Wednesday, 24th October 2018  

Vijayavani

ರಂಗೇರಿದ ಉಪ ಚುನಾವಣಾ ಕಣ-ಜಮಖಂಡಿಯಲ್ಲಿಂದು ಬಿಎಸ್ ವೈ ಮತಬೇಟೆ-ಸಕ್ಕರೆ ನಾಡು ಮಂಡ್ಯದಲ್ಲಿಂದು ಸಿದ್ದರಾಮಯ್ಯ ಪ್ರಚಾರ        ದೀಪಾವಳಿಯಿಂದ ಲೋಡ್​ ಶೆಡ್ಡಿಂಗ್-ಇಂಧನ ಇಲಾಖೆ ಅಧಿಕಾರಿಗಳ ಜತೆ ಸಿಎಂ ಸಭೆ-ಕತ್ತಲಲ್ಲಿ ಮುಳುಗುತ್ತಾ ಕರ್ನಾಟಕ..?        ಸಾಲಮನ್ನಾವೂ ಇಲ್ಲ, ಬೆಲೆಯೂ ಇಲ್ಲ-ಬೆವರು ಸುರಿಸಿ ಬೆಳೆದ ಬೆಳೆ ಕೇಳೋರೂ ಇಲ್ಲ-ಅನ್ನದಾತನಿಗೆ ಕಣ್ಣೀರು ತರಿಸುತ್ತಿದೆ ಈರುಳ್ಳಿ        ಬೆಂಗಳೂರಲ್ಲಿ ಅನಧಿಕೃತ ಬಿಟ್ ಕಾಯಿನ್ ATM-ಆರೋಪಿ ಹರೀಶ್ ಬಂಧನ-ಕೆಂಪ್ ಫೋರ್ಟ್​ನಲ್ಲಿದ್ದ ಎಟಿಎಂ ಪೊಲೀಸರ ವಶಕ್ಕೆ        ಕೊಳ್ಳೆಗಾಲದಲ್ಲಿ 17 ವರ್ಷಗಳಿಂದ ಕಾಮಗಾರಿ ಅಪೂರ್ಣ-ಇನ್ನೂ ಆಗಿಲ್ಲ ವಾಲ್ಮೀಕಿ ಭವನ ನಿರ್ಮಾಣ-ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ        ವಿಜಯಪುರದಲ್ಲಿ ಗಂಗಾಕಲ್ಯಾಣ ಗೋಲ್ಮಾಲ್-ಫಲಾನುಭವಿಗಳಿಗೆ ಸಿಗದ ಬೋರ್ ವೇಲ್ ಸೌಲಭ್ಯ-ಯಾರದ್ದೋ ಹೆಸರಲ್ಲಿ ಅನುದಾನ ನೀಡಿದ ಅಧಿಕಾರಿಗಳು       
Breaking News

ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1.86 ಕೋಟಿ ರೂ. ಜಪ್ತಿ

Thursday, 12.04.2018, 7:59 AM       No Comments

ಬೀದರ್​: ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣಗಳೂ ಸಹ ಹೆಚ್ಚುತ್ತಿದ್ದು. ಬೀದರ್​ನಲ್ಲಿ ದಾಖಲೆಯಿಲ್ಲದೆ ಸಾಗಿಸಲಾಗುತ್ತಿದ್ದ 1.86 ಕೋಟಿ ರೂ. ಹಣವನ್ನು ಜಪ್ತಿ ಮಾಡಲಾಗಿದೆ.

ಬೀದರ್​ನ ಭಂಗೂರ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಥಾಪಿಸಲಾಗಿರುವ ಚೆಕ್​ಪೋಸ್ಟ್​ನಲ್ಲಿ ವಾಹನಗಳ ತಪಾಸಣೆ ನಡೆಸುತ್ತಿದ್ದ ಸಂದರ್ಭದಲ್ಲಿ ಕಾರಿನಲ್ಲಿ 1.86 ಕೋಟಿ ರೂ. ಪತ್ತೆಯಾಗಿದೆ. ಈ ಹಣವನ್ನು ಹೈದರಾಬಾದ್​ನಿಂದ ಕಲಬುರಗಿಗೆ ಸಾಗಿಸಲಾಗುತ್ತಿತ್ತು ಎಂದು ತಿಳಿದು ಬಂದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಚುನಾವಣಾಧಿಕಾರಿ ಡಾ. ಎಚ್​.ಆರ್​. ಮಹಾದೇವ ಅವರು ವಿಚಾರಣೆ ನಡೆಸಿದ್ದು, ಇಬ್ಬರನ್ನು ವಶಕ್ಕೆ ಪಡೆದು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಬೆಳಗಾವಿಯಲ್ಲೂ ಸಹ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 6.53 ಲಕ್ಷ ರೂ. ಹಣವನ್ನು ಜಪ್ತಿ ಮಾಡಲಾಗಿದೆ. ಗೋವಾದಿಂದ ಬೆಳಗಾವಿಗೆ ಬರುತ್ತಿದ್ದ ವಾಹನದಲ್ಲಿ ಹಣವನ್ನು ಅಡಗಿಸಿ ಇಡಲಾಗಿತ್ತು.

 

Leave a Reply

Your email address will not be published. Required fields are marked *

Back To Top