Friday, 21st September 2018  

Vijayavani

ಸಿಎಂ ‘ದಂಗೆ’ ಹೇಳಿಕೆ ವಿರುದ್ಧ ಕೇಸರಿ ಗುಟುರು - ಡಿಜಿಪಿ ನೀಲಮಣಿ ರಾಜುಗೆ ಬಿಜೆಪಿ ದೂರು - ಸಂಜೆ 4.30ಕ್ಕೆ ಗವರ್ನರ್ ಭೇಟಿ​​​​        ರಾಜ್ಯಾದ್ಯಂತ ಭುಗಿಲೆದ್ದ ‘ದಂಗೆ’ ಉರಿ - ಕಲಬುರಗಿ, ಮಂಡ್ಯ, ಧಾರವಾಡ, ಕೊಡಗಿನಲ್ಲಿ ದಳ್ಳುರಿ        ಬ್ರದರ್ಸ್​​ ತಂಟೆಗೆ ಹೋಗ್ಬೇಡಿ, ವಿವಾದಾತ್ಮಕ ಹೇಳಿಕೆ ಕೊಡ್ಬೇಡಿ - ಸಾಫ್ಟ್​ ಪಾಲಿಟಿಕ್ಸ್ ಬಗ್ಗೆ ಡಿಕೆಶಿಗೆ ಸಿದ್ದು ಕ್ಲಾಸ್        ಕರ್ನಾಟಕದಲ್ಲಿ ನಮಗೆ ಅಧಿಕಾರ ಬೇಕು - ಇಲ್ದಿದ್ರೆ ಲೋಕಸಭೆ ಚುನಾವಣೆಯಲ್ಲಿ ಕಷ್ಟ ಕಷ್ಟ - ಪರಿಸ್ಥಿತಿ ನಿಭಾಯಿಸಲು ಸಿದ್ದುಗೆ ಸೂಚನೆ        ಜಮ್ಮು-ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ - ಅಪಹರಿಸಿದ್ದ ಮೂವರು ಪೊಲೀಸರ ಹತ್ಯೆಗೈದ ಕಿರಾತಕರು        ಓಡಿಶಾದಲ್ಲಿ ಡೆಯ್ ಚಂಡಮಾರುತದ ಅಬ್ಬರ - ಕಾಲಾಪುರಕ್ಕೆ ನುಗ್ಗಿದ ಡ್ಯಾಮ್ ನೀರು ನುಗ್ಗಿ ಪ್ರವಾಹ - ಬಿರುಗಾಳಿಗೆ ಜನರು ಕಂಗಾಲ್       
Breaking News

ಎಐಎಂಐಎಂ ಪಕ್ಷ ಸ್ಪರ್ಧಿಸಲ್ಲ, ಜೆಡಿಎಸ್​ಗೆ ಬೆಂಬಲ ನೀಡ್ತೇವೆ: ಅಸಾದುದ್ದೀನ್ ಓವೈಸಿ

Monday, 16.04.2018, 3:10 PM       No Comments

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಅಖಿಲ ಭಾರತ ಮಜ್ಲಿಸ್-ಇ-ಇಥೇಹಾದುಲ್ ಮುಸಲ್ಮಿನ್ (ಎಐಎಂಐಎಂ) ಪಕ್ಷ ಸ್ಪರ್ಧಿಸಲ್ಲ. ಬದಲಾಗಿ ಜೆಡಿಎಸ್​ಗೆ ಬೆಂಬಲ ನೀಡೋದಾಗಿ ಪಕ್ಷದ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ತಿಳಿಸಿದ್ದಾರೆ.

ಜೆಡಿಎಸ್​ ಹೆಚ್ಚು ಸ್ಥಾನ ಗೆಲ್ಲುವಂತೆ ನೋಡಿಕೊಳ್ತೇವೆ. ಅಲ್ಲದೆ, ಕುಮಾರಸ್ವಾಮಿ ಈ ಬಾರಿ ಕರ್ನಾಟಕದ ಸಿಎಂ ಆಗಬೇಕೆಂದು ಓವೈಸಿ ಇಂಗಿತ ವ್ಯಕ್ತಪಡಿಸಿದ್ದಾರೆ. ಎರಡು ರಾಷ್ಟ್ರೀಯ ಪಕ್ಷಗಳಿಂದ ರಾಜ್ಯದ ಜನತೆಗೆ ಅನ್ಯಾಯವಾಗಿದೆ. ಹೀಗಾಗಿ ಜೆಡಿಎಸ್‌ಗೆ ಬೆಂಬಲ ನೀಡಲು ನಿರ್ಧಾರ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.

ಈ ಬಗ್ಗೆ ಈಗಾಗಲೇ ಜೆಡಿಎಸ್​ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಜತೆ ಚರ್ಚೆ ನಡೆಸಿರುವುದಾಗಿಯೂ ಓವೈಸಿ ತಿಳಿಸಿದ್ದು, ಓವೈಸಿ ನಿರ್ಧಾರವನ್ನು ಕುಮಾರಸ್ವಾಮಿ ಅವರು ಸ್ವಾಗತಿಸಿದ್ದಾರೆ.

ಓವೈಸಿ ಬೆಂಬಲದಿಂದ ನಮ್ಮ ಪಕ್ಷಕ್ಕೆ ಶಕ್ತಿ ಬಂದಿದೆ
ಅಸಾದುದ್ದೀನ್​ ಓವೈಸಿ ತಾತ್ವಿಕ ಹಿನ್ನೆಲೆಯಲ್ಲಿ ಹೋರಾಟ ಮಾಡ್ತಾರೆ. ರಾಜ್ಯದಲ್ಲಿ ಜೆಡಿಎಸ್​ ಪರ ಪ್ರಚಾರಕ್ಕೆ ಬರೋದಾಗಿ ಹೇಳಿದ್ದಾರೆ. ಓವೈಸಿ ಹಿಂದುಗಳ ಬಗ್ಗೆ ಅಗೌರವ ತೋರುವ ವ್ಯಕ್ತಿ ಅಲ್ಲ. ಅಲ್ಪಸಂಖ್ಯಾತರಿಗೆ ಅನ್ಯಾಯ ಆದಾಗ ಹೋರಾಟಕ್ಕೆ ಹಿಂಜರಿಯಲ್ಲ ಎಂದು ಓವೈಸಿ ನಿರ್ಧಾರವನ್ನು ಎಚ್.​ ಡಿ. ದೇವೇಗೌಡ ಅವರು ಸ್ವಾಗತಿಸಿದ್ದಾರೆ.

ಕೋಮುವಾದಿ ಬೆಂಬಲ ಪಡೆದ ಜಾತ್ಯತೀತ ಪಕ್ಷ 

ಜಾತ್ಯತೀತ ಪಕ್ಷ ಎಂದು ಹೇಳಿಕೊಳ್ಳುವ ಜೆಡಿಎಸ್‌ನವರು ಕೋಮುವಾದಿಗಳ ಬೆಂಬಲ ಪಡೆಯುತ್ತಿದ್ದಾರೆ ಎಂದು ವಿಧಾನಸಭೆ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಟೀಕಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿ, ಕೋಮುವಾದಿ ಓವೈಸಿ ಬೆಂಬಲ ಪಡೆದಿರುವುದಕ್ಕೆ ಜೆಡಿಎಸ್‌ನವರೇ ಜನರಿಗೆ ಉತ್ತರ ನೀಡಬೇಕು ಎಂದು ಹೇಳಿದರು.

ಬಿಜೆಪಿ ತತ್ತ್ವ ಸಿದ್ಧಾಂತ, ನಾಯಕತ್ವ ಒಪ್ಪಿ ಬರುವವರಿಗೆ ಸ್ವಾಗತವಿದೆ. ಟಿಕೆಟ್ ಕೊಡಿ ಎಂದು ಬರುವವರ ಬಗ್ಗೆ ಹೈಕಮಾಂಡ್ ನಿರ್ಧಾರ ಕೈಗೊಳ್ಳುತ್ತೆ. ಗದಗ, ಧಾರವಾಡದ ಕಾಂಗ್ರೆಸಿಗರು ಬೇಷರತ್ ಬಿಜೆಪಿ ಸೇರಲು ಮುಂದೆ ಬಂದಿದ್ದಾರೆ ಎಂದು ತಿಳಿಸಿದರು.  (ದಿಗ್ವಿಜಯ ನ್ಯೂಸ್​​)

Leave a Reply

Your email address will not be published. Required fields are marked *

Back To Top