Monday, 23rd October 2017  

Vijayavani

1. ಲಿಂಗಾಯತರು ಹಿಂದೂಗಳಲ್ಲ ಹೇಳಿಕೆ – ಜಾಮದಾರ್​ಗೆ ಕನೇರಿ ಮಠದ ಶ್ರೀ ತಿರುಗೇಟು – ಬಹಿರಂಗ ಚರ್ಚೆಗೆ ಕಾಡಸಿದ್ದೇಶ್ವರ ಸ್ವಾಮಿಗಳ ಆಹ್ವಾನ 2. ರಾಜ್ಯ ಕಾಂಗ್ರೆಸ್​ನಲ್ಲಿ ಭುಗಿಲೆದ್ದ ಭಿನ್ನಾಭಿಪ್ರಾಯ – ಸಿದ್ದು, ಪರಂ, ಡಿಕೆಶಿ ದೂರ ದೂರ – ಹೈಕಮಾಂಡ್​ ಸಾಮೂಹಿಕ ಜಪ, ನಾಯಕರು ಸಪರೇಟ್​ ರೂಪ 3. ಧಾರವಾಡದಲ್ಲಿ ಸರ್ಕಾರದ ಸಾಧನಾ ಸಮಾವೇಶ – ಜನರ ತೆರಿಗೆ ದುಡ್ಡಲ್ಲಿ ಕಾಂಗ್ರೆಸ್‌ ಪಕ್ಷಕ್ಕೂ ಪ್ರಚಾರ – ಬೆನ್ನುತಟ್ಟಿಕೊಳ್ಳೋ ಸಮಾವೇಶಕ್ಕೆ ಪಿಡಿಓಗಳೂ ದುರ್ಬಳಕೆ 4. ನಟ ವಿಜಯ್ ಬೆಂಬಲಕ್ಕೆ ನಿಂತ ತಲೈವಾ – ಮೆರ್ಸಲ್‌ ಸಿನಿಮಾದ ಬಗ್ಗೆ ಮೆಚ್ಚುಗೆಯ ಟ್ವೀಟ್ – ವಿವಾದಾತ್ಮಕ ವಿಷಯಗಳಿಗೂ ರಜನಿಕಾಂತ್ ಪರೋಕ್ಷ ಶ್ಲಾಘನೆ 5. ಚುನಾವಣಾ ಹೊಸ್ತಿಲಲ್ಲಿ ಬಿಜೆಪಿಗೆ ಬಿಗ್​ ಶಾಕ್​ – ಬಿಜೆಪಿಗೆ ಸೇರಲು 1 ಕೋಟಿ ರೂ ಆಮೀಷ – ಹಾರ್ದಿಕ್​ ಪಟೇಲ್​ ಸಂಗಡಿಗನ ಗಂಭೀರ ಆರೋಪ
Breaking News :

ಬ್ಯಾಂಕ್​ಗಳಲ್ಲಿ ಕನ್ನಡ ರಾಜ್ಯೋತ್ಸವ ಕಡ್ಡಾಯ: ಚಾಮರಾಜನಗರ ಜಿಲ್ಲಾಧಿಕಾರಿ ಆದೇಶ

Sunday, 30.07.2017, 4:20 PM       No Comments

ಚಾಮರಾಜನಗರ: ಜಿಲ್ಲೆಯ ರಾಷ್ಟ್ರೀಕೃತ ಬ್ಯಾಂಕ್ ಸೇರಿದಂತೆ ಎಲ್ಲಾ ಬ್ಯಾಂಕ್​ಗಳಲ್ಲೂ ಕನ್ನಡ ರಾಜ್ಯೋತ್ಸವ ಆಚರಣೆಯನ್ನು ಕಡ್ಡಾಯವಾಗಿ ಮಾಡಬೇಕು ಎಂದು ಪ್ರಭಾರ ಜಿಲ್ಲಾಧಿಕಾರಿ ಡಾ. ಕೆ.ಹರೀಶ್‌ ಕುಮಾರ್ ಆದೇಶ ಹೊರಡಿಸಿದ್ದಾರೆ.

ಒಂದು ವೇಳೆ ಕನ್ನಡ ರಾಜ್ಯೋತ್ಸವ ಆಚರಿಸದಿದ್ದಾರೆ ಶಿಸ್ತು ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಅಲ್ಲದೆ ಬ್ಯಾಂಕ್​ನಲ್ಲಿ ಒಬ್ಬ ಕನ್ನಡ ಭಾಷೆಯ ಹಿಡಿತಯುಳ್ಳ ಅಧಿಕಾರಿಯನ್ನು ನೇಮಕ ಮಾಡುವಂತೆ ಅವರು ಆದೇಶಿದ್ದಾರೆ.

ಬ್ಯಾಂಕ್​ಗಳಲ್ಲಿ ಕನ್ನಡ ಭಾಷೆಯ ಬಳಕೆ ಸರಿಯಾಗಿ ಇಲ್ಲದ ಕಾರಣ ರೈತರಿಗೆ ಹಾಗೂ ಜನ ಸಾಮಾನ್ಯರಿಗೆ ತೊಂದರೆಯಾಗುತ್ತಿದೆ. ಹೀಗಾಗಿ ಪ್ರತಿಯೊಂದು ಬ್ಯಾಂಕ್​ನಲ್ಲೂ ಕಡ್ಡಾಯವಾಗಿ ಕನ್ನಡ ಭಾಷೆ ಬಲ್ಲ ಅಧಿಕಾರಿಯನ್ನು ರೈತರ ಹಾಗೂ ಜನರ ಸಹಾಯಕ್ಕೆ ನೇಮಕ ಮಾಡಬೇಕು. ಈ ಮೂಲಕ ಬ್ಯಾಂಕ್ ವ್ಯಾವಹಾರವನ್ನು ಜನರಿಗೆ ಅರ್ಥೈಹಿಸಬೇಕು ಎಂದು ನಿರ್ದೇಶನ ನೀಡಿದ್ದಾರೆ.

ದಿಟ್ಟ ಹೆಜ್ಜೆ ಇಟ್ಟಿರುವ ಜಿಲ್ಲಾಧಿಕಾರಿಗಳ ನಿರ್ಧಾರಕ್ಕೆ ಚಾಮರಾಜನಗರ ಜಿಲ್ಲೆಯ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *

Back To Top