Sunday, 19th August 2018  

Vijayavani

ರಣಚಂಡಿ ಮಳೆಗೆ ಕುಸಿಯುತ್ತಿದೆ ಕೊಡಗು - ಮತ್ತೆ ಜೋರಾಯ್ತು ಮಳೆ ಅಬ್ಬರ - ಮುಕ್ಕೋಡ್ಲು ಗ್ರಾಮದಲ್ಲಿ 80 ಜನರ ರಕ್ಷಣೆ        ಕ್ಷಣ ಕ್ಷಣಕ್ಕೂ ಆತಂಕ, ಬಿರುಕು ಬಿಟ್ಟ ಧರೆ - ಪ್ರವಾಹದಲ್ಲಿ ಕೊಚ್ಚಿ ಹೋಗ್ತಿದೆ ಬೆಟ್ಟ,ಗುಡ್ಡ - ಕಣ್ಮುಂದೆಯೇ ನೆಲಸಮ ವಾಗ್ತಿದೆ ಬದುಕು        ಕೊಡಗಲ್ಲಿ ಇಂದು ಸಿಎಂ ಎಚ್​ಡಿಕೆ ಪ್ರವಾಸ - ಸಂತ್ರಸ್ಥರ ನೋವು ಆಲಿಸಲಿರುವ ಬಿಎಸ್​ವೈ - ನಿರಾಶ್ರಿತರಿಗೆ ನೆರವು ಅಂದ್ರು ರೇವಣ್ಣ        ಸಂತ್ರಸ್ಥರಿಗೆ ಸ್ಯಾಂಡಲ್​ವುಡ್​​​​​​​​​ ನೆರವಿನ ಹಸ್ತ - ಅಗತ್ಯವಸ್ತುಗಳ ಪೂರೈಸಿದ ಸ್ಟಾರ್ಸ್​​​​​​​​​​​ - ಕೈಲಾದ ಸಹಾಯ ಮಾಡ್ತಿದ್ದಾರೆ ಕರುನಾಡ ಜನರು        ಕೇರಳದಲ್ಲಿ ಕಡಿಮೆಯಾಗ್ತಿಲ್ಲ ನೆರೆ ಅಬ್ಬರ - ಸಾವಿನ ಸಂಖ್ಯೆ 357ಕ್ಕೇ ಏರಿಕೆ - ದೇವರನಾಡಿಗೆ ಹರಿದು ಬರ್ತಿದೆ ನೆರವಿನ ಮಹಾಪೂರ        ಭಾರತ - ಇಂಗ್ಲೆಂಡ್​ ನಡುವಿನ 3ನೇ ಟೆಸ್ಟ್​​​​ ಪಂದ್ಯ - ಬೃಹತ್ ಮೊತ್ತದತ್ತ ಟೀಂ ಇಂಡಿಯಾ - ಶತಕದ ಗಡಿಯಲ್ಲಿ ಎಡವಿದ ಕೊಹ್ಲಿ       
Breaking News

ರಾಜ್ಯ ಸರ್ಕಾರದಿಂದ ಸಂತ್ರಸ್ತ ಕೇರಳಕ್ಕೆ 10 ಕೋಟಿ ರೂ. ನೆರವು: ಎಚ್​ಡಿಕೆ

Friday, 10.08.2018, 4:50 PM       No Comments

ಚಿಕ್ಕಬಳ್ಳಾಪುರ: ಭಾರಿ ಮಳೆಯಿಂದ ತತ್ತರಿಸಿರುವ ಕೇರಳಕ್ಕೆ 10 ಕೋಟಿ ರೂ. ನೀಡುವಂತೆ ಮುಖ್ಯ ಕಾರ್ಯದರ್ಶಿಗೆ ಆದೇಶಿಸಿದ್ದೇನೆ ಎಂದು ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಕೆಂಪೇಗೌಡ ಜಯಂತಿಯಲ್ಲಿ ಮಾತನಾಡಿದ ಅವರು, ಕೇರಳದಲ್ಲಿ ಪ್ರವಾಹ ಆಗಿರುವುದರಿಂದ ರಾಜ್ಯದ ಸಿಎಂ ಜತೆ ದೂರವಾಣಿಯಲ್ಲಿ ಅವರೊಂದಿಗೆ ಮಾತನಾಡಿದ್ದೇನೆ. ಪ್ರವಾಹದಲ್ಲಿ ಜನರ ಜೀವನ‌ ಅಸ್ತವ್ಯಸ್ತ ಆಗಿದೆ. ಇಲ್ಲಿಯವರೆಗೂ ಒಂದೂವರೆ ಲಕ್ಷ ಜನರನ್ನು ರಕ್ಷಣೆ ಮಾಡಿದ್ದಾರೆ. ಹಾಗಾಗಿ ನೆರೆ ರಾಜ್ಯಕ್ಕೆ ನಾವು ಸಹಾಯ ಮಾಡಿದ್ದೇವೆ ಎಂದರು.

ಉತ್ತರ ಕರ್ನಾಟಕಕ್ಕೆ ಆದ್ಯತೆ
ಕೆಂಪೇಗೌಡ ಜಯಂತಿಯಲ್ಲಿ ಮಾತನಾಡಿದ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್​, ನಮ್ಮ ಸರ್ಕಾರ ಉತ್ತರ ಕರ್ನಾಟಕಕ್ಕೆ ಹೆಚ್ಚಿನ ಆದ್ಯತೆ ನೀಡಿದೆ. ರಾಜ್ಯದಲ್ಲಿ ತಾರತಮ್ಯ ಮಾಡುವುದಿಲ್ಲ. ನಮ್ಮ ಸರ್ಕಾರನ ನೋಡಿ ಅಸೂಯೆ ಪಡುವವರಿಗೆ ಕಮ್ಮಿ ಇಲ್ಲ. ನಮಗೆ ಅವಕಾಶ ಸಿಗಲಿಲ್ಲ ಅಂತ ಕೆಲವರು ಕೈ ಕೈ ಹಿಸುಕಿಕೊಂಡವರೇ ಹೆಚ್ಚು ಎಂದು ವಿಪಕ್ಷ ನಾಯಕರಿಗೆ ಟಾಂಗ್​ ನೀಡಿದರು. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *

Back To Top