Wednesday, 21st March 2018  

Vijayavani

ಮುಂದಿನ ಚುನಾವಣೆಯಲ್ಲಿ ಮೋದಿ ಸೋಲ್ತಾರೆ- ಇಂದಿರಾಗಾಂಧಿಯಂತೆ ನಮ್ಮನ್ನೂ ಗೆಲ್ಲಿಸಿ- ಚಿಕ್ಕಮಗಳೂರಿನಲ್ಲಿ ರಾಹುಲ್‌ ಟಾಕ್‌ವಾರ್‌        ಕುಡಿದು ಅಡ್ಡಾದಿಡ್ಡಿ ಬಸ್‌ ಚಲಾಯಿಸಿದ- ಕಾರು, ಬೈಕ್‌ ಮರಕ್ಕೆ ಡಿಕ್ಕಿ ಹೊಡೆಸಿದ- ಬೆಂಗಳೂರಿನಲ್ಲಿ ಬಿಎಂಟಿಸಿ ಚಾಲಕನ ಅವಾಂತರ        ಜೆಡಿಎಸ್ ಬಂಡಾಯ ಶಾಸಕರ ಅನರ್ಹತೆ ವಿಚಾರ- ಹೈಕೋರ್ಟ್​ಗೆ ಅಭಿಪ್ರಾಯ ತಿಳಿಸಿದ ಸ್ಪೀಕರ್​- ಮುಚ್ಚಿದ ಲಕೋಟೆಯಲ್ಲಿ ಎಜಿ ಮೂಲಕ ರವಾನೆ        5 ಕೋಟಿ ಫೇಸ್​ಬುಕ್‌ಗಳ ಮಾಹಿತಿ ಹ್ಯಾಕ್- ಕಾಂಗ್ರೆಸ್‌ ವಿರುದ್ಧ ಬಿಜೆಪಿ ಗಂಭೀರ ಆರೋಪ- ರವಿಶಂಕರ್‌ ಆರೋಪಕ್ಕೆ ಕೈತಿರುಗೇಟು        ಬೈಕ್ ಸವಾರನ ಮೇಲೆ ಬಿದ್ದ ಬೃಹತ್ ಮರ- ಹೆಲ್ಮೆಟ್ ಧರಿಸಿದ್ದರಿಂದ ಪ್ರಾಣಾಪಾಯದಿಂದ ಪಾರು- ಹೆಲ್ಮೆಟ್​ ಪುಡಿಪುಡಿ ತಲೆ ಸೇಫ್​       
Breaking News

ನಿರಂತರ ಧ್ಯಾನದಿಂದ ಉತ್ಸಾಹಭರಿತ ಜೀವನ

Sunday, 14.01.2018, 2:31 AM       No Comments

ಹುಬ್ಬಳ್ಳಿ: ನಿರಂತರ ಧ್ಯಾನದಿಂದ ದುಗುಡ, ದುಮ್ಮಾನಗಳು ದೂರವಾಗಿ ಮನಸ್ಸು ಪ್ರಫುಲ್ಲವಾಗುತ್ತದೆ. ನಿತ್ಯ ಧ್ಯಾನ ಮಾಡುವುದನ್ನು ರೂಢಿಸಿಕೊಳ್ಳಬೇಕು ಎಂದು ಆರ್ಟ್ ಆಫ್ ಲಿವಿಂಗ್​ನ ಶ್ರೀ ರವಿಶಂಕರ ಗುರುಜಿ ಸಲಹೆ ನೀಡಿದರು.

ಇಲ್ಲಿನ ಕೇಶ್ವಾಪುರದ ಶಬರಿನಗರದಲ್ಲಿ ಪ್ರಾರಂಭಗೊಂಡಿರುವ ಧ್ಯಾನ ಮಂದಿರ ಹಾಗೂ ವ್ಯಕ್ತಿತ್ವ ವಿಕಸನ ಕೇಂದ್ರ ಉದ್ಘಾಟಿಸಿ ಆಶೀರ್ವಚನ ನೀಡಿದ ಅವರು, ಧ್ಯಾನ ಮಂದಿರವನ್ನು ಪ್ರತಿಯೊಬ್ಬರೂ ಉಪಯೋಗಿಸಿಕೊಳ್ಳಬೇಕು. ಹತ್ತಾರು ಸಮಸ್ಯೆಗಳ ಕುರಿತು ಚಿಂತನೆ ನಡೆಸಿಸುವವರ ಮನಸ್ಸು ಧ್ಯಾನದ ನಂತರ ಹಗುರವಾಗುವುದು ಎಂದು ತಿಳಿಸಿದರು.

ಧ್ಯಾನದಿಂದ ಮನಸ್ಸು ನಿರಾಳವಾಗುವ ಜೊತೆಗೆ ಉತ್ತಮ ಆರೋಗ್ಯ ಲಭಿಸುತ್ತದೆ. ಶರೀರದ ಸೌಂದರ್ಯವೂ ಹೆಚ್ಚುತ್ತದೆ. ಮನಸ್ಸು ವಿಚೇಲಿತಗೊಂಡಲ್ಲಿ ಧ್ಯಾನ ಮಂದಿರಕ್ಕೆ ಬರಬೇಕು ಎಂದು ಹೇಳಿದರು.

ನಿರಂತರ ಧ್ಯಾನದಿಂದ ಮಾನಸಿಕ ಹಾಗೂ ದೈಹಿಕ ಶಕ್ತಿ ಹೆಚ್ಚುತ್ತದೆ. ಉತ್ಸಾಹ ಇಮ್ಮಡಿಗೊಳ್ಳುತ್ತದೆ. ಮನಸ್ಸು ಚಿಂತನೆಯಿಂದ ಮುಕ್ತಗೊಳ್ಳುತ್ತದೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *

Back To Top