Sunday, 18th February 2018  

Vijayavani

ಶಾಸಕ ಹ್ಯಾರಿಸ್ ಪುತ್ರನ ಗೂಂಡಾಗಿರಿ ಕೇಸ್ - ಪ್ರಕರಣ ಸಂಬಂಧ ಐವರು ಅರೆಸ್ಟ್ - ಮಹಮ್ಮದ್‌ ಬಂಧನ ಯಾವಾಗ?        ಮಕ್ಕಳಂದ್ರೆ ಹಿಂಗೆ ಬೆಳಸ್ಪೇಕು ನೋಡಿ - ಹ್ಯಾರಿಸ್‌ ಪುತ್ರನನ್ನು ಹೊಗಳಿದ್ದ ಪ್ರಕಾಶ್ ರೈ - ಘಟನೆ ಬಳಿಕ ಉಲ್ಟಾ ಹೊಡೆದ ನಟ.        ವಿಂದ್ಯಗಿರಿಯಲ್ಲಿ ಮಹಾಮಸ್ತಕಾಭಿಷೇಕ ಸಂಭ್ರಮ - ನಾಳೆ ಮೋದಿಯಿಂದ ಜೈನಮುನಿಗಳಿಗೆ ನಮನ - ಶ್ರವಣಬೆಳಗೊಳದಲ್ಲಿ ಬಿಗಿ ಬಂದೋಬಸ್ತ್.        ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಗುದ್ದಲಿಪೂಜೆ ಗುದ್ದಾಟ - ಸಿಎಂ ಪುತ್ರ ಯತೀಂದ್ರಗೆ ಘೇರಾವ್‌ - ಜೆಡಿಎಸ್‌ ಕಡೆಗಣಿಸಿದ್ದಕ್ಕೆ ಆಕ್ರೋಶ.        ತಮಿಳುನಾಡು ರಾಜಕೀಯದಲ್ಲಿ ಮಹಾಪರ್ವ - ತಲೈವಾ ಭೇಟಿ ಮಾಡಿದ ಕಮಲ್‌ - ಮೈತ್ರಿ ಕುರಿತು ಮಹತ್ವದ ಚರ್ಚೆ.       
Breaking News

ಬೀದರ್​ ತಲುಪಿದ ಧರ್ಮಸಿಂಗ್​ ಪಾರ್ಥಿವ ಶರೀರ

Thursday, 27.07.2017, 8:59 PM       No Comments

ಬೀದರ್​: ಮಾಜಿ ಸಿಎಂ ಧರ್ಮಸಿಂಗ್​ ಅವರ ಮೃತ ದೇಹವನ್ನು ಹೊತ್ತ ವಿಶೇಷ ವಿಮಾನ ಬೀದರ್​ ವಿಮಾನ ನಿಲ್ದಾಣವನ್ನು ತಲುಪಿದೆ.

ವಿಶೇಷ ವಿಮಾನದಲ್ಲಿ ಧರ್ಮಸಿಂಗ್​ ಅವರ ಪತ್ನಿ, ಇಬ್ಬರು ಪುತ್ರರಾದ ಶಾಸಕ ಡಾ. ಅಜಯ್​ ಸಿಂಗ್​, ಪರಿಷತ್​ ಸದಸ್ಯ ವಿಜಯ್​ ಸಿಂಗ್​ ಮತ್ತು ಸಚಿವ ಈಶ್ವರ್​ ಖಂಡ್ರೆ ಆಗಮಿಸಿದರು.

ವಿಮಾನ ನಿಲ್ದಾಣದ ಮುಂಭಾಗದಲ್ಲಿ ಧರ್ಮಸಿಂಗ್​ ಅವರ ಪಾರ್ಥಿವ ಶರೀರದ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಶುಕ್ರವಾರ ಧರ್ಮಸಿಂಗ್​ ಅವರ ಹುಟ್ಟೂರಾದ ನೆಲೋಗಿಯಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ಸಚಿವರಾದ ಶರಣಪ್ರಕಾಶ ಪಾಟೀಲ್​ ಮತ್ತು ಪ್ರಿಯಾಂಕ ಖರ್ಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಶುಕ್ರವಾರ ಮಧ್ಯಾಹ್ನ 1 ಗಂಟೆಗೆ ಜೇವರ್ಗಿಯ ಕ್ರಿಡಾಂಗಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಂತರ ನಾಳೆ ಸಂಜೆ 4 ಗಂಟೆ ಸುಮಾರಿಗೆ ನೆಲೋಗಿಯಲ್ಲಿ ಅಂತ್ಯಸಂಸ್ಕಾರ ನೆರವೇರಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಎಲ್ಲಾ ಸಚಿವರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

(ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *

Back To Top