Wednesday, 19th September 2018  

Vijayavani

ಗೌಡರ ಫ್ಯಾಮಿಲಿ ವಿರುದ್ಧ ಮತ್ತೆ ಸಿಡಿದೆದ್ದ ಮಂಜು- ಡಿಸಿ, ಕಂದಾಯ ಸಚಿವರಿಗೆ ನಾಳೆ  ದೂರು ನೀಡಲಿರುವ ಎ.ಮಂಜು        ಎದುರಾಳಿ ಇಲ್ದೇ ಚೆಸ್ ಆಡೋದೇಗೆ - ಡಿಕೆಶಿ ದರ್ಪದ ಮಾತಿಗೆ ಬಿಎಸ್​ವೈ ತಿರುಗೇಟು - ಇತ್ತ ಅಪ್ಪ-ಮಕ್ಕಳ ವಿರುದ್ಧವೂ ವಾಗ್ದಾಳಿ        ಬಿಜೆಪಿಗೆ ಹೋದ್ರೆ ಬೆಳೆಯಕ್ಕಾಗಲ್ಲ, ಪಕ್ಷದಲ್ಲಿದ್ರೆ ಹೆಚ್ಚು ಲಾಭ - ಬಂಡೆದ್ದಿದ್ದ ಬ್ರದರ್ಸ್ ಕೂಲ್ ಮಾಡಿದ್ದೇ ಸಹೋದರ ಲಖನ್        ದಿಲ್ಲಿಯಲ್ಲಿ ಸಂಪುಟ ವಿಸ್ತರಣೆ ಸರ್ಕಸ್ - ಖಾಲಿ ಇರೋ 6 ಸ್ಥಾನಗಳಿಗೆ ಲಾಬಿ ಜೋರು - ಭಿನ್ನಮತಕ್ಕೆ ರಾಹುಲ್ ಹಾಡ್ತಾರಾ ಇತಿಶ್ರೀ..?        ತ್ರಿವಳಿ ತಲಾಖ್ ಸುಗ್ರೀವಾಜ್ಞೆಗೆ ಅಸ್ತು - ಕೇಂದ್ರ ಸಚಿವ ಸಂಪುಟದಿಂದ ಒಪ್ಪಿಗೆ - ಮುಸ್ಲಿಂ ಮಹಿಳೆಯರಿಗೆ ಕೊನೆಗೂ ಸಿಕ್ತು ನ್ಯಾಯ       
Breaking News

ಕೆಆರ್‌ಎಸ್ ಅಣೆಕಟ್ಟೆ ಪರಿಶೀಲಿಸಿದ ಡಿಸಿ, ಎಸ್ಪಿ

Friday, 13.07.2018, 5:00 AM       No Comments

ಕೃಷ್ಣರಾಜಸಾಗರ; ಕೆ.ಆರ್.ಸಾಗರ ಅಣೆಕಟ್ಟೆಯಲ್ಲಿ ಕಾವೇರಿ ಮಾತೆಗೆ ಜೂ.20ರಂದು ಸಿಎಂ ಎಚ್.ಡಿ. ಕುಮಾರಸ್ವಾಮಿ ಬಾಗಿನ ಅರ್ಪಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಗುರುವಾರ ಮಂಡ್ಯ ಜಿಲ್ಲಾಧಿಕಾರಿ ಎನ್.ಮಂಜುಶ್ರೀ ಮತ್ತು ಎಸ್ಪಿ ಜಿ.ರಾಧಿಕಾ ಅವರು ಅಣೆಕಟ್ಟೆ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸಿ.ಎಂ ಬಾಗಿನ ಅರ್ಪಿಸಲು ಬರುವ ರಸ್ತೆ ಮಾರ್ಗ ಹಾಗೂ ಹೆಲಿಪ್ಯಾಡ್ ಸ್ಥಳ, ಅಣೆಕಟ್ಟೆಯ ಬಳಿ ಬಾಗಿನ ಅರ್ಪಿಸುವ ಸ್ಥಳ ಮತ್ತು ಕಾವೇರಿ ಮಾತೆ ಪ್ರತಿಮೆ ಬಳಿ ಸ್ಥಳ ಪರಿಶೀಲನೆ ನಡೆಸಿ, ಕಾವೇರಿ ನೀರಾವರಿ ನಿಗಮದ ಕಾರ್ಯಪಾಲಕ ಇಂಜಿನಿಯರ್ ಬಸವರಾಜೇಗೌಡ ಅವರಿಂದ ಮಾಹಿತಿ ಪಡೆದರು.

ಯಾವುದೇ ಅಹಿತಕರ ಘಟನೆಗೆ ಆಸ್ಪದ ನೀಡದಂತೆ ಬಿಗಿ ಭದ್ರತೆ ಕುರಿತು ಈ ವೇಳೆ ಚರ್ಚಿಸಲಾಯಿತು. ಸಿಎಂ ಕೆ.ಆರ್.ಸಾಗರಕ್ಕೆ ಬರುವ ಮಾರ್ಗಗಳಲ್ಲಿ ಗುಂಡಿ ಬಿದ್ದಿರುವ ರಸ್ತೆಗಳನ್ನು ಶೀಘ್ರ ದುರಸ್ತಿ ಮಾಡುವಂತೆ ಪಿಡಬ್ಲುೃಡಿ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ಹರ್ಷ ಅವರಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ಪಿಡಬ್ಲುೃಡಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಲೋಕೇಶ್ ಸೇರಿದಂತೆ ಡಿವೈಎಸ್ಪಿ ವಿಶ್ವನಾಥ, ಸಿಪಿಐ ರವೀಂದ್ರ, ಕೆಎಸ್‌ಐಎಸ್‌ಎಫ್ ಪಿ.ಎಸೈ ಶಶಿಕಲಾ ಇದ್ದರು.

11 ವರ್ಷಗಳ ನಂತರ ಎಚ್ಡಿಕೆ ಬಾಗಿನ: ಕೆ.ಆರ್.ಸಾಗರ ಅಣೆಕಟ್ಟೆಗೆ 2007ರಲ್ಲಿ ಅಂದಿನ ಜೆಡಿಎಸ್-ಬಿಜೆಪಿ ಸಮ್ಮಿಶ್ರ ಸರ್ಕಾರದಲ್ಲಿ ಸಿಎಂ ಆಗಿದ್ದ ಎಚ್.ಡಿ.ಕುಮಾರಸ್ವಾಮಿ ಜೂನ್ 20ರ ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ಕಾವೇರಿ ಮಾತೆಗೆ ಬಾಗಿನ ಅರ್ಪಿಸಿ ಪೂಜೆ ಸಲ್ಲಿಸಿದ್ದರು.

ಪ್ರಸ್ತುತ ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಅಧಿಕಾರದಲ್ಲಿದ್ದು, ಸಿಎಂ ಆಗಿರುವ ಎಚ್ಡಿಕೆ ಮತ್ತೆ 11 ವರ್ಷಗಳ ಬಳಿಕ ಜುಲೈ 20ರ ಶುಕ್ರವಾರ ಕಾವೇರಿ ಮಾತೆಗೆ ಬಾಗಿನ ಅರ್ಪಿಸಲಿದ್ದಾರೆ.

 

 

Leave a Reply

Your email address will not be published. Required fields are marked *

Back To Top