Wednesday, 21st February 2018  

Vijayavani

ಶಾಸಕ ಹ್ಯಾರಿಸ್ ಪುತ್ರ ನಲಪಾಡ್ ಗೂಂಡಾಗಿರಿ ಪ್ರಕರಣ - ಬೌರಿಂಗ್​ ಆಸ್ಪತ್ರೆಯಲ್ಲಿ ಮೆಡಿಕಲ್​ ಟೆಸ್ಟ್​ ಕಂಪ್ಲೀಟ್​​ - ಕೋರ್ಟ್​ಗೆ ಆರೋಪಿಗಳು ಹಾಜರ್​​​        ನಲಪಾಡ್ ಜಾಮೀನು ಅರ್ಜಿ ವಿಚಾರಣೆ ಆರಂಭ - ವಾದ ಮಂಡನೆಗೆ ಅವಕಾಶ ಕೋರಿ ಮಧ್ಯಂತರ ಅರ್ಜಿ - ಸರ್ಕಾರದ ಮೇಲೆ ನಂಬಿಕೆಯಿಲ್ಲ ಎಂದು ಆಲಂ ಪಾಷ ಅರ್ಜಿ        ಇಂದಿನಿಂದ ಬಾಹುಬಲಿ ಹೆಲಿ ಟೂರಿಸಂ - ಜಸ್ಟ್​​​ 2,100 ರೂಪಾಯಿಗೆ 8 ನಿಮಿಷ ಹಾರಾಟ - ಫೆಬ್ರವರಿ 25 ಬರ್ತಿದ್ದಾರೆ ಕೇಂದ್ರ ಗೃಹ ಸಚಿವರು        ಮುಗಿಯದ ಭೈರತಿ ಬಸವರಾಜ್ ಬೆಂಬಲಿಗರ ದರ್ಪ - ಪೇದೆ ಮೇಲೆ ಗೂಂಡಾಗಳ ಹಲ್ಲೆ - ಆರೋಪ ತಳ್ಳಿ ಹಾಕಿದ ಕಾಂಗ್ರೆಸ್​​​​​ ಶಾಸಕ        ಹೋಂ ಮಿನಿಸ್ಟರ್‌ ಹೆಸರಲ್ಲಿ ಭಾರಿ ಆಸ್ತಿ ಆರೋಪ - ದಿಗ್ವಿಜಯ ನ್ಯೂಸ್‌ನಲ್ಲಿ ದಾಖಲೆ ಬಯಲು - ಆರೋಪ ನಿರಾಕರಿಸಿದ ರಾಮಲಿಂಗಾರೆಡ್ಡಿ       
Breaking News

ಬೆಳಗಾವಿ ಅಧಿವೇಶನ: ಪೊಲೀಸರಿಗೆ ನಿತ್ಯಕರ್ಮಗಳಿಗೂ ಸಿಗದ ಸಮರ್ಪಕ ವ್ಯವಸ್ಥೆ

Monday, 13.11.2017, 9:53 AM       No Comments

ಬೆಳಗಾವಿ: ಗಡಿ ನಾಡಿನಲ್ಲಿ ಸೋಮವಾರದಿಂದ ಚಳಿಗಾಲದ ಅಧಿವೇಶನ ಪ್ರಾರಂಭವಾಗಲಿದ್ದು ಈಗಾಗಲೇ ಎಲ್ಲ ರಾಜಕೀಯ ಪಕ್ಷಗಳು ಸಕಲ ಸಿದ್ಧತೆಗಳನ್ನ ಮಾಡಿಕೊಂಡಿವೆ. ಆದರೆ ಸುವ್ಯವಸ್ಥೆ ಹಾಗೂ ಸುರಕ್ಷತೆಗಾಗಿ ಅಧಿವೇಶನಕ್ಕೆ ನಿಯೋಜಿಸಿರುವ ಪೊಲೀಸರಿಗೆ ಕನಿಷ್ಟ ಸೌಲಭ್ಯಗಳನ್ನು ಸರ್ಕಾರ ಕಲ್ಪಿಸಿಲ್ಲ.

ಸುವರ್ಣಸೌಧದಲ್ಲಿರುವ ಪೊಲೀಸರ ಸ್ಥಿತಿ ಶೋಚನೀಯವಾಗಿದ್ದು, ನಿತ್ಯಕರ್ಮಗಳಿಗೂ ಸಮರ್ಪಕ ವ್ಯವಸ್ಥೆ ಇಲ್ಲದೆ ಬಯಲು ಶೌಚಕ್ಕೆ ಮೊರೆ ಹೋಗುವಂತಾಗಿದೆ. ಒಟ್ಟಾರೆ 4000 ಪೊಲೀಸ್​ ಸಿಬ್ಬಂದಿಯನ್ನು ಅಧಿವೇಶನಕ್ಕಾಗಿ ನಿಯೋಜಿಸಿದ್ದು, ಬಂಟರ ಭವನದಲ್ಲಿ ವಾಸ್ತವ್ಯ ಹೂಡಿರುವ 2೦೦ಕ್ಕೂ ಅಧಿಕ ಪೊಲೀಸ್​ ಸಿಬ್ಬಂದಿಗೆ ಕೇವಲ 2 ಶೌಚಾಲಯಗಳು ಹಾಗೂ 6 ಮೊಬೈಲ್​ ಶೌಚಾಲಯಗಳನ್ನ ಒದಗಿಸಲಾಗಿದೆ.

ಇನ್ನು ಬರಿ 2 ಸ್ನಾನಗೃಹಗಳಿದ್ದು, ಪೊಲೀಸ್​ ಸಿಬ್ಬಂದಿ ಬಂಟರ​ ಸಭಾಂಗಣದ ಹೊರಗಡೆ ಸ್ನಾನ ಮಾಡುವ ಪರಿಸ್ಥಿತಿ ಎದುರಾಗಿದೆ. ಬಟ್ಟೆ ಹಾಗೂ ಅಗತ್ಯ ವಸ್ತುಗಳನ್ನು ಇಟ್ಟುಕೊಳ್ಳಲೂ ಸೂಕ್ತ ವ್ಯವಸ್ಥೆ ಇಲ್ಲದೆ ಪೊಲೀಸರು ಪರದಾಡುವಂತಾಗಿದೆ. (ದಿಗ್ವಿಜಯ ನ್ಯೂಸ್)

Leave a Reply

Your email address will not be published. Required fields are marked *

Back To Top