Wednesday, 24th October 2018  

Vijayavani

ರಂಗೇರಿದ ಉಪ ಚುನಾವಣಾ ಕಣ-ಜಮಖಂಡಿಯಲ್ಲಿಂದು ಬಿಎಸ್ ವೈ ಮತಬೇಟೆ-ಸಕ್ಕರೆ ನಾಡು ಮಂಡ್ಯದಲ್ಲಿಂದು ಸಿದ್ದರಾಮಯ್ಯ ಪ್ರಚಾರ        ದೀಪಾವಳಿಯಿಂದ ಲೋಡ್​ ಶೆಡ್ಡಿಂಗ್-ಇಂಧನ ಇಲಾಖೆ ಅಧಿಕಾರಿಗಳ ಜತೆ ಸಿಎಂ ಸಭೆ-ಕತ್ತಲಲ್ಲಿ ಮುಳುಗುತ್ತಾ ಕರ್ನಾಟಕ..?        ಸಾಲಮನ್ನಾವೂ ಇಲ್ಲ, ಬೆಲೆಯೂ ಇಲ್ಲ-ಬೆವರು ಸುರಿಸಿ ಬೆಳೆದ ಬೆಳೆ ಕೇಳೋರೂ ಇಲ್ಲ-ಅನ್ನದಾತನಿಗೆ ಕಣ್ಣೀರು ತರಿಸುತ್ತಿದೆ ಈರುಳ್ಳಿ        ಬೆಂಗಳೂರಲ್ಲಿ ಅನಧಿಕೃತ ಬಿಟ್ ಕಾಯಿನ್ ATM-ಆರೋಪಿ ಹರೀಶ್ ಬಂಧನ-ಕೆಂಪ್ ಫೋರ್ಟ್​ನಲ್ಲಿದ್ದ ಎಟಿಎಂ ಪೊಲೀಸರ ವಶಕ್ಕೆ        ಕೊಳ್ಳೆಗಾಲದಲ್ಲಿ 17 ವರ್ಷಗಳಿಂದ ಕಾಮಗಾರಿ ಅಪೂರ್ಣ-ಇನ್ನೂ ಆಗಿಲ್ಲ ವಾಲ್ಮೀಕಿ ಭವನ ನಿರ್ಮಾಣ-ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ        ವಿಜಯಪುರದಲ್ಲಿ ಗಂಗಾಕಲ್ಯಾಣ ಗೋಲ್ಮಾಲ್-ಫಲಾನುಭವಿಗಳಿಗೆ ಸಿಗದ ಬೋರ್ ವೇಲ್ ಸೌಲಭ್ಯ-ಯಾರದ್ದೋ ಹೆಸರಲ್ಲಿ ಅನುದಾನ ನೀಡಿದ ಅಧಿಕಾರಿಗಳು       
Breaking News

ರೈತರ ಕಲ್ಯಾಣಕ್ಕಾಗಿ ಬಿಜೆಪಿ ಸರ್ಕಾರ ಸದಾ ಬದ್ಧ: ನರೇಂದ್ರ ಮೋದಿ

Wednesday, 02.05.2018, 10:14 AM       No Comments

ಬೀದರ್‌: ಕೃಷಿ, ರೈತರ ಅಭಿವೃದ್ಧಿಯೇ ನಮ್ಮ ಸರ್ಕಾರದ ಮೊದಲ ಆದ್ಯತೆಯಾಗಿದ್ದು, ಕರ್ನಾಟಕದಲ್ಲಿ ಈಗಿರುವ ಸರ್ಕಾರ ರೈತರನ್ನು ನಿರ್ಲಕ್ಷಿಸಿದೆ. ರೈತರು ಮತ್ತು ಕೃಷಿ ಬಗ್ಗೆ ನಮ್ಮ ಬಳಿ ಯೋಜನೆಗಳು ಬಹಳಷ್ಟಿವೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದರು.

ಬಿಜೆಪಿ ಕಿಸಾನ್​ ಮೋರ್ಚಾ ಪದಾಧಿಕಾರಿಗಳು ಹಾಗೂ ಸದಸ್ಯರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದ ಅವರು, ಮೈಸೂರು ಜಿಲ್ಲಾ ಕಿಸಾನ್ ಮೋರ್ಚಾ ಅಧ್ಯಕ್ಷ ಪ್ರಸನ್ನ ಕೇಳಿದ ಪ್ರಶ್ನೆಗೆ ಉತ್ತರಿಸಿ, ರಾಜ್ಯದಲ್ಲಿ ರೈತರ ಸಮಸ್ಯೆ, ಹಾಗೂ ದೇಶದಲ್ಲಿ ಕರ್ನಾಟಕದ ರೈತರ ಸ್ಥಿತಿಗತಿಗಳ ದತ್ತಾಂಶಗಳನ್ನ ವಿವರಿಸಿದರು. ಹೊಸ ಹೊಸ ಯೋಜನೆಗಳ ಮೂಲಕ ಕೇಂದ್ರ ಸರ್ಕಾರ ರೈತರಿಗೆ ನೆರವು ನೀಡುತ್ತಿದ್ದು, ರಾಜ್ಯದಲ್ಲಿ ಬಿಎಸ್​ವೈ ನೇತೃತ್ವದಲ್ಲಿ ಅಧಿಕಾರಕ್ಕೆ ತರಲು ಕಿಸಾನ್ ಮೋರ್ಚಾ ಕಾರ್ಯಕರ್ತರು ಕೆಲಸ ಮಾಡಬೇಕಿದೆ ಎಂದು ಹೇಳಿದರು.

ಫಸಲ್​ ಬೀಮಾ ಯೋಜನೆ ಬಗ್ಗೆ ಪ್ರಸ್ತಾಪಿಸಿ, ಕೃಷಿಗಾಗಿ ಭೂಮಿ ಫಲವತ್ತತೆ, ನೀರಿನ ಸಂರಕ್ಷಣೆ ಬಗ್ಗೆ ಗಮನ ಹರಿಸಲಾಗುತ್ತದೆ. ಪ್ರಕೃತಿ ವಿಕೋಪದಂತಹ ಸಮಯದಲ್ಲಿ ಸರ್ಕಾರ ರೈತರಿಗೆ ಕೈಜೋಡಿಸಬೇಕು. ರೈತರ ಕಲ್ಯಾಣಕ್ಕಾಗಿ ಬಿಜೆಪಿ ಸರ್ಕಾರ ಸದಾ ಬದ್ಧವಾಗಿದೆ. ರೈತರ ಹಿತಕ್ಕಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳೆರಡೂ ಸಿದ್ಧವಾಗಿವೆ. ಕರ್ನಾಟಕದಲ್ಲಿ ರೈತರ ಅಭಿವೃದ್ಧಿಗಾಗಿ 5 ದೊಡ್ಡ ಯೋಜನೆಗಳನ್ನು ಜಾರಿ ಮಾಡಲಾಗುತ್ತದೆ ಎಂದು ತಿಳಿಸಿದರು.

ಇನ್ನು ಬೀದರ್​ನ ಕಿಸಾನ್ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅಭಿಮನ್ಯು ಅನ್ನೋರು ರೈತರ ಉತ್ಪಾದನೆ ದ್ವಿಗುಣ ಗೊಳಿಸುವ ಸವಾಲು ಹೇಗೆ ಪೂರೈಸುತ್ತಿರಿ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ತಂತ್ರಜ್ಞಾನ ಕುರಿತು ರೈತರಿಗೆ ಜಾಗೃತಿ ಮೂಡಿಸುವಂತೆ ಹೇಳಿದರು. (ದಿಗ್ವಿಜಯ ನ್ಯೂಸ್‌)

Leave a Reply

Your email address will not be published. Required fields are marked *

Back To Top