Friday, 15th December 2017  

Vijayavani

1. ಸನ್ನಿ ನೈಟ್​ಗೆ ವ್ಯಾಪಕ ವಿರೋಧ ಹಿನ್ನೆಲೆ- ಕಾರ್ಯಕ್ರಮ ರದ್ದುಗೊಳಿಸಿದ ರಾಜ್ಯ ಸರ್ಕಾರ- ಸಾವಿರಾರು ಅಭಿಮಾನಿಗಳಿಗೆ ನಿರಾಸೆ 2. ಆಟೋ ಮತ್ತು ಕಾರಿನ ಮೇಲೆ ಟಿಪ್ಪರ್ ಪಲ್ಟಿ- ಸ್ಥಳದಲ್ಲೇ ಮೂವರ ದುರ್ಮರಣ – ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ 3. ಶನಿಮುಖಿ ಸುನೀಲ್​ಗೆ ಸುಪಾರಿ ಕೇಡು- ವಾರದ ಅಚ್ಚರಿಯಲ್ಲಿ ಕ್ರೈಂ ವರದಿ ಕಿಂಗ್ ಲೇಖನ – ಇನ್ನೂ ಬರೆಯೋದು ಇದೆ ಎಂದ ಬೆಳಗೆರೆ 4. ಜಿಲ್ಲಾಧ್ಯಕ್ಷರ ಬದಲಾವಣೆಗೆ ಪಟ್ಟು- ಜೆಡಿಎಸ್ ಸಭೆಯಲ್ಲಿ ಮಾರಾಮಾರಿ- ಬಾಗಲಕೋಟೆಯಲ್ಲಿ ಕೈ ಕೈ ಮಿಲಾಯಿಸಿದ ಕಾರ್ಯಕರ್ತರು 5. ಗುಜರಾತ್ ವಿಧಾನಸಭೆಯಲ್ಲಿ ಯಾರು ಗೆಲ್ತಾರೆ- ನಾಯಿ ಬೊಗಳುತೈತೆ ಭವಿಷ್ಯ – ವೈರಲ್ ಆಯ್ತು ಬೌಬೌ ವಿಡಿಯೋ
Breaking News :

ಸಾರಿಗೆ ಬಸ್-ಕ್ರೂಸರ್ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 6 ಜನ ಸಾವು

Friday, 08.09.2017, 8:28 AM       No Comments

ಬಾಗಲಕೋಟೆ: ಕೆಎಸ್​ಆರ್​ಟಿಸಿ ಬಸ್​ ಹಾಗೂ ಕ್ರೂಸರ್​ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ 6 ಜನ ಮೃತಪಟ್ಟು, ಹಲವರು ಗಾಯಗೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆ ಬೀಳಗಿ ತಾಲೂಕಿನ ಕೊರ್ತಿ ಬಳಿ ಶುಕ್ರವಾರ ಬೆಳಗ್ಗೆ ನಡೆದಿದೆ.

ವಿಜಯಪುರದಿಂದ ಬಾಗಲಕೋಟೆ ಕಡೆಗೆ ಬರುತ್ತಿದ್ದ ಸಾರಿಗೆ ಬಸ್ಸು, ಕಾರವಾರದಿಂದ ಸೊಲ್ಲಾಪುರ ಕಡೆಗೆ ಹೋಗುತ್ತಿದ್ದ ಕ್ರೂಸರ್ ವಾಹನ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಬೀಳಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮೃತರು ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಮಾಡ ತಾಲೂಕಿನ ದಾರಪಾಳ ಗ್ರಾಮದವರು ಎಂದು ತಿಳಿದು ಬಂದಿದೆ. ಅಪಘಾತದಲ್ಲಿ ಪಾಂಡುರಂಗ ಸೋಳಂಕಿ, ಚಾಲಕ ನಾಗೇಶ, ವಿಜಯ ಶಿಂಧೆ ಹಾಗೂ ಇತರ ಮೂವರು ಸಾವನ್ನಪ್ಪಿದ್ದಾರೆ.

ಮೃತರಲ್ಲಿ ಇಬ್ಬರು ಮಹಿಳೆಯರು ಇದ್ದಾರೆ. ಕ್ರೂಸರ್​ನಲ್ಲಿ ಒಟ್ಟು 8 ಜನರು ಶಿವಮೊಗ್ಗಕ್ಕೆ ತೆರಳಿದ್ದರು. ಅಲ್ಲಿಂದ ಮಹಾರಾಷ್ಟ್ರದ ತಮ್ಮೂರ ಕಡೆಗೆ ಹೋಗುತ್ತಿದ್ದಾಗ ವಿಜಯಪುರದಿಂದ ಹುಬ್ಬಳ್ಳಿ ಕಡೆಗೆ ಹೊರಟಿದ್ದ ಸಾರಿಗೆ ಬಸ್ಸು ಡಿಕ್ಕಿಯಾಗಿ ಈ ದುರ್ಘಟನೆ ನಡೆದಿದೆ.

ಬೀಳಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಗಾಯಾಳುಗಳನ್ನು ದಾಖಲು ಮಾಡಲಾಗಿದೆ. ಅಪಘಾತ ಸ್ಥಳಕ್ಕೆ ಬೀಳಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. (ದಿಗ್ವಿಜಯ ನ್ಯೂಸ್)

Leave a Reply

Your email address will not be published. Required fields are marked *

Back To Top