Friday, 25th May 2018  

Vijayavani

ನಾಮಪತ್ರ ವಾಪಸ್ ಪಡೆದ ಸುರೇಶ್​ಕುಮಾರ್​- ಅವಿರೋಧವಾಗಿ ರಮೇಶ್​ಕುಮಾರ್​ ಆಯ್ಕೆ- ಎರಡನೇ ಬಾರಿಗೆ ಸ್ಪೀಕರ್​ ಆಗಿ ನೇಮಕ        ಸದನದಲ್ಲಿ ವಿಶ್ವಾಮತ ಪರೀಕ್ಷೆ- ಮೂರು ಪಕ್ಷಗಳ ಎಲ್ಲಾ ಶಾಸಕರು ಹಾಜರ್​- ಪ್ರತಿಪಕ್ಷ ನಾಯಕನ ಸ್ಥಾನದಲ್ಲಿ ಬಿಎಸ್​ವೈ        ಮೈತ್ರಿ ಸರ್ಕಾರದ ಪರ್ವ ಆರಂಭ- ಸಾಲ ಮನ್ನಾ ಮಾಡ್ತಾರಾ ಎಚ್​ಡಿಕೆ- ಕೊಟ್ಟ ಮಾತು ಉಳಿಸಿಕೊಳ್ತಾರಾ ಕಾಂಗ್ರೆಸ್​ ನಾಯಕರು        ಸಚಿವ ಸ್ಥಾನಕ್ಕಾಗಿ ಲಾಬಿ ಶುರು- ಕೆಪಿಸಿಸಿ ಅಧ್ಯಕ್ಷ ಸ್ಥಾನ, ಗೃಹಖಾತೆಗೆ ಡಿಕೆಶಿ ಪಟ್ಟು- ಹೈಕಮಾಂಡ್ ಭೇಟಿಗೆ ತೆರಳಲಿರುವ ಕೈ ನಾಯಕರು        ಮುಗಿದ ಬಹುಮತ ಸಾಬೀತಿನ ಪರೀಕ್ಷೆ- ಶಾಸಕರ ರೆಸಾರ್ಟ್​ ರಾಜಕೀಯ ಅಂತ್ಯ- ಇನ್ನಾದ್ರೂ ಕ್ಷೇತ್ರಗಳತ್ತ ತೆರಳ್ತಾರಾ ಎಂಎಲ್​ಎಗಳು        ಸಿಎಂಗೆ ಹೊಸ ಕಾರು ನೀಡಿದ ಡಿಪಿಎಆರ್- ಜಿಎ 6363 ಕಾರ್​ ನಂಬರ್​- ಹೊಸ ಕಾರು ಬಳಸಲು ಸಿಎಂ ನಿರ್ಧಾರ       
Breaking News

ಪ್ರತ್ಯೇಕ ಧರ್ಮ ವಿರುದ್ಧ ಮಹಾಸಭಾ ಜಾಥಾ?

Thursday, 26.04.2018, 3:04 AM       No Comments

ಬೆಂಗಳೂರು: ಲಿಂಗಾಯತ ಪ್ರತ್ಯೇಕ ಧರ್ಮ ಕುರಿತು ರಾಜ್ಯ ಸರ್ಕಾರ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿರುವ ಕುರಿತು ಈಗಾಗಲೆ ಸಾಕಷ್ಟು ಚರ್ಚೆ ನಡೆಸಿರುವ ಅಖಿಲ ಭಾರತ ವೀರಶೈವ ಮಹಾಸಭಾ, ಕಾಂಗ್ರೆಸ್​ಗೆ ಪರೋಕ್ಷವಾಗಿ ಹಿನ್ನಡೆಯಾಗಬಲ್ಲ ಅಭಿಯಾನವೊಂದಕ್ಕೆ ಚಾಲನೆ ನೀಡಲು ಮುಂದಾಗಿದೆ. ಮತದಾನ ಪ್ರಮಾಣ ಹೆಚ್ಚಿಸಬೇಕು ಎಂಬ ಪ್ರಮುಖ ಉದ್ದೇಶದೊಂದಿಗೆ ರಾಜ್ಯದ 5 ಪ್ರಮುಖ ವೀರಶೈವ ಲಿಂಗಾಯತರ ಸ್ಥಳಗಳಿಂದ ಜಾಥಾ ಹೊರಡಲಿದೆ. ಬಸವಕಲ್ಯಾಣ, ಕೂಡಲಸಂಗಮ, ಬೆಳಗಾವಿ, ಚಾಮರಾಜನಗರ ಹಾಗೂ ಕೋಲಾರದಿಂದ ತೆರಳುವ ಜಾಥಾಗಳಲ್ಲಿ ದಾರಿಯುದ್ದಕ್ಕೂ ಸಭೆ, ಸಮಾರಂಭಗಳನ್ನು ನಡೆಸಲಾಗುತ್ತದೆ. ರ‍್ಯಾಲಿ ಮೇ 8ಕ್ಕೆ ಸಿದ್ಧಗಂಗಾ ಮಠದಲ್ಲಿ ಮುಕ್ತಾಯಗೊಳ್ಳಲಿದ್ದು, ತುಮಕೂರಿನಲ್ಲಿ ಬೃಹತ್ ಸಮಾವೇಶ ಆಯೋಜಿಸಲಾಗಿದೆ. ಮತದಾನ ಪ್ರಮಾಣ ಹೆಚ್ಚಳ ಜಾಗೃತಿ ಜತೆಗೆ ಧರ್ಮ ಜಾಗೃತಿ ವಿಷಯವೂ ಪ್ರಸ್ತಾಪವಾಗಲಿದೆ. ವೀರಶೈವ ಲಿಂಗಾಯತ ಒಂದೇ ಎಂಬ ಮಾತು ಸಹಜವಾಗಿಯೇ ಮುನ್ನೆಲೆಗೆ ಬರಲಿದೆ. ಈ ಮೂಲಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಪರೋಕ್ಷವಾಗಿ ಜನಜಾಗೃತಿ ಆಯೋಜಿಸಿದೆ.

ವರುಣದಲ್ಲಿ ವಿಜಯೇಂದ್ರಗೆ ಟಿಕೆಟ್ ನೀಡುವ ಪ್ರಕರಣ ಮುಗಿದ ಅಧ್ಯಾಯ. ಸಾಮಾನ್ಯ ಕಾರ್ಯಕರ್ತನಿಗೆ ಟಿಕೆಟ್ ನೀಡುವುದಾಗಿ ಯಡಿಯೂರಪ್ಪ ಹೇಳಿದ್ದರು. ಅದರಂತೆ 20 ವರ್ಷದಿಂದ ಪಕ್ಷಕ್ಕೆ ದುಡಿಯುತ್ತಿರುವ ಕಾರ್ಯಕರ್ತನಿಗೆ ಅವಕಾಶ ನೀಡಲಾಗಿದೆ. ಯಡಿಯೂರಪ್ಪ ನುಡಿದಂತೆ ನಡೆದಿದ್ದಾರೆ.

| ಅನಂತಕುಮಾರ್ ಕೇಂದ್ರ ಸಚಿವ

ಬಿಜೆಪಿ ನಾಯಕರ ಭೇಟಿ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಪ್ರವಾಸದ ವೇಳೆ ವೀರಶೈವ ಲಿಂಗಾಯತ ಸಮುದಾಯದ ಪ್ರಮುಖ ಸ್ವಾಮೀಜಿಗಳನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ. ರಾಜ್ಯ ಬಿಜೆಪಿ ಪ್ರಭಾರಿ ಪಿ. ಮುರಳೀಧರರಾವ್ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ಸೇರಿ ಅನೇಕ ನಾಯಕರು ಈವರೆಗೆ 1 ಸಾವಿರ ವೀರಶೈವ ಲಿಂಗಾಯತ ಸಾಧು ಸಂತರನ್ನು ಭೇಟಿಯಾಗಿದ್ದಾರೆ. 3 ಸಾವಿರದಷ್ಟು ಗುರಿ ಹೊಂದಲಾಗಿದ್ದು, ಸನಾತನ ಧರ್ಮ ಹಾಗೂ ದೇಶದ ಉಳಿವಿಗೆ ಈ ಚುನಾವಣೆಯಲ್ಲಿ ಬೆಂಬಲ ನೀಡುವಂತೆ ಮನವಿ ಮಾಡುತ್ತಿದ್ದಾರೆ.

ಇಂದು ಪ್ರಧಾನಿ ಮೋದಿ ಸಂವಾದ

ಬೆಂಗಳೂರು: ಚುನಾವಣೆಗೆ ಸ್ಪರ್ಧಿಸಿರುವ 224 ಬಿಜೆಪಿ ಅಭ್ಯರ್ಥಿಗಳ ಜತೆ ಪ್ರಧಾನಿ ಮೋದಿ ಗುರುವಾರ ವಿಡಿಯೋ ಕಾನ್ಪರೆನ್ಸ್ ಮೂಲಕ ಸಂವಾದ ನಡೆಸಲಿದ್ದಾರೆ. ಮೊಬೈಲ್ ಆಪ್ ಮೂಲಕ ಬೆಳಗ್ಗೆ 9 ಗಂಟೆಯಿಂದ ಸಂವಾದ ನಡೆಯಲಿದ್ದು, ಎಲ್ಲ ಅಭ್ಯರ್ಥಿಗಳೂ ಒಟ್ಟಿಗೆ ಪಾಲ್ಗೊಳ್ಳಲಿದ್ದಾರೆ. ರಾಜ್ಯದಲ್ಲಿ ಸರ್ಕಾರ ರಚಿಸುವ ಅವಶ್ಯಕತೆ, ಅಭ್ಯರ್ಥಿಗಳು ಚುನಾವಣೆ ಎದುರಿಸಬೇಕಾದ ರೀತಿಗಳನ್ನು ತಮ್ಮದೇ ಶೈಲಿಯಲ್ಲಿ ವಿವರಿಸಲಿದ್ದಾರೆ. ಮೋದಿ ಆಪ್ ಅಥವಾ ಯೂಟ್ಯೂಬ್ ಲಿಂಕ್ (ಚಿಜಿಠಿ.ಢ/ಕMಠ್ಖಜಿಛಛಿಟಇಟ್ಞ್ಛ್ಟnಛಿ) ಮೂಲಕ ಸಂವಾದದ ನೇರ ಪ್ರಸಾರವನ್ನು ಸಾರ್ವಜನಿಕರು ವೀಕ್ಷಿಸಬಹುದು.

Leave a Reply

Your email address will not be published. Required fields are marked *

Back To Top