Friday, 22nd June 2018  

Vijayavani

ಕೊಲೆ ಆರೋಪಿ ಬಂಧಿಸುವ ವೇಳೆ ಹೈಡ್ರಾಮ - ಖಾಕಿ ಮೇಲೆಯೇ ಹಲ್ಲೆಗೆ ಯತ್ನ - ಹಂತಕನ ಮೇಲೆ ಖಾಕಿ ಫೈರಿಂಗ್‌        ಹಣಕಾಸು ವಿಷಯಕ್ಕೆ ಗಂಡಹೆಂಡತಿ ನಡುವೆ ಫೈಟ್‌ - ಪತ್ನಿ ಮೇಲೆ ಪತಿ ಶೂಟೌಟ್‌ - ನಾಪತ್ತೆಯಾಗಿರೋ ಹಂತಕನಿಗಾಗಿ ಖಾಕಿ ತಲಾಶ್‌        ಅಗರ್ ಬತ್ತಿ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ - ಶಾರ್ಟ್‌ ಸರ್ಕ್ಯೂಟ್‌ನಿಂದ ಹೊತ್ತಿ ಉರಿದ ಕಾರ್ಖಾನೆ - ಬೆಂಗಳೂರಿನ ಕೆಪಿ ಅಗ್ರಹಾರದಲ್ಲಿ ಘಟನೆ        ಸರ್ಕಾರದ ಅಸ್ತಿತ್ವಕ್ಕೆ ಗಂಡಾಂತರ - ಸಿಎಂ ಕೈಗೆ ಸಿಕ್ಕಿದೆ ಗುಪ್ತಚರ ವರದಿ - ಸರ್ಕಾರ ಉಳಿಸಿಕೊಳ್ಳಲು ಎಚ್‌ಡಿಕೆ ಮಾಸ್ಟರ್‌ ಪ್ಲಾನ್‌        ಹಸಿರ ಸಿರಿ ನಡುವೆ ದುರ್ನಾಥ - ವಾಕ್‌ ಹೋದವರಿಗೆ ವಾಕರಿಕೆ - ಗಬ್ಬು ನಾರುತ್ತಿದೆ ಕಬ್ಬನ್‌ಪಾರ್ಕ್‌        ಜನದಟ್ಟಣೆ ನಿಯಂತ್ರಣಕ್ಕೆ BMRCL ಪರಿಹಾರ - ಮೆಟ್ರೋ ರೈಲಿಗೆ 3 ಬೋಗಿಗಳ ಸೇರ್ಪಡೆ - ಇಂದಿನಿಂದ ನೇರಳೆ ಮಾರ್ಗದಲ್ಲಿ ಓಡಾಟ       
Breaking News

ಹೊಸ ವರ್ಷದ ಮೊದಲ ದಿನವೇ ಪೊಲೀಸರಿಗೆ ಚಳ್ಳೇ ಹಣ್ಣು ತಿನ್ನಿಸಿದ ಕೈದಿ

Monday, 01.01.2018, 3:52 PM       No Comments

<< ಫಿನಾಯಿಲ್​ ಸೇವಿಸಿ ಆಸ್ಪತ್ರೆಗೆ ದಾಖಲು, ಶೌಚಗೃಹದ ಕಿಟಕಿ ಮುರಿದು ಪರಾರಿ >>

ಮಡಿಕೇರಿ: ಪೊಲೀಸರು ಎಷ್ಟೇ ಎಚ್ಚರಿಕೆಯಿಂದಿದ್ದರೂ ಕಳ್ಳರು ನೀಡುವ ಚಳ್ಳೇ ಹಣ್ಣು ತಿನ್ನುವುದು ಆಗಾಗ್ಗೆ ನಡೆದೇ ಇರುತ್ತವೆ. ವಿಶೇಷವೆಂದರೆ, ಅಂತಹದ್ದೇ ಪ್ರಕರಣವೊಂದು ಮಡಿಕೇರಿಯಲ್ಲಿ ಹೊಸ ವರ್ಷದ ಮೊದಲ ದಿನ ಸೋಮವಾರ ನಡೆದು ಪೊಲೀಸರ ಮುಖ ಕಿವುಚಿದಂತಾಗಿದೆ.

ಪ್ರಳಯಾಂತಕ ಫಿನಾಯಿಲ್​ ಸೇವಿಸಿ ಆಸ್ಪತ್ರೆಗೆ ದಾಖಲಾಗಿ ಶೌಚಗೃಹದ ಕಿಟಕಿಯಿಂದ ಪರಾರಿಯಾಗಿದ್ದಾನೆ.

ಕೆಲವು ದಿನಗಳ ಹಿಂದೆ ಸುಂಟಿಕೊಪ್ಪದಲ್ಲಿ ನಡೆದ ಕಳವು ಪ್ರಕರಣದಲ್ಲಿ ಆರೋಪಿ ಗಣೇಶ್ ಜೈಲುವಾಸಿಯಾಗಿದ್ದ. ನಂತರ ಡಿ.30 ರಂದು ಫಿನಾಯಿಲ್ ಸೇವಿಸಿ ಅಸ್ವಸ್ಥನಾಗಿದ್ದ ಈತನನ್ನು ಪೊಲೀಸರು ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು.

ಬೆಳಗ್ಗೆ 10 ಗಂಟೆ ವೇಳೆಗೆ ಆಸ್ಪತ್ರೆಯ ಶೌಚಗೃಹದ ಕಿಟಕಿ ಮುರಿದು ಕಾಲಿಗೆ ಬುದ್ಧಿ ಹೇಳಿದ್ದಾನೆ. ಪರಿಣಾಮವಾಗಿ ಕಾವಲಿಗಿದ್ದ ಪೇದೆಗಳಿಗೆ ಹಿರಿಯ ಅಧಿಕಾರಿಗಳು ಕ್ಲಾಸ್ ತೆಗೆದುಕೊಂಡಿದ್ದಾರೆ. ಕಳ್ಳ ಗಣೇಶನ ಹೆಡೆಮುರಿ ಕಟ್ಟಲು ಪೊಲೀಸರು ಬಲೆ ಬೀಸಿದ್ದಾರೆ. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *

Back To Top