Tuesday, 17th July 2018  

Vijayavani

ಕಾಂಗ್ರೆಸ್‌ ಕಿರುಕುಳದಿಂದಲೇ ಸಿಎಂ ಕಣ್ಣೀರು - ಕಾಂಗ್ರೆಸ್‌ ನೆಚ್ಚಿಕೊಂಡು ಹೋದ್ರೆ ಇದೇ ಸ್ಥಿತಿ - ಎಚ್​ಡಿಕೆ  ಕಣ್ಣೀರಿಗೆ ಜೇಟ್ಲಿ ಟಾಂಗ್‌        ವಾಣಿಜ್ಯ ಬ್ಯಾಂಕ್‌ನಲ್ಲಿನ ಚಾಲ್ತಿ ಸಾಲವೂ ಮನ್ನಾ - ಸಿಎಂ ನಿರ್ಧಾರ - ರೈತರಿಗೆ ಮತ್ತೊಂದು ಕೊಡುಗೆ ನೀಡಿದ ಮುಖ್ಯಮಂತ್ರಿ        ಟ್ರಾಫಿಕ್ ನಿಯಮ ಉಲ್ಲಂಘಿಸಿದ್ದ ಶಾಸಕರ ಪುತ್ರ - ಪ್ರಶ್ನಿಸಿದ ಪೇದೆಗೆ ಅವಾಚ್ಯ ಶಬ್ದಗಳಿಂದ ನಿಂದನೆ        ಬಂಗಾಳದಲ್ಲಿ ಮೋದಿ ರ್ಯಾಲಿ ವೇಳೆ ಅವಗಢ - ಪೆಂಡಾಲ್ ಕುಸಿದು 22 ಜನರಿಗೆ ಗಾಯ - ಆರೋಗ್ಯ ವಿಚಾರಿಸಿದ ಪ್ರಧಾನಿ ನಮೋ        ಕರಾವಳಿಯಲ್ಲಿ ಭಾರಿ ಮಳೆಯ ಅವಾಂತರ - ಕುಸಿದುಬಿತ್ತು ಭಟ್ಕಳದ ಬಸ್ ನಿಲ್ದಾಣ - ಹೊರ ಓಡಿದ ಪ್ರಯಾಣಿಕರು        ಕೆಆರ್​​ಎಸ್​​​ನಿಂದ ಭಾರಿ ಪ್ರಮಾಣದ ನೀರು - ರಂಗನತಿಟ್ಟು ಪಕ್ಷಿಧಾಮ ಸಂಪೂರ್ಣ ಮುಳುಗಡೆ - ಧುಮ್ಮಿಕ್ಕುತ್ತಿದೆ ಹೊಗೇನಕಲ್ ಫಾಲ್ಸ್       
Breaking News

ಸುಪ್ರೀಂ ಕೋರ್ಟ್​ ನ್ಯಾಯಮೂರ್ತಿಗಳು ಸುದ್ದಿಗೋಷ್ಠಿಯಲ್ಲಿ ಹೇಳಿದ್ದೇನು..?

Friday, 12.01.2018, 4:45 PM       No Comments

ನವದೆಹಲಿ: ಆಶ್ಚರ್ಯಕರ ಬೆಳವಣಿಗೆಯೊಂದರಲ್ಲಿ ಸುಪ್ರೀಂ ಕೋರ್ಟ್​ನ ನಾಲ್ವರು ನ್ಯಾಯಮೂರ್ತಿಗಳು ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ಸುಪ್ರೀಂ ಕೋರ್ಟ್​ನ ಆಡಳಿತ ವ್ಯವಸ್ಥೆಯಲ್ಲಿ ಎಲ್ಲವೂ ಸರಿಯಿಲ್ಲ, ಕೋರ್ಟ್​ ಅನ್ನು ಉಳಿಸಿ ಎಂದು ಮನವಿ ಮಾಡಿದರು.

ಸುಪ್ರೀಂ ಕೋರ್ಟ್​ ಮುಖ್ಯ ನ್ಯಾಯಮೂರ್ತಿಗಳಿಗೆ ವಿಶೇಷ ಅಧಿಕಾರವೇನೂ ಇಲ್ಲ. ಅವರು ಎಲ್ಲಾ ನ್ಯಾಯಮೂರ್ತಿಗಳಂತೆಯೇ ಸಮಾನ ಅಧಿಕಾರ ಹೊಂದಿದ್ದಾರೆ. ಆದರೆ, ನ್ಯಾಯಮೂರ್ತಿಗಳ ಸಾಲಿನಲ್ಲಿ ಮೊದಲಿಗರಾಗಿರುತ್ತಾರೆ ಅಷ್ಟೇ ಎಂದು ನ್ಯಾಯಮೂರ್ತಿಗಳು ಸಿಜೆಐ ಕುರಿತು ಅಭಿಪ್ರಾಯಪಟ್ಟಿದ್ದಾರೆ.

ಜತೆಗೆ ನಾಲ್ವರು ನ್ಯಾಯಮೂರ್ತಿಗಳು ಸುಪ್ರೀಂ ಕೋರ್ಟ್​ನ ಮುಖ್ಯ ನ್ಯಾಯಮೂರ್ತಿಗಳ ವಿರುದ್ಧ ಹಲವು ಆರೋಪಗಳನ್ನು ಮಾಡಿದ್ದು, ಅವರ ಕಾರ್ಯ ವೈಖರಿಯ ಕುರಿತು ಹಲವು ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ.

ನ್ಯಾಯಮೂರ್ತಿಗಳು ಎತ್ತಿದ ಪ್ರಮುಖ ಪ್ರಶ್ನೆಗಳೇನೆಂದರೆ

  • ಪ್ರಮುಖವಾದ ಪ್ರಕರಣಗಳನ್ನು ಹಾಗೂ ದೇಶದ ಮೇಲೆ ಮತ್ತು ನ್ಯಾಯಾಂಗ ವ್ಯವಸ್ಥೆಯ ಮೇಲೆ ಉತ್ತಮ ಪರಿಣಾಮ ಬೀರುವ ಪ್ರಕರಣಗಳನ್ನು ಬೇರೆ ಹಿರಿಯ ನ್ಯಾಯಮೂರ್ತಿಗಳ ಪೀಠಕ್ಕೆ ಹಂಚಿಕೆ ಮಾಡದೆ ಮುಖ್ಯ ನ್ಯಾಯಮುರ್ತಿಗಳ ನೇತೃತ್ವದ ಪೀಠಕ್ಕೆ ಹಂಚಿಕೆ ಮಾಡಲಾಗುತ್ತದೆ.
  • ಸಿಬಿಐ ನ್ಯಾಯಾಧೀಶ ಬಿ. ಎಂ. ಲೋಯಾ ಅವರ ಅನುಮಾನಾಸ್ಪದ ಸಾವಿನ ತನಿಖೆ ನಡೆಸುವಂತೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಕೋರ್ಟ್​ ನಂ. 10 ಕ್ಕೆ ವಹಿಸಲಾಗಿದೆ. ಈ ಪ್ರಕರಣವನ್ನು ಮೊದಲ ನಾಲ್ಕು ಪೀಠಗಳಿಗೆ ಏಕೆ ವಹಿಸಲಿಲ್ಲ?
  • ಮೆಡಿಕಲ್​ ಕಾಲೇಜು ದಾಖಲಾತಿ ಹಗರಣದ ವಿಚಾರಣೆಯನ್ನು ಜಸ್ಟೀಸ್​ ಚಲಮೇಶ್ವರ್​ ಅವರ ಪೀಠ ಸಿಜೆಐ ನೇತೃತ್ವದ ಪಂಚ ಸದಸ್ಯರ ಪೀಠಕ್ಕೆ ನೀಡಿತ್ತು. ಆದರೆ, ಸಿಜೆಐ ಈ ಪ್ರಕರಣದ ವಿಚಾರಣೆಯನ್ನು ಕೋರ್ಟ್​ ನಂ. 7 ಕ್ಕೆ ವಹಿಸಿದ್ದರು.
  • ಪಂಚ ಸದಸ್ಯರಿರುವ ಪೀಠಕ್ಕೆ ವಹಿಸಿದ ಪ್ರಕರಣವನ್ನು ಸಿಜೆಐ ಕಡಿಮೆ ಸದಸ್ಯರಿರುವ ಪೀಠಕ್ಕೆ ವಹಿಸುವ ಮೂಲಕ ನಿಯಮಾವಳಿಗಳನ್ನು ಪಾಲನೆ ಮಾಡಿಲ್ಲ ಎಂದು ನ್ಯಾಯಮೂರ್ತಿಗಳು ಆರೋಪಿಸಿದ್ದಾರೆ.

Leave a Reply

Your email address will not be published. Required fields are marked *

Back To Top