Sunday, 23rd September 2018  

Vijayavani

ಜಿಮ್​ ತರಬೇತುದಾರನ ಅಪಹರಣ ಮತ್ತು ಹಲ್ಲೆ ಪ್ರಕರಣದಲ್ಲಿ ನಟ ದುನಿಯಾ ವಿಜಯ್​ ಬಂಧನ.        ವಿಧಾನ ಪರಿಷತ್​​ 3 ಸ್ಥಾನಗಳಿಗೆ ಚುನಾವಣೆ: ನಾಮಪತ್ರ ಸಲ್ಲಿಕೆಗೆ ನಾಳೆ ಕೊನೆ ದಿನ, ಬಿಜೆಪಿ ಪಟ್ಟಿ ಇಂದು ಅಂತಿಮ        ಮೋದಿ ಕಳ್ಳ ಎಂದಿದ್ದ ರಾಹುಲ್​ ವಿರುದ್ಧ ನಿರ್ಮಲಾ ಗುಡುಗು: ರಾಹುಲ್​ ಅವರದ್ದು ಕಳ್ಳರ ಕುಟುಂಬ ಎಂದ ಸಚಿವೆ        ಹಾಸನದಲ್ಲಿ ಇಂದು ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ ಮುಖ್ಯಮಂತ್ರಿ ಎಚ್​ಡಿಕೆ       
Breaking News

ಚುನಾವಣಾ ಪ್ರಚಾರ: 8 ಬಾರಿ ರಾಜ್ಯಕ್ಕೆ ಬರಲಿರುವ ರಾಹುಲ್ ಗಾಂಧಿ

Saturday, 14.04.2018, 10:27 AM       No Comments

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರಲು ಆಡಳಿತಾರೂಢ ಕಾಂಗ್ರೆಸ್ ಪಕ್ಷ ಸರ್ವ ಪ್ರಯತ್ನ ನಡೆಸುತ್ತಿದ್ದು, ಚುನಾವಣಾ ಪ್ರಚಾರಕ್ಕಾಗಿ ಎಐಸಿಸಿ ಅಧ್ಯಕ್ಷ ರಾಹುಲ್​ ಗಾಂಧಿ ಅವರನ್ನು 8 ಬಾರಿ ರಾಜ್ಯಕ್ಕೆ ಕರೆ ತರಲು ಯೋಜನೆ ರೂಪಿಸುತ್ತಿದ್ದಾರೆ.

ಟಿಕೆಟ್​ ಹಂಚಿಕೆ ಗೊಂದಲ ಮುಗಿದ ನಂತರ ರಾಹುಲ್​ ಗಾಂಧಿ ಪ್ರವಾಸದ ಕುರಿತು ಅಂತಿಮ ತೀರ್ಮಾನ ತೆಗೆದುಕೊಳ್ಳಲಿದ್ದಾರೆ. ರಾಹುಲ್​ ಒಂದು ತಿಂಗಳ ಅಂತರದಲ್ಲಿ 8 ಬಾರಿ ಆಗಮಿಸಲಿದ್ದಾರೆ. ಈ ಸಂದರ್ಭದಲ್ಲಿ ರೂಡ್​ ಶೋ ಮಾಡಬೇಕಾ ಅಥವಾ ಬಹಿರಂಗ ಸಮಾವೇಶದಲ್ಲಿ ಭಾಗವಹಿಸಬೇಕೆ ಎಂಬುದರ ಕುರಿತು ಗೊಂದಲ ಏರ್ಪಟ್ಟಿದೆ.

ಹಾಗಾಗಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್​ ಹಾಗೂ ಸಚಿವ ಡಿ.ಕೆ. ಶಿವಕುಮಾರ್​ ಅವರು ಈ ಕುರಿತು ರಾಹುಲ್​ ಜತೆಗೆ ಚರ್ಚೆ ನಡೆಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದ್ದಾರೆ. ಭಾನುವಾರ ರಾಹುಲ್​ ಪ್ರವಾಸದ ಪಟ್ಟಿ ಅಂತಿಮವಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

Back To Top