Wednesday, 17th January 2018  

Vijayavani

ಸೈಟ್‌ಗಾಗಿ ಸಾಹಿತ್ಯ ಬರೀತಾರೆ - ತಲೆಬುಡ ಇಲ್ಲದ ಸಂದೇಶಗಳನ್ನ ಕೊಡ್ತಾರೆ - ಬುದ್ಧಿಜೀವಿಗಳ ಮೇಲೆ ಮುಗಿಬಿದ್ದ ಕಾಂಟ್ರವರ್ಸಿ ಸಚಿವ        ಪೂಜೆ ಮಾಡಲು ಬಂದವನು ಮಗಳನ್ನೇ ಕೇಳ್ದ - ಜನರ ಕೈಗೆ ಸಿಕ್ಕಿ ಹಣ್ಣುಗಾಯಾದ ಪಿಳ್ಳಂಗೋವಿ ಬಾಬಾ - ಚಿತ್ರದುರ್ಗದ ಕಂಚಿಪುರ ಗ್ರಾಮದಲ್ಲಿ ಡೋಂಗಿಗೆ ಥಳಿತ        14 ತಿಂಗಳಿಂದ ಸಂಬಳ ನೀಡದ ಸಕ್ಕರೆ ಕಾರ್ಖಾನೆ - ಚಿಕಿತ್ಸೆಗೆ ಹಣವಿಲ್ಲದೇ ಮಗು ಕಳೆದುಕೊಂಡ ಕಾರ್ಮಿಕ - ರಾಜಕಾರಣಿಗಳ ಕಿತ್ತಾಟಕ್ಕೆ ಹಸುಗೂಸು ಬಲಿ        ಐಪಿಎಸ್‌ ಅಧಿಕಾರಿಗಳಿಗೆ ಸಿಎಂ, ಗೃಹ ಸಚಿವರ ತರಾಟೆ - ಮತೀಯವಾದಿಗಳ ಮೇಲೆ ಕ್ರಮಕ್ಕೆ ಸೂಚನೆ - ವಾರ್ಷಿಕ ಸಭೆಯಲ್ಲಿ ಕಾನೂನು ಸುವ್ಯವಸ್ಥೆ ಬಗ್ಗೆ ಕ್ಲಾಸ್        ಗುಜರಾತ್​​​​​ನಲ್ಲಿ ಇಸ್ರೇಲ್​ ಪ್ರಧಾನಿ - ಮೋದಿ ಜತೆಗೆ ಕಾರ್‌ನಲ್ಲಿ ಜಂಟಿ ರೋಡ್‌ ಶೋ - ಸಾಬರಮತಿ ಆಶ್ರಮದಲ್ಲಿ ಚರಕ ಸುತ್ತಿದ ನೆತನ್ಯಾಹು       
Breaking News :

ಸಂಸತ್ತಿನಲ್ಲಿ ಕೋಲಾಹಲ: ಪ್ರಧಾನಿ ಕ್ಷಮೆಗೆ ಆಗ್ರಹಿಸಿದ ಕಾಂಗ್ರೆಸ್​

Tuesday, 19.12.2017, 1:55 PM       No Comments

<< 30 ನಿಮಿಷ ಕಲಾಪ ಮುಂದೂಡಿಕೆ >>

ನವದೆಹಲಿ: ಗುಜರಾತ್ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ನೀಡಿದ್ದ ಹೇಳಿಕೆ ಲೋಕಸಭೆಯಲ್ಲಿ ಮಂಗಳವಾರ ಕೋಲಾಹಲವನ್ನೇ ಸೃಷ್ಟಿಸಿತು. ಪ್ರಧಾನಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್ ಸಂಸದರು ಕ್ಷಮಾಪಣೆ ಕೋರುವಂತೆ ಆಗ್ರಹಿಸಿದರು. ಪರಿಣಾಮ 30 ನಿಮಿಷ ಕಲಾಪವನ್ನು ಮುಂದೂಡಲಾಯಿತು.

ಪ್ರಶ್ನೋತ್ತರ ವೇಳೆ ಆರಂಭವಾಗುತ್ತಿದ್ದಂತೆ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ಹೇಳಿಕೆ ವಿಷಯವನ್ನು ಪ್ರಸ್ತಾಪಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಚರ್ಚಿಸಲು ಅವಕಾಶ ಕೊಡಲು ಸ್ಪೀಕರ್​ ಸುಮಿತ್ರಾ ಮಹಾಜನ್ ನಿರಾಕರಿಸಿದ ಹಿನ್ನೆಲೆಯಲ್ಲಿ ಚರ್ಚೆಗೆ ಕಾಂಗ್ರೆಸಿಗರು ಪಟ್ಟು ಹಿಡಿದರು.

ಅಧ್ಯಕ್ಷರ ಪೀಠದ ಎದುರು ಜಮಾಯಿಸಿದ ಕಾಂಗ್ರೆಸ್ ಸದಸ್ಯರು, ಪ್ರಧಾನಿ ಕ್ಷಮೆ ಕೋರಬೇಕು ಹಾಗೂ ಸದನಕ್ಕೆ ಆಗಮಿಸಬೇಕು ಎಂದು ಪಟ್ಟು ಹಿಡಿದರು. ಈಗಾಗಲೇ ಚುನಾವಣೆ ಫಲಿತಾಂಶ ಬಂದಿದೆ. ಚುನಾವಣೆ ಪ್ರಚಾರದ ವೇಳೆ ನಡೆದ ಸಂಗತಿಯನ್ನು ಇಲ್ಲಿ ಚರ್ಚಿಸಲು ಅವಕಾಶ ನೀಡುವುದಿಲ್ಲ. ಒಂದೊಮ್ಮೆ ಸುಗಮ ಕಲಾಪಕ್ಕೆ ಅಡ್ಡಿಪಡಿಸಿದರೆ ಶಿಸ್ತು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.

ಮಲ್ಲಿಕಾರ್ಜುನ ಖರ್ಗೆ ಹಾಗೂ ಎನ್​ಸಿಪಿಯ ತಾರಿಖ್ ಅನ್ವರ್ ಮಾತನಾಡಿ ವಿವಾದವನ್ನು ಚುನಾವಣೆಗೆ ಲಿಂಕ್​ ಮಾಡಬಾರದು ಎಂದು ಹೇಳಿದರು. ಪ್ರಧಾನಿ ಮೋದಿ ಅವರು ಓಖ್ಹಿ ಚಂಡಮಾರುತದ ಸಂತ್ರಸ್ತರನ್ನುಭೇಟಿ ಮಾಡಲು ಲಕ್ಷದ್ವೀಪ ಪ್ರವಾಸದಲ್ಲಿದ್ದಾರೆ.

ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಮಾಜಿ ಉಪರಾಷ್ಟ್ರಪತಿ ಹಮೀದ್ ಅನ್ಸಾರಿ ಹಾಗೂ ಕೆಲ ಕಾಂಗ್ರೆಸ್ ನಾಯಕರು ಪಾಕಿಸ್ತಾನದ ಮಾಜಿ ರಾಯಭಾರಿ ಜತೆ ಚರ್ಚೆ ನಡೆಸಿದ್ದರು. ದೆಹಲಿಯಲ್ಲಿರುವ ಮಣಿಶಂಕರ್ ಅಯ್ಯರ್ ನಿವಾಸದಲ್ಲಿ ಗೌಪ್ಯವಾಗಿ ಸಭೆ ನಡೆಸಲಾಗಿತ್ತು ಎಂದು ಗುಜರಾತ್ ಚುನಾವಣೆ ವೇಳೆ ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದರು.

ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಹಿರಿಯ ಕಾಂಗ್ರೆಸ್​ ನಾಯಕ ಗುಲಾಮ್​ ನಬಿ ಆಜಾದ್​, ಮಾಜಿ ಪ್ರಧಾನಿ ಮನಮೋಹನ್​ ಸಿಂಗ್​ ದೇಶದ ಕುರಿತು ಹೊಂದಿರುವ ನಿಷ್ಠೆಯನ್ನು ಪ್ರಶ್ನಿಸಲಾಗಿದೆ, ಪ್ರಧಾನಿ ಮೋದಿ ಸಂಸತ್ತಿನಲ್ಲಿ ಇದರ ಕುರಿತು ವಿವರಣೆ ನೀಡಬೇಕು ಎಂದು ಆಗ್ರಹಿಸಿದ್ದರು. (ಏಜೆನ್ಸೀಸ್)

Leave a Reply

Your email address will not be published. Required fields are marked *

Back To Top