Monday, 11th December 2017  

Vijayavani

1. ಜಮ್ಮುವಿನಲ್ಲಿ ಗುಂಡಿನ ಚಕಮಕಿ- ಯೋಧರ ಗುಂಡೇಟಿಗೆ ಮೂವರು ಉಗ್ರರು ಮಟಾಶ್​​​- ಒಬ್ಬ ಜೀವಂತವಾಗಿ ಸೆರೆ, ವಿಚಾರಣೆ 2. ರವಿ ಬೆಳಗೆರೆ ಕಸ್ಟಡಿ ಅವಧಿ ಇಂದಿಗೆ ಅಂತ್ಯ- ಮಧ್ಯಾಹ್ನ ನ್ಯಾಯಾಲಯಕ್ಕೆ ಪತ್ರಕರ್ತ ಹಾಜರು- ಜಾಮೀನು ಕೊಡ್ತಾರಾ ನ್ಯಾಯಾಧೀಶರು..? 3. ಮಕ್ಕಳ ಮೊಟ್ಟೆ ಗುತ್ತಿಗೆದಾರರ ಹೊಟ್ಟೆಗೆ- ಕೊಪ್ಪಳದಲ್ಲಿ ನಡೆದಿದೆ ಮೊಟ್ಟೆ ಗೋಲ್​​ಮಾಲ್​- ಡಿಸಿ ಸೇರಿ ನಾಲ್ವರ ವಿರುದ್ಧ ಲೋಕಾಯುಕ್ತಕ್ಕೆ ದೂರು 4. ಸರ್ಕಾರಿ ಜಾಗದ ಮೇಲೆ ಬಿಲ್ಡರ್​ ಕಣ್ಣು- ರಾತ್ರೋರಾತ್ರೊ ಮನೆ ಖಾಲಿಗೆ ಆವಾಜ್​​- ಹುಬ್ಬಳ್ಳಿಯಲ್ಲಿ ದಯಾಮರಣಕ್ಕೆ 12 ಕುಟುಂಬದಿಂದ ಅರ್ಜಿ 5. ಗುತ್ತಿಗೆದಾರರ ಬಳಿ ಸರ್ಕಾರಿ ಫೈಲ್​​​​​ ಪ್ರಕರಣ- ಸ್ಪಷ್ಟನೆ ಕೋರಿ ಎಇಇಗೆ ನೋಟಿಸ್​​​- ಇದು ದಿಗ್ವಿಜಯ ನ್ಯೂಸ್​​ ಬಿಗ್​​ ಇಂಪ್ಯಾಕ್ಟ್​​​​
Breaking News :

ಶಿವಮೊಗ್ಗ ಬಳಿ ರಸ್ತೆ ಅಪಘಾತ: 6 ಜನ ಸ್ಥಳದಲ್ಲೆ ಸಾವು

Monday, 28.08.2017, 6:15 PM       No Comments

ಶಿವಮೊಗ್ಗ: ಲಿಕ್ಕರ್ ತುಂಬಿದ ಲಾರಿ ಹಾಗೂ ಕಾರು ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಆರು ಮಂದಿ ಮೃತಪಟ್ಟಿದ್ದು, ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ಶಿವಮೊಗ್ಗ ತಾಲೂಕಿನ ಆಯನೂರು ಸಮೀಪ ಸೋಮವಾರ ನಡೆದಿದೆ.

ಹೊಸನಗರ ತಾಲೂಕು ಬ್ರಹ್ಮೇಶ್ವರದಿಂದ ಬೆಂಗಳೂರಿಗೆ ಹೋಗುತ್ತಿದ್ದ ಕಾರು ಹಾಗೂ ಬೆಂಗಳೂರಿನಿಂದ ಸಾಗರಕ್ಕೆ ಮದ್ಯ ತುಂಬಿಕೊಂಡು ಹೋಗುತ್ತಿದ್ದ ಲಾರಿ ನಡುವೆ ಸಂಭವಿಸಿದ ಅಪಘಾತದಿಂದ ಈ ದುರ್ಘಟನೆ ನಡೆದಿದೆ.

ಕಾರಿನಲ್ಲಿದ್ದ ಬ್ರಹ್ಮೇಶ್ವರದ ಅಶೋಕ್, ಕಿರಣ್, ಕಾರ್ತಿಕ್, ನವೀನ, ಕೇಶವ, ಮಾರಿಮುತ್ತು ಮೃತಪಟ್ಟಿದ್ದು, ಸಂತೋಷ್ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದಾನೆ. ಕ್ಯಾಂಟರ್ ಚಾಲಕನೂ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಕುಂಸಿಠಾಣೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. (ದಿಗ್ವಿಜಯ ನ್ಯೂಸ್)

Leave a Reply

Your email address will not be published. Required fields are marked *

Back To Top