಹಂತದ ನಾಯಕರಿಗೆ ನೀಡಲಾಗಿದೆ. ಇದೇ ಸಂದರ್ಭದಲ್ಲಿ ಸಿ ಕೆಟಗರಿಯ ಕ್ಷೇತ್ರಗಳಲ್ಲಿ ತಳಮಟ್ಟದಿಂದ ಪಕ್ಷ ಸಂಘಟನೆ ಮಾಡಲು ಜೆಡಿಎಸ್​ ಗಮನ ಹರಿಸಲಿದೆ ಎಂದು ತಿಳಿದು ಬಂದಿದೆ. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *

Back To Top