Wednesday, 21st March 2018  

Vijayavani

ಮುಂದಿನ ಚುನಾವಣೆಯಲ್ಲಿ ಮೋದಿ ಸೋಲ್ತಾರೆ- ಇಂದಿರಾಗಾಂಧಿಯಂತೆ ನಮ್ಮನ್ನೂ ಗೆಲ್ಲಿಸಿ- ಚಿಕ್ಕಮಗಳೂರಿನಲ್ಲಿ ರಾಹುಲ್‌ ಟಾಕ್‌ವಾರ್‌        ಕುಡಿದು ಅಡ್ಡಾದಿಡ್ಡಿ ಬಸ್‌ ಚಲಾಯಿಸಿದ- ಕಾರು, ಬೈಕ್‌ ಮರಕ್ಕೆ ಡಿಕ್ಕಿ ಹೊಡೆಸಿದ- ಬೆಂಗಳೂರಿನಲ್ಲಿ ಬಿಎಂಟಿಸಿ ಚಾಲಕನ ಅವಾಂತರ        ಜೆಡಿಎಸ್ ಬಂಡಾಯ ಶಾಸಕರ ಅನರ್ಹತೆ ವಿಚಾರ- ಹೈಕೋರ್ಟ್​ಗೆ ಅಭಿಪ್ರಾಯ ತಿಳಿಸಿದ ಸ್ಪೀಕರ್​- ಮುಚ್ಚಿದ ಲಕೋಟೆಯಲ್ಲಿ ಎಜಿ ಮೂಲಕ ರವಾನೆ        5 ಕೋಟಿ ಫೇಸ್​ಬುಕ್‌ಗಳ ಮಾಹಿತಿ ಹ್ಯಾಕ್- ಕಾಂಗ್ರೆಸ್‌ ವಿರುದ್ಧ ಬಿಜೆಪಿ ಗಂಭೀರ ಆರೋಪ- ರವಿಶಂಕರ್‌ ಆರೋಪಕ್ಕೆ ಕೈತಿರುಗೇಟು        ಬೈಕ್ ಸವಾರನ ಮೇಲೆ ಬಿದ್ದ ಬೃಹತ್ ಮರ- ಹೆಲ್ಮೆಟ್ ಧರಿಸಿದ್ದರಿಂದ ಪ್ರಾಣಾಪಾಯದಿಂದ ಪಾರು- ಹೆಲ್ಮೆಟ್​ ಪುಡಿಪುಡಿ ತಲೆ ಸೇಫ್​       
Breaking News

ಡಾ.ಎಂ.ಎಸ್​. ಸ್ವಾಮಿನಾಥ್​ಗೆ ರಾಷ್ಟ್ರೀಯ ಬಸವ ಕೃಷಿ ಪ್ರಶಸ್ತಿ ಘೋಷಣೆ

Sunday, 07.01.2018, 1:17 PM       No Comments

ಬಾಗಲಕೋಟೆ: ದೇಶದ ಹಸಿರುಕ್ರಾಂತಿ ಹರಿಕಾರ, ತಮಿಳುನಾಡಿನ ಪ್ರಖ್ಯಾತ ಕೃಷಿ ಸಂಶೋಧಕ ಡಾ. ಎಂ.ಎಸ್​. ಸ್ವಾಮಿನಾಥನ್​ ಅವರಿಗೆ 2018ನೇ ಸಾಲಿನ ರಾಷ್ಟ್ರೀಯ ಬಸವ ಕೃಷಿ ಪ್ರಶಸ್ತಿಯನ್ನು ಘೋಷಿಸಲಾಗಿದೆ.
ಜನವರಿ 24 ರಂದು ಚೆನ್ನೈನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪಂಚಮಸಾಲಿ ಪೀಠದ ಜಗದ್ಗರು ಶ್ರೀ ಜಯ ಮೃತ್ಯುಂಜಯ ಶ್ರೀಗಳು ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ. ಪ್ರಶಸ್ತಿ 1 ಲಕ್ಷ ರೂ. ನಗದು ಮತ್ತು ನೇಗಿಲು ಇರುವ ಫಲಕವನ್ನು ಒಳಗೊಂಡಿದೆ.

ಬಸವಣ್ಣನವರ ಕಾಯಕ ತತ್ವಗಳನ್ನು ತಮಿಳುನಾಡಿನಲ್ಲಿಯೂ ಪಸರಿಸಬೇಕು ಎಂಬ ಉದ್ದೇಶದಿಂದ ಸ್ವಾಮಿನಾಥನ್​ ಅವರ ಅಪೇಕ್ಷೆ ಮೇರೆಗೆ ಚೆನ್ನೈನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ.

ಸ್ವಾಮಿನಾಥನ್ ಅವರು ರೈತರ ಆತ್ಮಹತ್ಯೆ ತಡೆಗೆ ರಾಷ್ಟ್ರಕ್ಕೆ ಹೊಸ “ಕೃಷಿ ನೀತಿ” ಕೊಟ್ಟ ಕೀರ್ತಿ ಹಾಗೂ ರೈತರ ಬೆಳೆಗಳಿಗೆ ವೈಜ್ಞಾನಿಕ ಬೆಲೆಯ ಚಿಂತಕ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ.

ಸ್ವಾಮಿನಾಥನ್​ ಕುರಿತು ಮತ್ತಷ್ಟು ಮಾಹಿತಿಗೆ ಇಲ್ಲಿ ನೋಡಿ…

http://www.mssrf.org/

https://en.wikipedia.org/wiki/M._S._Swaminathan

Leave a Reply

Your email address will not be published. Required fields are marked *

Back To Top