Wednesday, 19th September 2018  

Vijayavani

ಆಸ್ಪತ್ರೆಯಿಂದ ಸಚಿವ ಡಿ.ಕೆ. ಶಿವಕುಮಾರ್​​ ಡಿಸ್ಚಾರ್ಜ್ - ಕೆಲವೇ ಕ್ಷಣಗಳಲ್ಲಿ ಸುದ್ದಿಗೋಷ್ಠಿ - ಎಟಿಎಂ ಆರೋಪಕ್ಕೆ ಉತ್ತರಿಸ್ತಾರಾ?        ಗಾಂಧಿ ಕುಟುಂಬಕ್ಕೆ ಎಟಿಎಂ ಅಂತೆ ಡಿಕೆಶಿ - ಎಐಸಿಸಿಗೆ 600 ಕೋಟಿ ಆಗಿದ್ಯಂತೆ ಡೆಪಾಸಿಟ್ - ಡಿಕೆಶಿ ವಿರುದ್ಧ ಆರೋಪಗಳ ಪಟ್ಟಿ        ಇಡಿ ಪ್ರಕರಣದಲ್ಲಿ ಡಿಕೆಶಿ ಬಂಧನ ಖಚಿತ - ಅರೆಸ್ಟ್‌ ಬೆನ್ನಲ್ಲೇ ಮೈತ್ರಿ ಸರ್ಕಾರ ಖತಂ - ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್‌ವೈ ಭವಿಷ್ಯ        ಬೆಂಗ್ಳೂರು ರಸ್ತೆ ಗುಂಡಿಗೆ ಹೈಕೋರ್ಟ್ ಗರಂ - ಬೆಳಗ್ಗೆಯೊಳಗೆ ಗುಂಡಿ ಮುಚ್ಚಿಸಿ - ಕೆಲ್ಸ ಮಾಡದಿದ್ರೆ ಬಿಬಿಎಂಪಿ ಬಂದ್ ಅಂದ್ರು ಸಿಜೆ        ನವಾಜ್​​ ಷರೀಫ್​ಗೆ ರಿಲೀಫ್ - ಜೈಲಿನಿಂದ ಪಾಕ್ ಮಾಜಿ ಪ್ರಧಾನಿ, ಪುತ್ರಿ ಬಿಡುಗಡೆ - ಇಸ್ಲಾಮಾಬಾದ್ ಹೈಕೋರ್ಟ್ ಆದೇಶ        ದುಬೈನಲ್ಲಿ ಏಷ್ಯಾಕಪ್ ಹಣಾಹಣಿ - ಹೈವೋಲ್ಟೇಜ್ ಮ್ಯಾಚ್​ಗೆ ಬದ್ಧ ವೈರಿಗಳು ಸಜ್ಜು - ಟಾಗ್‌ಗೆದ್ದ ಪಾಕ್‌ ಬ್ಯಾಟಿಂಗ್‌ ಆಯ್ಕೆ       
Breaking News

115 ಅಡಿ ಗಡಿಯಲ್ಲಿ ಕನ್ನಂಬಾಡಿ ಕಟ್ಟೆ

Wednesday, 11.07.2018, 3:04 AM       No Comments

ಕೃಷ್ಣರಾಜಸಾಗರ/ಮಂಡ್ಯ: ಜೀವನಾಡಿ ಕನ್ನಂಬಾಡಿ ಕಟ್ಟೆ 3 ವರ್ಷಗಳ ಬಳಿಕ ತುಂಬುವ ಹಂತಕ್ಕೆ ಬಂದಿದ್ದು, ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಬಾಗಿನ ಅರ್ಪಿಸುವ ಭಾಗ್ಯ ಶೀಘ್ರವೇ ಪ್ರಾಪ್ತಿಯಾಗಲಿದೆ.

ಕಾವೇರಿ ಜಲಾನಯನ ಪ್ರದೇಶ ಮತ್ತು ಕಾವೇರಿ ಉಗಮ ಸ್ಥಾನ ಮಡಿಕೇರಿಯಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆ ಯಲ್ಲಿ ಅಣೆಕಟ್ಟೆಗೆ ಅಧಿಕ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಮಂಗಳವಾರ ಸಂಜೆ ವೇಳೆಗೆ ಕಟ್ಟೆಯ ನೀರಿನ ಮಟ್ಟ 114 ಅಡಿಗೆ ತಲುಪಿದ್ದು, ರಾತ್ರಿ 115 ಅಡಿ ದಾಟುವ ನಿರೀಕ್ಷೆ ಇದೆ. ಪ್ರಸ್ತುತ ಕಟ್ಟೆಗೆ 34,757 ಕ್ಯೂಸೆಕ್ ಒಳ ಹರಿವಿದ್ದು, 3,615 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ. 49.454 ಟಿಎಂಸಿ ಸಂಗ್ರಹ ಸಾಮರ್ಥ್ಯ ಅಣೆಕಟ್ಟೆಯಲ್ಲೀಗ 35.937 ಟಿಎಂಸಿ ನೀರಿದೆ. 5 ವರ್ಷಗಳಿಗೆ ಹೋಲಿಸಿದರೆ, ಈ ವೇಳೆಗೆ ಇದೇ ಪ್ರಥಮ ಬಾರಿಗೆ ನೀರಿನ ಮಟ್ಟ ಹೆಚ್ಚಳವಾಗಿರುವುದು ದಾಖಲೆಯಾಗಿದೆ.

ಸಿಎಂ ಸೂಚನೆ

ರಾಜ್ಯದ ರೈತರ ಹಿತಾಸಕ್ತಿ ಕಾಪಾಡಿಕೊಳ್ಳಲು ಅಗತ್ಯವಿರುವ ನೀರು ಉಳಿಸಿಕೊಂಡು, ಹೆಚ್ಚುವರಿ ನೀರನ್ನು ತಮಿಳುನಾಡಿಗೆ ಹರಿಸುವಂತೆ ಅಧಿಕಾರಿಗಳಿಗೆ ಸಿಎಂ ನಿರ್ದೇಶನ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಕಬಿನಿ ಜಲಾಶಯದಲ್ಲೂ ಏರಿಕೆ

ವೈನಾಡಿನಲ್ಲಿ ಮಳೆ ಜೋರಾಗಿರುವುದರಿಂದ ರಾಜ್ಯದಲ್ಲೇ ಮೊದಲು ಭರ್ತಿಯಾಗುವ ಜಲಾಶಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಎಚ್.ಡಿ.ಕೋಟೆ ತಾಲೂಕಿನ ಕಬಿನಿ ಜಲಾಶಯದ ಒಳಹರಿವು ಹೆಚ್ಚಾಗಿದೆ. ಹಾರಂಗಿಯ ಹೆಚ್ಚುವರಿ ನೀರು ಕೆಆರ್​ಎಸ್ ಸೇರುತ್ತಿದ್ದರೆ, ಕಬಿನಿಯ ಹೆಚ್ಚುವರಿ ನೀರು ತಮಿಳುನಾಡಿಗೆ ಹೋಗುತ್ತಿದೆ.

ತಮಿಳುನಾಡಿಗೆ ನೀರು

ಬೆಂಗಳೂರು: ತಮಿಳುನಾಡಿಗೆ ಕಬಿನಿ ಜಲಾಶಯದಿಂದ 35 ಸಾವಿರ ಕ್ಯೂಸೆಕ್ ನೀರು ಹರಿದು ಹೋಗುತ್ತಿದ್ದು, ಈ ಪ್ರಮಾಣ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ. ತಮಿಳುನಾಡಿಗೆ ಈ ತನಕ 20 ಟಿಎಂಸಿ ನೀರು ಹರಿದುಹೋಗಿದೆ. ಹಾಗಾಗಿ ಕೆಆರ್​ಎಸ್​ನಿಂದ ನೀರು ಹರಿಸಬೇಕಾದ ಅಗತ್ಯ ಬಂದಿಲ್ಲ ಎಂದು ಜಲಸಂಪನ್ಮೂಲ ಇಲಾಖೆ ಮೂಲಗಳು ತಿಳಿಸಿವೆ.

ತಮಿಳುನಾಡಿಗೆ ನೀರು ಬಿಡುವ ವಿಚಾರದಲ್ಲಿ ನಾನು ಆಕ್ಷೇಪ ಮಾಡಿಲ್ಲ. ಸಿಎಂಗೆ ಫೋನ್ ಮಾಡಿ ತರಾಟೆ ತೆಗೆದುಕೊಂಡಿದ್ದೇನೆ ಎಂಬುದು ಸುಳ್ಳು. ಮಾಧ್ಯಮದವರು ಯಾಕೆ ಈ ರೀತಿ ಗೊಂದಲ ಸೃಷ್ಟಿಸುತ್ತಾರೆ? ಪ್ರಸ್ತುತ ಕೆಆರ್​ಎಸ್ ಜಲಾಶಯಕ್ಕೆ ಹೆಚ್ಚು ನೀರು ಹರಿದು ಬರುತ್ತಿದೆ. ಈಗ ತಮಿಳುನಾಡಿಗೆ ನೀರು ಬಿಟ್ಟರೆ ತಪ್ಪೇನು? ಹೆಚ್ಚಿಗೆ ಬಂದ ನೀರನ್ನು ಎಲ್ಲಿ ಹಿಡಿದಿಟ್ಟುಕೊಳ್ಳುತ್ತೀರಾ?

| ಜಿ.ಮಾದೇಗೌಡ ಮಾಜಿ ಸಂಸದ

Leave a Reply

Your email address will not be published. Required fields are marked *

Back To Top