Tuesday, 17th July 2018  

Vijayavani

ಕಾಂಗ್ರೆಸ್‌ ಕಿರುಕುಳದಿಂದಲೇ ಸಿಎಂ ಕಣ್ಣೀರು - ಕಾಂಗ್ರೆಸ್‌ ನೆಚ್ಚಿಕೊಂಡು ಹೋದ್ರೆ ಇದೇ ಸ್ಥಿತಿ - ಎಚ್​ಡಿಕೆ  ಕಣ್ಣೀರಿಗೆ ಜೇಟ್ಲಿ ಟಾಂಗ್‌        ವಾಣಿಜ್ಯ ಬ್ಯಾಂಕ್‌ನಲ್ಲಿನ ಚಾಲ್ತಿ ಸಾಲವೂ ಮನ್ನಾ - ಸಿಎಂ ನಿರ್ಧಾರ - ರೈತರಿಗೆ ಮತ್ತೊಂದು ಕೊಡುಗೆ ನೀಡಿದ ಮುಖ್ಯಮಂತ್ರಿ        ಟ್ರಾಫಿಕ್ ನಿಯಮ ಉಲ್ಲಂಘಿಸಿದ್ದ ಶಾಸಕರ ಪುತ್ರ - ಪ್ರಶ್ನಿಸಿದ ಪೇದೆಗೆ ಅವಾಚ್ಯ ಶಬ್ದಗಳಿಂದ ನಿಂದನೆ        ಬಂಗಾಳದಲ್ಲಿ ಮೋದಿ ರ್ಯಾಲಿ ವೇಳೆ ಅವಗಢ - ಪೆಂಡಾಲ್ ಕುಸಿದು 22 ಜನರಿಗೆ ಗಾಯ - ಆರೋಗ್ಯ ವಿಚಾರಿಸಿದ ಪ್ರಧಾನಿ ನಮೋ        ಕರಾವಳಿಯಲ್ಲಿ ಭಾರಿ ಮಳೆಯ ಅವಾಂತರ - ಕುಸಿದುಬಿತ್ತು ಭಟ್ಕಳದ ಬಸ್ ನಿಲ್ದಾಣ - ಹೊರ ಓಡಿದ ಪ್ರಯಾಣಿಕರು        ಕೆಆರ್​​ಎಸ್​​​ನಿಂದ ಭಾರಿ ಪ್ರಮಾಣದ ನೀರು - ರಂಗನತಿಟ್ಟು ಪಕ್ಷಿಧಾಮ ಸಂಪೂರ್ಣ ಮುಳುಗಡೆ - ಧುಮ್ಮಿಕ್ಕುತ್ತಿದೆ ಹೊಗೇನಕಲ್ ಫಾಲ್ಸ್       
Breaking News

ದೀಪಕ್​ ರಾವ್​ ಹತ್ಯೆ ಹಿಂದೆ ಸ್ಥಳೀಯ ಬಿಜೆಪಿ ನಾಯಕರ ಕೈವಾಡವಿದೆ: ಎಚ್​ಡಿಕೆ

Monday, 08.01.2018, 1:52 PM       No Comments

ಮೈಸೂರು: ಮಂಗಳೂರಿನ ಕಾಟಿಪಳ್ಳದಲ್ಲಿ ನಡೆದಿದ್ದ ದೀಪಕ್​ ರಾವ್​ ಅವರ ಹತ್ಯೆಯ ಹಿಂದೆ ಸ್ಥಳೀಯ ಬಿಜೆಪಿ ನಾಯಕರ ಕೈವಾಡವಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದ್ದಾರೆ.

ರಾಜ್ಯ ಸರ್ಕಾರಕ್ಕೆ ಈ ವಿಷಯ ಗೊತ್ತಿದೆ. ಆದರೆ ಸರ್ಕಾರ ಸತ್ಯವನ್ನು ಬಹಿರಂಗ ಪಡಿಸುತ್ತಿಲ್ಲ. ಇದರಿಂದಾಗಿ ಈ ವಿಚಾರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್​ ನಡುವೆ ಹೊಂದಾಣಿಕೆ ನಡೆದಿದೆಯಾ ಎಂಬ ಪ್ರಶ್ನೆಯನ್ನು ಹುಟ್ಟುಹಾಕಿದೆ ಎಂದು ಕುಮಾರಸ್ವಾಮಿ ಆರೋಪಿಸಿದರು.

ದೀಪಕ್​ ಹತ್ಯೆಯಲ್ಲಿ ಬಿಜೆಪಿ ಕೈವಾಡ: ನನ್ನ ಬಳಿ ಇರುವ ಮಾಹಿತಿ ಸುಳ್ಳೂ ಇರಬಹುದು ಎಂದ ಎಚ್​ಡಿಕೆ

ಪ್ರಕರಣದ ತನಿಖೆ ಮಾಹಿತಿಯನ್ನು ನಾನು ಪಡೆದು ಮಾತನಾಡುತ್ತಿದ್ದೇನೆ. ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳು ಸತ್ಯ ಹೇಳಿದ್ದಾರೆ. ಆದರೂ ಸರ್ಕಾರ ಮಾತ್ರ ಮೌನ ವಹಿಸಿದೆ ಎಂದು ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದರು. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *

Back To Top