More

    ಕೊಡಗು ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ

    ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಬುಧವಾರ ಬೆಳಗ್ಗೆ ೬ ಗಂಟೆಯಿಂದ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ.ಬಿ.ಸಿ. ಸತೀಶ ಆದೇಶ ಹೊರಡಿಸಿದ್ದಾರೆ. ಹೀಗಿದ್ದರೂ, ಜಿಲ್ಲೆಯಾದ್ಯಂತ ಜನಜೀವನ ಸಹಜವಾಗಿತ್ತು.

    ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆ.೧೮ ರಂದು ಕೊಡಗಿಗೆ ಭೇಟಿ ನೀಡಿದ್ದ ಸಂದರ್ಭ ಕಾರಿಗೆ ಮೊಟ್ಟೆ ಎಸೆತರಿಂದ ಜಿಲ್ಲೆಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಆ.೨೬ ಕ್ಕೆ ಕಾಂಗ್ರೆಸ್ ಕರೆ ನೀಡಿದ್ದ ಮಡಿಕೇರಿ ಚಲೋ ಹಾಗೂ ಬಿಜೆಪಿ ಆಯೋಜಿಸಲು ಉದ್ದೇಶಿಸಿದ್ದ ಜನಜಾಗೃತಿ ಸಮಾವೇಶದ ಹಿನ್ನೆಲೆಯಲ್ಲಿ ಸಂಘರ್ಷ ಏರ್ಪಡುವ ಆತಂಕ ಸೃಷ್ಟಿಯಾಗಿತ್ತು.

    ಆ.೨೭ ರಂದು ಬೆಳಗ್ಗೆ ೬ ಗಂಟೆಯವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಪೂರ್ವ ನಿಗದಿತ ಹಾಗೂ ಸರ್ಕಾರಿ ಕಾರ್ಯ ಕ್ರಮ ಹೊರತು ಪಡಿಸಿದ್ದಂತೆ ಇತರೆ ಸಭೆ- ಸಮಾರಂಭ, ಸಂತೆ, ಪ್ರತಿಭಟನೆ ನಿಷೇಧಿಸಲಾಗಿದೆ. ಜಿಲ್ಲೆಯಲ್ಲಿ ಅಹಿತಕರ ಘಟನೆ ನಡೆಯದ್ದಂತೆ ಎಚ್ಚರ ವಹಿಸಲು ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ.

    ಅಕ್ಕಪಕ್ಕದ ಜಿಲ್ಲೆಯಿಂದ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಜಿಲ್ಲೆಗೆ ಆಗಮಿಸಿದ್ದಾರೆ. ಕೆಎಸ್‌ಆರ್‌ಪಿ, ಡಿಎಆರ್ ತುಕಡಿಗಳು ಅಹಿತಕರ ಘಟನೆ ನಡೆದ್ದಲ್ಲಿ ಎದುರಿಸಲು ಸಜ್ಜಾಗಿವೆ. ಜಿಲ್ಲೆಯ ಸೂಕ್ಷ್ಮ ಸ್ಥಳಗಳಿಗೆ ಪೊಲೀಸರನ್ನು ನಿಯೋಜಿಸುವುದರ ಮೂಲಕ ಅಹಿತಕರ ಘಟನೆ ನಡೆಯದ್ದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ.

    ಕೊಡಗನ್ನು ಪ್ರವೇಶಿಸುವ ಚೆಕ್ ಪೋಸ್ಟ್‌ಗಳಲ್ಲಿ ಪೊಲೀಸರು ಹೆಚ್ಚಿನ ನಿಗಾ ವಹಿಸಿದ್ದಾರೆ. ಆ.೨೬ ರ ಮಡಿಕೇರಿ ಚಲೋ, ಜನಜಾಗೃತಿ ಸಮಾವೇಶ ಕೈಬಿಡಲಾಗಿದೆ. ಜೆಡಿಎಸ್ ಆ.೨೫ ರಂದು ಮಡಿಕೇರಿಯಲ್ಲಿ ಆಯೋಜಿಸಲು ಉದ್ದೇಶಿಸಿದ್ದ ಪಂಜಿನ ಮೆರವಣಿಗೆ ಕೈಬಿಟ್ಟಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts