Friday, 21st September 2018  

Vijayavani

ಸಿಎಂ ‘ದಂಗೆ’ ಹೇಳಿಕೆ ವಿರುದ್ಧ ಕೇಸರಿ ಗುಟುರು - ಡಿಜಿಪಿ ನೀಲಮಣಿ ರಾಜುಗೆ ಬಿಜೆಪಿ ದೂರು - ಸಂಜೆ 4.30ಕ್ಕೆ ಗವರ್ನರ್ ಭೇಟಿ​​​​        ರಾಜ್ಯಾದ್ಯಂತ ಭುಗಿಲೆದ್ದ ‘ದಂಗೆ’ ಉರಿ - ಕಲಬುರಗಿ, ಮಂಡ್ಯ, ಧಾರವಾಡ, ಕೊಡಗಿನಲ್ಲಿ ದಳ್ಳುರಿ        ಬ್ರದರ್ಸ್​​ ತಂಟೆಗೆ ಹೋಗ್ಬೇಡಿ, ವಿವಾದಾತ್ಮಕ ಹೇಳಿಕೆ ಕೊಡ್ಬೇಡಿ - ಸಾಫ್ಟ್​ ಪಾಲಿಟಿಕ್ಸ್ ಬಗ್ಗೆ ಡಿಕೆಶಿಗೆ ಸಿದ್ದು ಕ್ಲಾಸ್        ಕರ್ನಾಟಕದಲ್ಲಿ ನಮಗೆ ಅಧಿಕಾರ ಬೇಕು - ಇಲ್ದಿದ್ರೆ ಲೋಕಸಭೆ ಚುನಾವಣೆಯಲ್ಲಿ ಕಷ್ಟ ಕಷ್ಟ - ಪರಿಸ್ಥಿತಿ ನಿಭಾಯಿಸಲು ಸಿದ್ದುಗೆ ಸೂಚನೆ        ಜಮ್ಮು-ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ - ಅಪಹರಿಸಿದ್ದ ಮೂವರು ಪೊಲೀಸರ ಹತ್ಯೆಗೈದ ಕಿರಾತಕರು        ಓಡಿಶಾದಲ್ಲಿ ಡೆಯ್ ಚಂಡಮಾರುತದ ಅಬ್ಬರ - ಕಾಲಾಪುರಕ್ಕೆ ನುಗ್ಗಿದ ಡ್ಯಾಮ್ ನೀರು ನುಗ್ಗಿ ಪ್ರವಾಹ - ಬಿರುಗಾಳಿಗೆ ಜನರು ಕಂಗಾಲ್       
Breaking News

ಗ್ರಾಪಂ ಕಚೇರಿಯಲ್ಲಿ ಅಧ್ಯಕ್ಷೆ ಪುತ್ರನ ಬರ್ತ್‌ಡೇ!

Wednesday, 08.08.2018, 5:15 AM       No Comments

ಮಂಡ್ಯ: ಪತ್ನಿ ಅಥವಾ ತಾಯಿ ಹೆಸರಲ್ಲಿ ಪತಿ ಅಥವಾ ಮಕ್ಕಳು ಗ್ರಾಮ ಸ್ಥಳೀಯ ಸಂಸ್ಥೆಗಳಲ್ಲಿ ಅಧಿಕಾರ ನಡೆಸುವುದು ಸಾಮಾನ್ಯ. ಅದನ್ನು ಮೀರಿ ಪಂಚಾಯಿತಿ ಅಧ್ಯಕ್ಷೆ ಪುತ್ರನೊಬ್ಬ ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ಬರ್ತ್ ಡೇ ಆಚರಿಸಿಕೊಳ್ಳುವ ಮೂಲಕ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ.

ಮಂಡ್ಯ ಗ್ರಾಮಾಂತರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಾರದಮ್ಮ ಪುತ್ರ ಪಿ.ಎಸ್.ಮಧುಕರ್ ಸೋಮವಾರ ಸಂಜೆ ಪಂಚಾಯಿತಿ ಕಚೇರಿ ಮೀಟಿಂಗ್ ಹಾಲ್‌ನಲ್ಲೇ ಕೇಕ್ ಕತ್ತರಿಸಿ ಸಂಭ್ರಮ ಆಚರಿಸಿದ್ದಾರೆ.

ಮಧುಕರ್ ಜನ್ಮ ದಿನದ ಸಂಭ್ರಮಾಚರಣೆಗೆ ಗ್ರಾಪಂ ಸದಸ್ಯರಾದ ಧನಂಜಯ, ಚೈತ್ರಾ, ಅಟೆಂಡರ್ ರಾಕೇಶ್, ಕಂಪ್ಯೂಟರ್ ಆಪರೇಟರ್ ವಿನುತಾ ಸಾಥ್ ನೀಡಿದ್ದಾರೆ.

ಪಂಚಾಯಿತಿ ಸಭಾಂಗಣದಲ್ಲಿ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಕೆಲವರು ಲೈಕ್ ಮಾಡಿದ್ದರೆ, ಕೆಲವರು ಪರೋಕ್ಷವಾಗಿ ಟೀಕೆ ಮಾಡುತ್ತಿದ್ದಾರೆ.

ತಾಯಿ ಪಂಚಾಯಿತಿ ಅಧ್ಯಕ್ಷೆಯಾಗಿದ್ದು, ಅವರು ಕಚೇರಿಯಲ್ಲಿ ಕಚೇರಿ ಕೆಲಸ ನಿರ್ವಹಿಸಬೇಕು. ಆದರೆ, ಅವರ ಪುತ್ರ ಕಚೇರಿಯಲ್ಲಿ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿರುವುದನ್ನು ಗಮನಿಸಿದರೆ ಆತನೇ ಅಧ್ಯಕ್ಷ ಸ್ಥಾನದ ಜವಾಬ್ದಾರಿ ನಿಭಾಯಿಸುತ್ತಿದ್ದಾನೆ ಎಂಬ ಮಾತುಗಳಿಗೆ ಪುಷ್ಟಿ ನೀಡಿದಂತಾಗಿದೆ.

ಈ ಸಂಬಂಧ ಸ್ಪಷ್ಟನೆ ಕೇಳಲು ಗ್ರಾಪಂ ಅಭಿವೃದ್ಧಿ ಅಧಿಕಾರಿ ಕೆ.ಸಿ.ಯೋಗೇಶ್ ಅವರಿಗೆ ಕರೆ ಮಾಡಿದಾಗ ಅವರು ಸ್ವೀಕರಿಸಲಿಲ್ಲ. ನಂತರ ಕರೆಗಳನ್ನು ಕಟ್ ಮಾಡಿದರು.

‘ಗ್ರಾಪಂ ಕಚೇರಿ ಸಭಾಂಗಣದಲ್ಲಿ ಜನ್ಮದಿನದ ಸಂಭ್ರಮ ಆಚರಿಸಿರುವುದು ಗೊತ್ತಿಲ್ಲ. ಈ ಸಂಬಂಧ ಸಿಬ್ಬಂದಿಗೆ ನೋಟಿಸ್ ನೀಡಲಾಗುವುದು. ನಂತರ ತನಿಖೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು’ ಎಂದು ಮಂಡ್ಯ ತಾಪಂ ಇಒ ನಾಗರಾಜು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

Back To Top