Sunday, 21st January 2018  

Vijayavani

ಬಳ್ಳಾರಿಯಲ್ಲಿ ಮನೆಗೆ ಬಂದ ಜಾಂಬವಂತ- ಚಿರತೆ ಭಯದಿಂದ ತುಮಕೂರಲ್ಲಿ ಮನೆ ಬಿಟ್ಟ ಕುಟುಂಬ- ರಾಜ್ಯದಲ್ಲಿ ಹೆಚ್ಚಿದ ಕಾಡುಪ್ರಾಣಿಗಳ ಉಪಟಳ        ಕೊಳ್ಳೇಗಾಲದಲ್ಲಿ ಬಿಜೆಪಿ ಪರಿವರ್ತನಾ ರ್ಯಾಲಿ- ಮಾದಪ್ಪನ ಬೆಟ್ಟದಲ್ಲಿ ಬಿಎಸ್​ವೈ ವಿಶೇಷ ಪೂಜೆ - ಫ್ಲೆಕ್ಸ್​​ ವಿಚಾರವಾಗಿ ಕಾರ್ಯಕರ್ತರ ಗಲಾಟೆ        ಹೆಲ್ಮೆಟ್​ ಧರಿಸಿ ಬಂದ ಕದೀಮ- ನರ್ಸ್​ ಇರುವಾಗಲೇ ಕ್ಯಾಶ್ ಎಗರಿಸಿದ- ಕುಂದಾಪುರ ಖಾಸಗಿ ಆಸ್ಪತ್ರೆಯಲ್ಲಿ ಹಗಲು ದರೋಡೆ        ದೆಹಲಿ ಅಗ್ನಿ ಅವಘಡದಲ್ಲಿ 17 ಮಂದಿ ಸಜೀವದಹನ- ಪಟಾಕಿ ಕಾರ್ಖಾನೆ ಮಾಲೀಕನ ಬಂಧನ- ಮೃತರಿಗೆ 5 ಲಕ್ಷ ಪರಿಹಾರ (ಕಾರ್ಖಾನೆ ಮಾಲೀಕನ ಬಂಧನ)        ಲಾಲ್​​ಬಾಗ್​ನಲ್ಲಿ ಪುಷ್ಪ ಪ್ರದರ್ಶನ- ಸಸ್ಯಕಾಶಿಗೆ ಹರಿದು ಬಂದ ಜನ- ಲಾಲ್​ಬಾಗ್​ ಸುತ್ತಮುತ್ತ ಭಾರಿ ಟ್ರಾಫಿಕ್​       
Breaking News :

ಹೈದರಾಬಾದ್​ಗೆ ಕೃಪೆ ತೋರದ ವರುಣ, ಕೆಕೆಆರ್​ಗೆ 7 ವಿಕೆಟ್​ಗಳ ಜಯ

Thursday, 18.05.2017, 1:42 AM       No Comments

ಬೆಂಗಳೂರು: ಮಳೆಯಿಂದ ಅಡಚಣೆಗೆ ಒಳಗಾದ ಐಪಿಎಲ್-10 ಎಲಿಮಿನೇಟರ್ ಪಂದ್ಯದಲ್ಲಿ 2 ಬಾರಿಯ ಚಾಂಪಿಯನ್ ಕೋಲ್ಕತ ನೈಟ್ ರೈಡರ್ಸ್ ತಂಡ ಸನ್​ರೈಸರ್ಸ್ ಹೈದರಾಬಾದ್ 7 ವಿಕೆಟ್​ಗಳ ಜಯ ದಾಖಲಿಸಿದೆ.

ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ದುಕೊಂಡ ಕೋಲ್ಕತ ನೈಟ್ ರೈಡರ್ಸ್ ತಂಡ ಬಿಗುವಿನ ಬೌಲಿಂಗ್ ದಾಳಿ ನಡೆಸಿ ಹೈದರಾಬಾದ್ ತಂಡವನ್ನು 128 ರನ್​ಗಳಿಗೆ ಕಟ್ಟಿ ಹಾಕಿತು. ಹೈದರಾಬಾದ್ ಇನಿಂಗ್ಸ್ ಮುಗಿದ ನಂತರ ಮಳೆ ಸುರಿದ ಕಾರಣ ಪಂದ್ಯಕ್ಕೆ ಅಡಚಣೆ ಉಂಟಾಗಿತ್ತು. ಅಂತಿಮವಾಗಿ ಡಕ್ವರ್ತ್ ಲೂಯಿಸ್ ನಿಯಮದ ಅನ್ವಯ ಕೋಲ್ಕತ ನೈಟ್ ರೈಡರ್ಸ್ ತಂಡಕ್ಕೆ 6 ಓವರ್​ಗಳಲ್ಲಿ 48 ರನ್ ಗಳಿಸುವ ಪರಿಷ್ಕೃತ ಗುರಿಯನ್ನು ನೀಡಲಾಗಿತ್ತು. ಗುರಿಯನ್ನು ಬೆನ್ನತ್ತಿದ ಕೋಲ್ಕತ ತಂಡದ ಆರಂಭಿಕ ಬ್ಯಾಟ್ಸ್​ಮನ್​ಗಳು ಬೇಗನೇ ಔಟಾದರು. ಉತ್ತಪ್ಪ (1), ಕ್ರಿಸ್ ಲ್ಯಾನ್ (6) ಮತ್ತು ಯೂಸುಫ್ ಪಠಾಣ್ (0) ವಿಫಲರಾದರು. ಈ ಹಂತದಲ್ಲಿ ತಂಡದ ನಾಯಕ ಗೌತಮ್ ಗಂಭೀರ್ (32*) ಜವಾಬ್ದಾರಿಯುತ ಆಟ ಪ್ರದರ್ಶಿಸಿ ತಂಡಕ್ಕೆ ಗೆಲುವು ತಂದು ಕೊಟ್ಟರು. ಗಂಭೀರ್​ಗೆ ಇಶಾಂಕ್ ಜಗ್ಗಿ (5*) ಉತ್ತಮ ಸಾಥ್ ನೀಡಿದರು.

ಕೋಲ್ಕತ ನೈಟ್ ರೈಡರ್ಸ್ ತಂಡ ಶುಕ್ರವಾರ ಬೆಂಗಳೂರಿನಲ್ಲಿ ನಡೆಯಲಿರುವ ಕ್ವಾಲಿಫೈಯರ್-2 ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಲಿದೆ.

ರನ್​ಗೆ ಪರದಾಡಿದ ಸನ್​ರೈಸರ್ಸ್

– ಏಜೆನ್ಸೀಸ್

(ವೈವಿಧ್ಯಮಯ ಸುದ್ದಿಗಳಿಗೆ ವಿಜಯವಾಣಿ ಪತ್ರಿಕೆ ಓದಿರಿ)

Leave a Reply

Your email address will not be published. Required fields are marked *

Back To Top