Sunday, 23rd September 2018  

Vijayavani

ಜಿಮ್​ ತರಬೇತುದಾರನ ಅಪಹರಣ ಮತ್ತು ಹಲ್ಲೆ ಪ್ರಕರಣದಲ್ಲಿ ನಟ ದುನಿಯಾ ವಿಜಯ್​ ಬಂಧನ.        ವಿಧಾನ ಪರಿಷತ್​​ 3 ಸ್ಥಾನಗಳಿಗೆ ಚುನಾವಣೆ: ನಾಮಪತ್ರ ಸಲ್ಲಿಕೆಗೆ ನಾಳೆ ಕೊನೆ ದಿನ, ಬಿಜೆಪಿ ಪಟ್ಟಿ ಇಂದು ಅಂತಿಮ        ಮೋದಿ ಕಳ್ಳ ಎಂದಿದ್ದ ರಾಹುಲ್​ ವಿರುದ್ಧ ನಿರ್ಮಲಾ ಗುಡುಗು: ರಾಹುಲ್​ ಅವರದ್ದು ಕಳ್ಳರ ಕುಟುಂಬ ಎಂದ ಸಚಿವೆ        ಹಾಸನದಲ್ಲಿ ಇಂದು ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ ಮುಖ್ಯಮಂತ್ರಿ ಎಚ್​ಡಿಕೆ       
Breaking News

ಶಾಸಕರ ಅನರ್ಹತೆ ಪ್ರಕರಣ: ತ.ನಾಡು ಸರ್ಕಾರಕ್ಕೆ ತಾತ್ಕಾಲಿಕ ರಿಲೀಫ್​

Thursday, 14.06.2018, 4:07 PM       No Comments

ಚೆನ್ನೈ: ಟಿಟಿವಿ ದಿನಕರನ್​ಗೆ ಸ್ವಾಮಿನಿಷ್ಠೆ ತೋರಿದ್ದ ಎಐಎಡಿಎಂಕೆ 18 ಶಾಸಕರನ್ನು ಅನರ್ಹಗೊಳಿಸಿದ್ದ ಸ್ಪೀಕರ್​ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಮದ್ರಾಸ್​ ಹೈಕೋರ್ಟ್​ ಗುರುವಾರ ಭಿನ್ನ ತೀರ್ಪು ನೀಡಿದೆ.

ಸ್ಪೀಕರ್ ಧನಪಾಲ್ ಆದೇಶವನ್ನು ಸಿಜೆ ಇಂದಿರಾ ಬ್ಯಾನರ್ಜಿ ಎತ್ತಿ ಹಿಡಿದರೆ, ಸ್ಪೀಕರ್ ಆದೇಶವನ್ನ ನ್ಯಾಯಮೂರ್ತಿ ಸುಂದರ್ ಅವರು ತಿರಸ್ಕರಿಸಿದ್ದಾರೆ.

ಈ ತೀರ್ಪಿನಿಂದ ಎಐಎಡಿಎಂಕೆಯ ಇಪಿಎಸ್-ಒಪಿಎಸ್ ಬಣಕ್ಕೆ ತಾತ್ಕಾಲಿಕ ರಿಲೀಫ್​ ಸಿಕ್ಕಂತಾಗಿದೆ. ಆದರೆ, ಟಿಟಿವಿ ದಿನಕರನ್​ ಬಣ ಮಾತ್ರ ವಿಸ್ತೃತ ಪೀಠದಲ್ಲಿ ನ್ಯಾಯಕ್ಕಾಗಿ ಹೋರಾಡಬೇಕಿದೆ. ಜತೆಗೆ 18 ಮಂದಿ ಶಾಸಕರನ್ನು ತಮ್ಮ ತೆಕ್ಕೆಗೆ ತೆಗೆದುಕೊಳ್ಳುವ ಅವಕಾಶ ಇಪಿಎಸ್-ಒಪಿಎಸ್ ಬಣಕ್ಕೆ ದೊರೆತಂತಾಗಿದೆ.

ಕಳೆದ ಆಗಸ್ಟ್‌ನಲ್ಲಿ ದಿನಕರನ್‌ ಬೆಂಬಲಕ್ಕೆ ನಿಂತಿದ್ದ ಶಾಸಕರು ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ವಾಪಸ್ ಪಡೆದಿದ್ದರು. ಇದರಿಂದ ಎಐಎಡಿಎಂಕೆ ಪಕ್ಷದ ವಿರುದ್ಧ ಶಾಸಕರು ನಡೆದುಕೊಂಡ ಹಿನ್ನೆಲೆಯಲ್ಲಿ ತಮಿಳುನಾಡು ವಿಧಾನಸಭೆ ಸ್ಪೀಕರ್‌ 18 ಶಾಸಕರನ್ನು ಅನರ್ಹಗೊಳಿಸಿ ಆದೇಶ ಹೊರಡಿಸಿದ್ದರು. (ಏಜೆನ್ಸೀಸ್​)

Leave a Reply

Your email address will not be published. Required fields are marked *

Back To Top