Tuesday, 16th October 2018  

Vijayavani

ಜಮಖಂಡಿಯಲ್ಲಿ ಕಾಂಗ್ರೆಸ್-ಬಿಜೆಪಿ ಜಂಗೀಕುಸ್ತಿ- ಕೈ-ಕಮಲ ಅಭ್ಯರ್ಥಿಗಳಿಂದ ನಾಮಿನೇಷನ್​​ - ಬಿಎಸ್​ವೈ, ಸಿದ್ದು ಶಕ್ತಿಪ್ರದರ್ಶನ        ಗಣಿಧಣಿಗಳ ನಾಡಲ್ಲಿ ಬಿಗ್ ಫೈಟ್-ಉಗ್ರಪ್ಪ-ಶಾಂತಾರಿಂದ ಉಮೇದುವಾರಿಕೆ-ರಾಮುಲು, ಡಿಕೆಶಿ ನಡುವೆ ಅಸಲಿ ಕದನ        ಶಿವಮೊಗ್ಗ ಅಖಾಡದಲ್ಲಿ ಮಾಜಿ ಸಿಎಂ ಪುತ್ರರ ಸಮರ-ಇಂದು ಮಧು ಬಂಗಾರಪ್ಪ ನಾಮಪತ್ರ-ಜೆಡಿಎಸ್‌ ಅಭ್ಯರ್ಥಿಗೆ ಕಾಂಗ್ರೆಸ್ ಸಾಥ್        ಮಂಡ್ಯ ಲೋಕಸಭಾ ಚುನಾವಣೆ ಕದನ-ಇಂದು ಬಿಎಸ್​​ವೈ, ಎಚ್​ಡಿಕೆಯಿಂದ ಪ್ರಚಾರ-ದೋಸ್ತಿಗೆ ಸೆಡ್ಡು ಹೊಡೆಯಲು ಕಮಲ ಪ್ಲಾನ್​​        ರಾಮನಗರದಲ್ಲಿ ಕೋಟ್ಯಧಿಪತಿಗಳ ಕಾರುಬಾರು-ಸಿಎಂ ಪತ್ನಿ 127 ಕೋಟಿ ರೂ. ಒಡತಿ-ನಾನೇನು ಕಮ್ಮಿನಾ ಅಂತಿದ್ದಾರೆ ಚಂದ್ರಶೇಖರ್        ಬೈ ಎಲೆಕ್ಷನ್​ ಟೆನ್ಷನ್​ ಮಧ್ಯೆಯೇ ಡಿಸಿಎಂ ವರ್ಕಿಂಗ್​​-ಹುಬ್ಬಳ್ಳಿ ಠಾಣೆಗೆ ದಿಢೀರ್ ವಿಸಿಟ್​​​​​​​​​​-ಬೀಟ್ ಸಿಸ್ಟ್ಂ ಬಗ್ಗೆ ಪೊಲೀಸ್ ಸಿಬ್ಬಂದಿಗೆ ಪಾಠ       
Breaking News

ಅಭ್ಯರ್ಥಿಗಳ ಭವಿಷ್ಯದ ಜತೆ ಕೆಪಿಎಸ್ಸಿ ಆಟ

Monday, 17.09.2018, 3:02 AM       No Comments

ಬೆಳಗಾವಿ: ಕರ್ನಾಟಕ ಪರೀಕ್ಷಾ ಆಯೋಗ 2017ರ ಡಿಸೆಂಬರ್​ನಲ್ಲಿ ನಡೆಸಿದ ಕೆಪಿಎಸ್​ಸಿ ಮುಖ್ಯ ಪರೀಕ್ಷೆ ಫಲಿತಾಂಶ 10 ತಿಂಗಳಾದರೂ ಪ್ರಕಟವಾಗಿಲ್ಲ. ಪರಿಣಾಮ ಅದೆಷ್ಟೋ ಅಭ್ಯರ್ಥಿಗಳು ವಯಸ್ಸಿನ ಮಿತಿ ದಾಟುವ ಆತಂಕಕ್ಕೀಡಾಗಿದ್ದಾರೆ. ಈ ಕುರಿತಂತೆ ಅಭ್ಯರ್ಥಿಯೊಬ್ಬರು ವಿಜಯವಾಣಿ ಸಹಾಯವಾಣಿಗೆ ಕರೆ ಮಾಡಿ ಅಳಲು ತೋಡಿಕೊಂಡ ಹಿನ್ನೆಲೆಯಲ್ಲಿ ನಮ್ಮ ಉಪ ಸಂಪಾದಕ ವಿನಾಯಕ ಬೆಣ್ಣಿ ಈ ವಿಶೇಷ ವರದಿ ಸಿದ್ಧಪಡಿಸಿದ್ದಾರೆ.

ಸದಾ ಒಂದಿಲ್ಲೊಂದು ಎಡವಟ್ಟು ಹಾಗೂ ಭ್ರಷ್ಟಾಚಾರ ಆರೋಪದಿಂದ ಸದ್ದು ಮಾಡುವ ಕರ್ನಾಟಕ ಲೋಕ ಸೇವಾ ಆಯೋಗ (ಕೆಪಿಎಸ್​ಸಿ) ವಿಳಂಬ ಪ್ರವೃತ್ತಿಯಿಂದಲೂ ಉದ್ಯೋಗಾಕಾಂಕ್ಷಿಗಳ ಅಸಹನೆಗೆ ಗುರಿಯಾಗುವುದು ರೂಢಿ. ಭವಿಷ್ಯದ ಗುರಿ ಇಟ್ಟುಕೊಂಡು ಮುಖ್ಯ ಪರೀಕ್ಷೆ ಬರೆದಿದ್ದ ಸಾವಿರಾರು ಅಭ್ಯರ್ಥಿಗಳು 10 ತಿಂಗಳು ಕಳೆದರೂ ಫಲಿತಾಂಶ ಬಾರದಿರುವ ಹಿನ್ನೆಲೆಯಲ್ಲಿ ಆತಂಕಕ್ಕೀಡಾಗಿದ್ದಾರೆ. 2017ರ ಮೇನಲ್ಲಿ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 439 ಗೆಜೆಟೆಡ್ ಪ್ರೊಬೇಷನರಿ (ಗ್ರೂಪ್-ಎ, ಬಿ) ಹುದ್ದೆಗಳ ಭರ್ತಿಗಾಗಿ ಕೆಪಿಎಸ್​ಸಿ ಅರ್ಜಿ ಆಹ್ವಾನಿಸಿತ್ತು. ಸಾವಿರಾರು ಅಭ್ಯರ್ಥಿಗಳು 2017ರ ಆಗಸ್ಟ್​ನಲ್ಲಿ ಪೂರ್ವಭಾವಿ ಪರೀಕ್ಷೆ ಬರೆದಿದ್ದರು. ಇದರಲ್ಲಿ ಪಾಸಾದ 7,000ಕ್ಕೂ ಅಧಿಕ ಅಭ್ಯರ್ಥಿಗಳು 2017ರ ಡಿಸೆಂಬರ್​ನಲ್ಲಿ ಮುಖ್ಯ ಪರೀಕ್ಷೆ ಬರೆದಿ ದ್ದರು. ಆದರೆ ಈವರೆಗೆ ಫಲಿತಾಂಶವೇ ಪ್ರಕಟವಾಗಿಲ್ಲ.

ಎಲ್ಲ ವಿಳಂಬ

ಕೆಎಎಸ್ ಅಭ್ಯರ್ಥಿಗಳು ಪರೀಕ್ಷೆಗಾಗಿ ವರ್ಷಾನುಗಟ್ಟಲೆ ಅಧ್ಯಯನ ನಡೆಸಿರುತ್ತಾರೆ. ನೇಮಕಾತಿ ಕೂಡ ಒಂದು ವರ್ಷದ ಪ್ರಕ್ರಿಯೆ ಒಳಗೊಂಡಿರುತ್ತದೆ. ಆದರೆ ಮುಖ್ಯ ಪರೀಕ್ಷೆ ಫಲಿತಾಂಶಕ್ಕೇ ಕೆಪಿಎಸ್​ಸಿ ಸುದೀರ್ಘ ಅವಧಿ ತೆಗೆದುಕೊಂಡಿದೆ. ಪರಿಸ್ಥಿತಿ ಅವಲೋಕಿಸಿದರೆ ಈ ನೇಮಕಾತಿ ಸಂಪೂರ್ಣ ಆಗಲು ಕನಿಷ್ಠ 3 ವರ್ಷ ಬೇಕು ಎಂಬುದು ಲೆಕ್ಕಾಚಾರ. ಜತೆಗೆ ಈ ವಿಳಂಬದಿಂದಾಗಿ ಹೊಸ ಹುದ್ದೆಗಳ ಭರ್ತಿಗೆ ಹೊರಡಿಸಬೇಕಾಗಿದ್ದ ಅಧಿಸೂಚನೆಗೂ ಸಮಸ್ಯೆ ಆಗುತ್ತಿದೆ.

ಕಣ್ತೆರೆಯುವುದೇ ನೂತನ ಸರ್ಕಾರ?

ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಸದ್ಯ ನೂತನ ಸರ್ಕಾರದ ಮೊರೆಹೋಗಲು ಸಿದ್ಧತೆ ನಡೆಸಿದ್ದಾರೆ. ಜತೆಗೆ ಹೈಕೋರ್ಟ್​ಗೆ ರಿಟ್ ಅರ್ಜಿ ಸಲ್ಲಿಸಿ ಫಲಿತಾಂಶ ಪಡೆಯಲು ಚಿಂತನೆ ನಡೆಸಿದ್ದಾರೆ.

ಕಾರ್ಯದರ್ಶಿ ವಿರುದ್ಧ ಕಿಡಿ

ಕೆಪಿಎಸ್​ಸಿಯ ಹಿಂದಿನ ಕಾರ್ಯದರ್ಶಿ ಟ್ವಿಟರ್ ಮೂಲಕ ಅಭ್ಯರ್ಥಿಗಳ ಅಹವಾಲು ಆಲಿಸುತ್ತಿದ್ದರು ಹಾಗೂ ನೇಮಕಾತಿ ಹಂತಗಳ ಬೆಳವಣಿಗೆ ಕುರಿತು ಮಾಹಿತಿ ನೀಡಿ, ತ್ವರಿತ ಕ್ರಮಕ್ಕೆ ಮುಂದಾಗುತ್ತಿದ್ದರು. ಆದರೆ ನೂತನ ಕಾರ್ಯದರ್ಶಿ ಆರ್.ಆರ್. ಜನ್ನು ಅವರು ನೇಮಕಾತಿ ಸಂಬಂಧಿತ ಯಾವುದೇ ಕ್ರಮಕ್ಕೆ ಮುಂದಾಗುತ್ತಿಲ್ಲ ಎಂದು ಅಭ್ಯರ್ಥಿಗಳು ಆರೋಪಿಸುತ್ತಿದ್ದಾರೆ.

ವಯಸ್ಸಿನ ಮಿತಿ ಆತಂಕ

ಹಲವು ಅಭ್ಯರ್ಥಿಗಳು ವಯೋಮಿತಿ ಮೀರುವ ಆತಂಕಕ್ಕೆ ಸಿಲುಕಿದ್ದು, ಫಲಿತಾಂಶ ತಡವಾದರೆ ಮತ್ತೆ ಪರೀಕ್ಷೆ ಬರೆಯಲು ಸಾಧ್ಯವಾಗುವುದಿಲ್ಲ ಎಂದು ಅಳಲು ತೋಡಿಕೊಳ್ಳುತ್ತಿದ್ದಾರೆ.

ವಿಳಂಬಕ್ಕೆ ಅಕ್ರಮ ಕಾರಣವೇ?

ಈ ಹಿಂದೆ ಅನೇಕ ಬಾರಿ ಕೆಪಿಎಸ್​ಸಿ ನೇಮಕಾತಿಯಲ್ಲಿ ಭ್ರಷ್ಟಾಚಾರ ನಡೆದಿದ್ದರಿಂದ ಗೊಂದಲ ಉಂಟಾಗಿತ್ತು. ಈ ಬಾರಿಯೂ ಅಂಥ ಗೊಂದಲಕ್ಕೆ ಆಯೋಗದ ಹಿರಿಯ ಅಧಿಕಾರಿಗಳು ದಾರಿ ಮಾಡಿಕೊಟ್ಟಿದ್ದರಿಂದ ಪರೀಕ್ಷಾ ಫಲಿತಾಂಶ ವಿಳಂಬವಾಗಿದೆ ಎಂಬ ಮಾತು ಸಾರ್ವಜನಿಕ ವಲಯದಿಂದ ಕೇಳಿಬರುತ್ತಿದೆ. ಜತೆಗೆ ಇದಕ್ಕೆ ಪೂರಕವೆಂಬಂತೆ ನೇಮಕಾತಿಯಲ್ಲಿ ರಾಜಕೀಯ ಹಿತಾಸಕ್ತಿಗಳ ಒತ್ತಡ ಇದೆ ಎಂಬ ಮಾತು ಸಹ ಕೇಳಿ ಬರುತ್ತಿದೆ.

ಯಾವುದಕ್ಕೂ ಉತ್ತರವಿಲ್ಲ

ನೂರಾರು ಅಭ್ಯರ್ಥಿಗಳು ನಿತ್ಯ ಆಯೋಗಕ್ಕೆ ಪೋನ್ ಕಾಲ್, ಇ-ಮೇಲ್ ಹಾಗೂ ಆರ್​ಟಿಐ ಮೂಲಕ ಸಂರ್ಪಸಿ ಫಲಿತಾಂಶದ ಬಗ್ಗೆ ಮಾಹಿತಿ ಕೇಳುತ್ತಿದ್ದರೂ ಅಧಿಕಾರಿಗಳು ಯಾವುದಕ್ಕೂ ಉತ್ತರ ನೀಡುತ್ತಿಲ್ಲ. ಮೇನಿಂದ ಉತ್ತರಪತ್ರಿಕೆಗಳ ಮೌಲ್ಯಮಾಪನ ನಡೆಯುತ್ತಿದೆ ಎಂಬುದನ್ನು ಬಿಟ್ಟು ಬೇರೆ ಏನೂ ಹೇಳುತ್ತಿಲ್ಲ. ಇನ್ನೂ ಹೆಚ್ಚಿನ ಮಾಹಿತಿ ಕೇಳಿದರೆ ನಿಮ್ಮ ರಿಜಿಸ್ಟರ್ ನಂಬರ್ ಕೊಡಿ, ತಕ್ಕ ಶಾಸ್ತಿ ಮಾಡುತ್ತೇವೆ ಎಂದು ಬಾಯಿ ಮುಚ್ಚಿಸುತ್ತಿದ್ದಾರೆ ಎಂದು ಅಭ್ಯರ್ಥಿಯೊಬ್ಬರು ವಿಜಯವಾಣಿ ಬಳಿ ನೋವು ತೋಡಿಕೊಂಡಿದ್ದಾರೆ.

Leave a Reply

Your email address will not be published. Required fields are marked *

Back To Top