Friday, 20th October 2017  

Vijayavani

1. ಲಿಂಗಾಯತ ಪ್ರತಿಪಾದಕರಾಗಿದ್ದಕ್ಕೆ ಕಲಬುರ್ಗಿ ಹತ್ಯೆ – ಲಿಂಗಾಯತ ವಿಚಾರ ಬರೆದಿದ್ದಕ್ಕೆ ಗೌರಿ ಲಂಕೇಶ್​ ಕೊಲೆ ಶಂಕೆ – ಬೆಂಗಳೂರಿನಲ್ಲಿ ಜಾಮದಾರ್​ ವಿವಾದಾತ್ಮಕ ಹೇಳಿಕೆ 2. ಬಿಜೆಪಿ ಬಿಟ್ಟು ಕಾಂಗ್ರೆಸ್​ ಸೇರಿದಕ್ಕೆ ಮಾರಣಾಂತಿಕ ಹಲ್ಲೆ – ಮಾಜಿ ಕಾರ್ಪೊರೇಟರ್​ ರವೀಂದ್ರ ವಿರುದ್ಧ ಮಹಿಳೆ ಆರೋಪ – ಗಾಯಾಳುವಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ 3. ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾರಥೋತ್ಸವ – ರಥೋತ್ಸವದ ವೇಳೆ ನೂಕು ನುಗ್ಗಲು – ಭಕ್ತರ ನಿಯಂತ್ರಿಸಲು ಪೊಲೀಸರಿಂದ ಲಾಠಿ ಚಾರ್ಜ್ 4. ಹಾಲಿವುಡ್, ಬಾಲಿವುಡ್​ ಬೇರೆ ಅಲ್ಲ – ಎರಡೂ ಕಡೆ ಲೈಂಗಿಕ ಶೋಷಣೆ ಇದ್ದೆ ಇದೆ – ಸಂದರ್ಶನದಲ್ಲಿ ಸತ್ಯ ತೆರೆದಿಟ್ಟ ಪ್ರಿಯಾಂಕ ಚೋಪ್ರಾ 5. ದೀಪಾವಳಿಗೆ ಪ್ರಧಾನಿ ತಾಯಿ ಫುಲ್ ಖುಷ್​ – ರಾಮನ ಹಾಡಿಗೆ ಸಖತ್ ಸ್ಟೆಪ್ಸ್​ – 97ರ ಹರೆಯದಲ್ಲೂ ಹೀರಾಬೆನ್​ ಜೀವನ ಪ್ರೀತಿ
Breaking News :

ಸಿದ್ದು ಸರ್ಕಾರ ಆರ್ಥಿಕತೆಯಲ್ಲಿ ಫಸ್ಟ್: ಆದ್ರೆ ಪ್ರಗತಿಯಲ್ಲಿ ಲಾಸ್ಟ್

Thursday, 12.10.2017, 9:10 PM       No Comments

ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ಆಡಳಿತಾವಧಿಯಲ್ಲಿ ಕರ್ನಾಟಕವು ಇಡೀ ದಕ್ಷಿಣ ಭಾರತದಲ್ಲೇ ಅತ್ಯಂತ ಕಳಪೆ ಸಾಧನೆ ಮಾಡಿದೆ. ಈ ವಿಷಯ ದಕ್ಷಿಣ ಭಾರತ ಅಭಿವೃದ್ಧಿ ಸೂಚ್ಯಂಕ ವರದಿಯಲ್ಲಿ ಬಹಿರಂಗವಾಗಿದೆ.

ಇಂಡಿಯಾ ಟುಡೆ ಬಿಡುಗಡೆ ಮಾಡಿರುವ ದಕ್ಷಿಣ ಭಾರತ ಅಭಿವೃದ್ಧಿ ಸೂಚ್ಯಂಕದಲ್ಲಿ ಕರ್ನಾಟಕದ ಸಾಧನೆ ಎಲ್ಲಾ ಕ್ಷೇತ್ರಗಳಲ್ಲೂ ಕಳಪೆಯಾಗಿರುವುದು ಬಹಿರಂಗವಾಗಿದೆ. ರಾಜ್ಯದ ಬೊಕ್ಕಸ ತುಂಬಿ ತುಳುಕುತ್ತಿದೆ. ಆದರೆ ಅದರ ಸದುಪಯೋಗ ಮಾಡಿಕೊಳ್ಳುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿರುವುದು ಕಂಡು ಬಂದಿದೆ. ರಾಜ್ಯ ಆರ್ಥಿಕವಾಗಿ ಮೊದಲ ಸ್ಥಾನದಲ್ಲಿದ್ದರೂ ಸಹ ಪ್ರಗತಿಯಲ್ಲಿ ಮಾತ್ರ ಕಳಪೆ ನಿರ್ವಹಣೆ ತೋರಿದೆ.

ರಾಜ್ಯವು ಶಿಕ್ಷಣ, ಆರೋಗ್ಯ, ಕೃಷಿ ಮತ್ತು ಕಾನೂನು ಸುವ್ಯವಸ್ಥೆಯಲ್ಲಿ ಅತ್ಯಂತ ಕಳಪೆ ನಿರ್ವಹಣೆ ತೋರಿದ್ದು, ಕಡೆಯ ಸ್ಥಾನ ಪಡೆದಿದೆ. ಒಟ್ಟು 6 ಕ್ಷೇತ್ರಗಳ ಪೈಕಿ ನಾಲ್ಕರಲ್ಲಿ ಕಡೆಯ ಸ್ಥಾನ ಪಡೆದಿದೆ. ಕರ್ನಾಟಕವು ಕೇರಳ, ತೆಲಂಗಾಣ, ತಮಿಳುನಾಡು ಮತ್ತು ಆಂಧ್ರಪ್ರದೇಶದ ನಂತರದ ಸ್ಥಾನ ಪಡೆದಿದೆ. ಮೂಲ ಸೌಕರ್ಯದಲ್ಲಿ ಸಹ ಕರ್ನಾಟಕ ನಾಲ್ಕನೇ ಸ್ಥಾನಕ್ಕೆ ಕುಸಿದಿರುವುದು ವರದಿಯಿಂದ ತಿಳಿದು ಬಂದಿದೆ.

ಸಿದ್ದು ಸರ್ಕಾರದ ಆಡಳಿತ ಅವಧಿಯಲ್ಲಿ ಜಿಡಿಪಿ ದರ ಶೇ. 7.8 ರಷ್ಟಿದೆ. ಅದೇ ಹಿಂದಿನ ಬಿಜೆಪಿ-ಜೆಡಿಎಸ್​, ಕಾಂಗ್ರೆಸ್-ಜೆಡಿಎಸ್​​ ಆಳ್ವಿಕೆಯಲ್ಲಿ ಜಿಡಿಪಿ ಶೇ. 10.2 ಇತ್ತು ಎಂದು ವರದಿ ಅಂಕಿ ಅಂಶಗಳೊಂದಿಗೆ ತಿಳಿಸಿದೆ. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *

Back To Top