Friday, 15th December 2017  

Vijayavani

1. ಸನ್ನಿ ನೈಟ್​ಗೆ ವ್ಯಾಪಕ ವಿರೋಧ ಹಿನ್ನೆಲೆ- ಕಾರ್ಯಕ್ರಮ ರದ್ದುಗೊಳಿಸಿದ ರಾಜ್ಯ ಸರ್ಕಾರ- ಸಾವಿರಾರು ಅಭಿಮಾನಿಗಳಿಗೆ ನಿರಾಸೆ 2. ಆಟೋ ಮತ್ತು ಕಾರಿನ ಮೇಲೆ ಟಿಪ್ಪರ್ ಪಲ್ಟಿ- ಸ್ಥಳದಲ್ಲೇ ಮೂವರ ದುರ್ಮರಣ – ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ 3. ಶನಿಮುಖಿ ಸುನೀಲ್​ಗೆ ಸುಪಾರಿ ಕೇಡು- ವಾರದ ಅಚ್ಚರಿಯಲ್ಲಿ ಕ್ರೈಂ ವರದಿ ಕಿಂಗ್ ಲೇಖನ – ಇನ್ನೂ ಬರೆಯೋದು ಇದೆ ಎಂದ ಬೆಳಗೆರೆ 4. ಜಿಲ್ಲಾಧ್ಯಕ್ಷರ ಬದಲಾವಣೆಗೆ ಪಟ್ಟು- ಜೆಡಿಎಸ್ ಸಭೆಯಲ್ಲಿ ಮಾರಾಮಾರಿ- ಬಾಗಲಕೋಟೆಯಲ್ಲಿ ಕೈ ಕೈ ಮಿಲಾಯಿಸಿದ ಕಾರ್ಯಕರ್ತರು 5. ಗುಜರಾತ್ ವಿಧಾನಸಭೆಯಲ್ಲಿ ಯಾರು ಗೆಲ್ತಾರೆ- ನಾಯಿ ಬೊಗಳುತೈತೆ ಭವಿಷ್ಯ – ವೈರಲ್ ಆಯ್ತು ಬೌಬೌ ವಿಡಿಯೋ
Breaking News :

ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ದೂರು

Tuesday, 10.10.2017, 6:34 PM       No Comments

ಹಾಸನ: ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಶಿಷ್ಟಾಚಾರ ಉಲ್ಲಂಘನೆ ಆರೋಪದಡಿ ದೂರು ದಾಖಲಿಸಲಾಗಿದೆ. ವಿಧಾನ ಪರಿಷತ್​ ಸದಸ್ಯ ಗೋಪಾಲಸ್ವಾಮಿಯವರು ದೂರು ದಾಖಲಿಸಿದ್ದಾರೆ.

ಗೋಪಾಲ ಸ್ವಾಮಿ ಅವರು ವಿಧಾನ ಪರಿಷತ್​ ಸಭಾಪತಿ ಡಿ.ಎಚ್​. ಶಂಕರಮೂರ್ತಿ ಅವರಿಗೆ ಲಿಖಿತ ದೂರು ಸಲ್ಲಿಸಿದ್ದು, ಶಿಸ್ತು ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡಿದ್ದಾರೆ.

ಸೆಪ್ಟೆಂಬರ್​ 27 ರಂದು ಡಿಸಿ ಕಚೇರಿಯಲ್ಲಿ ಹಾಸನಾಂಬೆ ಜಾತ್ರೆಯ ಪೂರ್ವಭಾವಿ ಸಭೆ ಕರೆಯಲಾಗಿತ್ತು. ಆದರೆ ಸಭೆಗೆ ನನಗೆ ಆಹ್ವಾನ ನೀಡದೆ ಶಿಷ್ಟಾಚಾರ ಉಲ್ಲಂಘನೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ನಾನು ದೂರು ಸಲ್ಲಿಸಿದ್ದೇನೆ ಎಂದು ಗೋಪಾಲಸ್ವಾಮಿ ಅವರು ತಿಳಿಸಿದ್ದಾರೆ. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *

Back To Top