Sunday, 24th June 2018  

Vijayavani

ಆಪ್ತರ ಜತೆ ಮಾಜಿ ಸಿಎಂ ಸಭೆ ಹಿನ್ನೆಲೆ - ಸಿದ್ದರಾಮಯ್ಯ ಭೇಟಿಗೆ ತೆರಳಿದ ಪರಂ - ರಾಜಕೀಯ ವಿಚಾರಗಳ ಬಗ್ಗೆ ನಾಯಕರ ಚರ್ಚೆ ಸಾಧ್ಯತೆ        ಪ್ರಕೃತಿ ಚಿಕಿತ್ಸಾಲಯದಿಂದ ಹೊರ ಬಂದ ಸಿದ್ದು - ಅಭಿಮಾನಿಗಳ ಜತೆ ಮಾಜಿ ಸಿಎಂ ಚರ್ಚೆ - ಕೈ ಕಾರ್ಯಕರ್ತರ ಜತೆ ಸೆಲ್ಫಿಗೆ ಫೋಸ್​​        ಶಿವಮೊಗ್ಗದಲ್ಲಿ ಮತ್ತೆ ಝಳಪಿಸಿದ ಮಾರಕಾಸ್ತ್ರ - ರೌಡಿ ಶೀಟರ್​​​ ಹಬೀಬ್​ ಬರ್ಬರ ಹತ್ಯೆ - ತುಂಗಾನಗರ ಠಾಣೆಯಲ್ಲಿ ಪ್ರಕರಣ        ಖಾತೆ ಹಂಚಿಕೆಯಾಯ್ತು, ಈಗ ಬಂಗಲೆ ಸರದಿ - ಒಂದೊಂದು ಬಂಗಲೆಗೆ ಮೂವರ ಪೈಪೋಟಿ - ಸಿಎಂ ಕುಮಾರಸ್ವಾಮಿಗೆ ಬಂಗಲೆ ಕೊಡೋದೇ ಚಿಂತೆ        ಹಿಟ್​​ಲಿಸ್ಟ್​​ನಲ್ಲಿದ್ದ 20 ಉಗ್ರರ ಪೈಕಿ ಇಬ್ಬರು ಫಿನಿಶ್ - ಕುಲ್ಗಾಮದಲ್ಲಿ ಇಬ್ಬರು ಎಲ್​​ಇಟಿ ಉಗ್ರರು ಉಡೀಸ್​ - ಶಸ್ತ್ರ ಸಹಿತ ಒಬ್ಬ ಟೆರರ್​ ಸರೆಂಡರ್        ಮನೆಗಾಗಿ ಕಣ್ಣೀರಿಟ್ಟ ವೃದ್ಧೆಗೆ ಶಾಸಕರ ಸಹಾಯ - 20 ಸಾವಿರ ಹಣ ನೀಡಿದ ಡಾ.ರಂಗನಾಥ - ದಿಗ್ವಿಜಯ ನ್ಯೂಸ್​ ವರದಿಗೆ ಸ್ಪಂದಿಸಿದ ಕುಣಿಗಲ್​ ಶಾಸಕ       
Breaking News

ಶಾಸಕ ಪ್ರತಾಪಗೌಡ ಪಾಟೀಲ್‌ಗೆ ಸಚಿವ ಸ್ಥಾನ ನೀಡಲು ಆಗ್ರಹ

Saturday, 09.06.2018, 6:24 PM       No Comments

ಮಸ್ಕಿ: ಹಿರಿಯ ಶಾಸಕ ಪ್ರತಾಪಗೌಡ ಪಾಟೀಲ್‌ಗೆ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿದರು.

ಪಟ್ಟಣದ ವಾಲ್ಮೀಕಿ ವೃತ್ತದಿಂದ ಆರಂಭಗೊಂಡ ಮೆರವಣಿಗೆ ಕನಕ ವೃತ್ತದ ಮೂಲಕ ಹಳೇ ಬಸ್ ನಿಲ್ದಾಣ ತಲುಪಿತು. ಹಿಂದುಳಿದ ರಾಯಚೂರು ಜಿಲ್ಲೆ ಅಭಿವೃದ್ಧಿ ಹಾಗೂ ಪಕ್ಷ ಸಂಘಟನೆ ದೃಷ್ಟಿಯಿಂದ ಶಾಸಕ ಪ್ರತಾಪಗೌಡಗೆ ಸಚಿವ ಸ್ಥಾನ ನೀಡಬೇಕು ಎಂದು ಕಾರ್ಯಕರ್ತರು ಒತ್ತಾಯಿಸಿದರು.

ಹಳೇ ಬಸ್ ನಿಲ್ದಾಣ ಬಳಿ ಕೆಲ ಕಾಲ ಸಂಚಾರ ಸ್ಥಗಿತಗೊಳಿಸಿ, ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಅನ್ಯಾಯ ಸರಿಪಡಿಸದಿದ್ದರೆ ವಿವಿಧ ಘಟಕಗಳ ಅಧ್ಯಕ್ಷ ಸೇರಿ ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ನೀಡುವುದಾಗಿ ಯುವ ಘಟಕ ಅಧ್ಯಕ್ಷ ವೀರೇಶ ಕಮತರ ಎಚ್ಚರಿಸಿದರು.

ನಗರ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಬ್ಯಾಳಿ, ಚೇತನ ಪಾಟೀಲ್, ಶರಣಬಸವ ಮಟ್ಟೂರು, ವೀರಭದ್ರಯ್ಯ ಹೆಸರೂರು, ಗೋವಿಂದಪ್ಪ ನಾಯಕ, ಶ್ರೀಧರ, ಅಮರೇಶ ಅಡವಿಬಾವಿತಾಂಡಾ ಹಾಗೂ ಯುವ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಯುವ ಸೇನೆ ಕಾರ್ಯಕರ್ತರು ಇದ್ದರು.

Leave a Reply

Your email address will not be published. Required fields are marked *

Back To Top