Tuesday, 17th July 2018  

Vijayavani

ಕಾಂಗ್ರೆಸ್‌ ಕಿರುಕುಳದಿಂದಲೇ ಸಿಎಂ ಕಣ್ಣೀರು - ಕಾಂಗ್ರೆಸ್‌ ನೆಚ್ಚಿಕೊಂಡು ಹೋದ್ರೆ ಇದೇ ಸ್ಥಿತಿ - ಎಚ್​ಡಿಕೆ  ಕಣ್ಣೀರಿಗೆ ಜೇಟ್ಲಿ ಟಾಂಗ್‌        ವಾಣಿಜ್ಯ ಬ್ಯಾಂಕ್‌ನಲ್ಲಿನ ಚಾಲ್ತಿ ಸಾಲವೂ ಮನ್ನಾ - ಸಿಎಂ ನಿರ್ಧಾರ - ರೈತರಿಗೆ ಮತ್ತೊಂದು ಕೊಡುಗೆ ನೀಡಿದ ಮುಖ್ಯಮಂತ್ರಿ        ಟ್ರಾಫಿಕ್ ನಿಯಮ ಉಲ್ಲಂಘಿಸಿದ್ದ ಶಾಸಕರ ಪುತ್ರ - ಪ್ರಶ್ನಿಸಿದ ಪೇದೆಗೆ ಅವಾಚ್ಯ ಶಬ್ದಗಳಿಂದ ನಿಂದನೆ        ಬಂಗಾಳದಲ್ಲಿ ಮೋದಿ ರ್ಯಾಲಿ ವೇಳೆ ಅವಗಢ - ಪೆಂಡಾಲ್ ಕುಸಿದು 22 ಜನರಿಗೆ ಗಾಯ - ಆರೋಗ್ಯ ವಿಚಾರಿಸಿದ ಪ್ರಧಾನಿ ನಮೋ        ಕರಾವಳಿಯಲ್ಲಿ ಭಾರಿ ಮಳೆಯ ಅವಾಂತರ - ಕುಸಿದುಬಿತ್ತು ಭಟ್ಕಳದ ಬಸ್ ನಿಲ್ದಾಣ - ಹೊರ ಓಡಿದ ಪ್ರಯಾಣಿಕರು        ಕೆಆರ್​​ಎಸ್​​​ನಿಂದ ಭಾರಿ ಪ್ರಮಾಣದ ನೀರು - ರಂಗನತಿಟ್ಟು ಪಕ್ಷಿಧಾಮ ಸಂಪೂರ್ಣ ಮುಳುಗಡೆ - ಧುಮ್ಮಿಕ್ಕುತ್ತಿದೆ ಹೊಗೇನಕಲ್ ಫಾಲ್ಸ್       
Breaking News

ನ್ಯಾಯಮೂರ್ತಿ ಸದಾಶಿವ ವರದಿ ಜಾರಿಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಅಹೋರಾತ್ರಿ ಧರಣಿ

Sunday, 14.01.2018, 8:56 AM       No Comments

ಬೆಂಗಳೂರು: ಆದಿ ಕರ್ನಾಟಕ ವರ್ಗಕ್ಕೆ ಮಿಸಲಾತಿಯಲ್ಲಿ ಅನ್ಯಾಯವಾಗುತ್ತಿರುವುದನ್ನು ವಿರೋಧಿಸಿ ದಲಿತ ಸಂಘರ್ಷ ಸಮಿತಿ ಅಹೋರಾತ್ರಿ ಧರಣಿ ನಡೆಸಿದೆ.

ಇಲ್ಲಿನ ಮೌರ್ಯ ಸರ್ಕಲ್​​​ನಲ್ಲಿ ಧರಣಿ ನಡೆಸಿದ ಸಮಿತಿ, ರಾಜ್ಯ ಸರ್ಕಾರ ಕೂಡಲೇ ನ್ಯಾಯಮೂರ್ತಿ ಸದಾಶಿವ ವರದಿಯನ್ನು ಯಥಾವತ್ತಾಗಿ ಜಾರಿ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕು ಹಾಗೂ ಆದಿ ಕರ್ನಾಟಕ ವರ್ಗಕ್ಕೆ ನ್ಯಾಯ ದೊರಕಿಸಿಕೊಡಬೇಕು ಎಂದು ಆಗ್ರಹಿಸಿದ್ದಾರೆ.

ಪರಿಶಿಷ್ಟ ಜಾತಿಯಲ್ಲಿ ಲಂಬಾಣಿ, ಭೋವಿ ಸೇರಿದಂತೆ ಕೆಲವು ಜಾತಿಗಳು ಜನಸಂಖ್ಯೆಯಲ್ಲಿ ಶೇಕಡಾ ಮೂರರಷ್ಟು ಇದ್ದಾರೆ. ಆದರೆ, ಮೀಸಲಾತಿಯಲ್ಲಿ ಶೇಕಡಾ 12ರಷ್ಟು ಅವರೇ ಬಳಸಿಕೊಳ್ಳುತ್ತಿದ್ದಾಋಎ. ಹೀಗಾಗಿ ಆದಿ ಕರ್ನಾಟಕ ವರ್ಗಕ್ಕೆ ತಲತಲಾಂತದಿಂದ ಅನ್ಯಾಯವಾಗುತ್ತಿದೆ. ಸರ್ಕಾರ ಶೀಘ್ರವಾಗಿ ಈ ಕುರಿತು ಕ್ರಮ ಕೈಗೊಳ್ಳ ಬೇಕು ಎಂದಿದ್ದಾರೆ. (ದಿಗ್ವಿಜಯ ನ್ಯೂಸ್)

Leave a Reply

Your email address will not be published. Required fields are marked *

Back To Top