Tuesday, 16th January 2018  

Vijayavani

ಮಹದಾಯಿ ಉಳಿಸಿಕೊಳ್ಳಲು ಏನು ಬೇಕಾದ್ರೂ ಮಾಡ್ತೀವಿ - ಮತ್ತೆ ಕ್ಯಾತೆ ತೆಗೆದ ಪಾಲ್ಯೇಕರ್​ - ಇತ್ತ ಗೋವಾ ಸಚಿವನ ವಿರುದ್ಧ ಪಾಟೀಲ್ ಕಿಡಿ        ನನ್ನ ವಿರುದ್ಧ ಸುಳ್ಳು ಕೇಸ್​ ದಾಖಲಿಸಲು ಯತ್ನ - ಕೇಂದ್ರ ಸರ್ಕಾರದ ವಿರುದ್ಧ ತೊಗಾಡಿಯಾ ಕಿಡಿ - ಕಣ್ಣೀರಿಟ್ಟು ಅಚ್ಚರಿ ಮೂಡಿಸಿದ ಫೈರ್ ಬ್ರ್ಯಾಂಡ್​        ಆನೆಗಳ ಹಿಂಡಿನಿಂದ ತಪ್ಪಿಸಿಕೊಂಡು ಬಾವಿಗೆ ಬಿದ್ದ ಮರಿ ಆನೆ - ಮರಿ ಮೇಲೆತ್ತಲು ಅರಣ್ಯ ಇಲಾಖೆ ಹರ ಸಾಹಸ - ತಮಿಳುನಾಡಿನ ರಾಯಕೋಟೆ ಬಳಿ ಘಟನೆ        ಭಾರತ ಪ್ರವಾಸದಲ್ಲಿ ಇಸ್ರೇಲ್​ ಪ್ರಧಾನಿ - ಮುಂಬೈಗೆ ಬಂದಿಳಿದ ಮುಂಬೈ ದಾಳಿ ಸಂತ್ರಸ್ತ ಮೋಶೆ - ಭಾರತಕ್ಕೆ ಬಂದಿದ್ದು ಖುಷಿ ತಂದಿದೆ ಎಂದ ಬಾಲಕ        ತಮಿಳುನಾಡಿನಲ್ಲಿ ಮುಂದುವರಿದ ಪೊಂಗಲ್ ಸಡಗರ - ಅಳಂಗನಲ್ಲೂರಿನಲ್ಲಿ ಜಲ್ಲಿಕಟ್ಟು ಕಿಕ್​ - ಸಿಎಂ, ಡಿಸಿಎಂ ರಿಂದ ಕ್ರೀಡೆ ಉದ್ಘಾಟನೆ       
Breaking News :

ಮಹದಾಯಿ ಹೋರಾಟ: ಜ.25ರಂದು ಕರ್ನಾಟಕ ಬಂದ್​ಗೆ ಕರೆ

Thursday, 11.01.2018, 6:57 PM       No Comments

<< ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಪ್ಪು ಬಾವುಟ ಪ್ರದರ್ಶನ: ವಾಟಾಳ್ ನಾಗರಾಜ್ >>

ಬೆಂಗಳೂರು: ಮಹದಾಯಿ ನದಿ ನೀರು ಹಂಚಿಕೆ ವಿಷಯವಾಗಿ ಚಲನಚಿತ್ರ ವಾಣಿಜ್ಯ ಮಂಡಳಿ ಮತ್ತು ಕನ್ನಡಪರ ಸಂಘಟನೆಗಳು ಜನವರಿ 25ರಂದು ಕರ್ನಾಟಕ ಬಂದ್​ಗೆ ಕರೆ ನೀಡಿವೆ.

. 25ರಂದು ರಾಜ್ಯಾದ್ಯಂತ ಚಲನಚಿತ್ರ ಪ್ರದರ್ಶನ ರದ್ದು ಮಾಡುವುದರ ಜೊತೆಗ ಟೌನ್​​ಹಾಲ್​​ನಿಂದ ಫ್ರೀಡಂಪಾರ್ಕ್​​​​​​​​​​​ವರೆಗೆ ಬೃಹತ್ ರ‍್ಯಾಲಿ ನಡೆಸಲು ನಿರ್ಧರಿಸಲಾಗಿದೆ ಎಂದು ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ. ಗೋವಿಂದು ಹೇಳಿದ್ದಾರೆ.

ಯಡಿಯೂರಪ್ಪ ಕೊಟ್ಟು ಮಾತು ಉಳಿಸಿಕೊಳ್ಳಲಿಲ್ಲ. ಬಿಜೆಪಿಯವರು ಜನರ ಕಣ್ಣಿಗೆ ಮಣ್ಣೆರಚಿ ರಾಜಕೀಯ ಮಾಡುತ್ತಿದ್ದಾರೆ. ಮಹದಾಯಿ ಬಗ್ಗೆ ಅಮಿತ್ ಷಾ ಒಂದೇ ಒಂದು ಹೇಳಿಕೆ ನೀಡಿಲ್ಲ. ಇವರೆಲ್ಲಾ ಕೇವಲ ಪಕ್ಷ ಸಂಘಟನೆಗಾಗಿ ರಾಜ್ಯಕ್ಕೆ ಬರ್ತಾರೆ ಅಷ್ಟೆ ಎಂದು ಆರೋಪಿಸಿದ್ದಾರೆ.

ಚಿತ್ರರಂಗ ರೈತರಿಗೋಸ್ಕರ ಇದೆ; ರೈತರ ಪರವಿದೆ. ನಾವು ಕರ್ನಾಟಕ ಬಂದ್ ಮಾಡುತ್ತಿರುವುದು ಕೇಂದ್ರದ ವಿರುದ್ಧ. ಇಲ್ಲಿನ ಬಿಜೆಪಿ ಸಂಸದರ ವಿರುದ್ಧ ಎಂದರು.

ಕಪ್ಪು ಬಾವುಟ ಪ್ರದರ್ಶನ

ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. ಯಾವ ಸರ್ಕಾರಗಳು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಪಾವಗಡದಲ್ಲಿ ನೀರಿನ ಬದಲು ವಿಷ ಕುಡಿಯುತ್ತಿದ್ದಾರೆ. ಹಾಗಾಗಿ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಬಂದಾಗ ಅವರ ವಿರುದ್ಧ ಕಪ್ಪು ಬಾವುಟ ಪ್ರದರ್ಶನ ಮಾಡಲಾಗುವುದು ಎಂದು ಕನ್ನಡ ಚಳವಳಿ ಪಕ್ಷದ ವಾಟಾಳ್ ನಾಗರಾಜ್ ತಿಳಿಸಿದರು. 

Leave a Reply

Your email address will not be published. Required fields are marked *

Back To Top