More

    ಆಧುನಿಕ ತಂತ್ರಜ್ಞಾನದಿಂದ ಸಂಸ್ಥೆಗಳ ಅಭಿವೃದ್ಧಿ ಸಾಧ್ಯ: ಮನು ಬಳಿಗಾರ್

    ಬೆಂಗಳೂರು: ಆಧುನಿಕ ತಂತ್ರಜ್ಞಾನವನ್ನು ಸಮರ್ಪಕವಾಗಿ ಅಳವಡಿಸಿಕೊಂಡರೆ ಬ್ಯಾಂಕ್‌ನಂತಹ ಸಂಸ್ಥೆಗಳು ಅಭಿವೃದ್ದಿ ಹೊಂದಲು ಸಾಧ್ಯ ಎಂದು ಕಸಾಪ ಅಧ್ಯಕ್ಷ ಮನು ಬಳಿಗಾರ್ ತಿಳಿಸಿದರು.

    ಬಸವನಗುಡಿಯ ಚರಣ್ ಸೌಹಾರ್ದ ಕೋ ಆಪರೇಟಿವ್ ಬ್ಯಾಂಕ್ ಗ್ರಾಹಕರಿಗೆ ಹೊರತಂದಿರುವ ಮೊಬೈಲ್ ಬ್ಯಾಂಕಿಂಗ್ ಸೌಲಭ್ಯ ಉದ್ಘಾಟಿಸಿ ಮಾತನಾಡಿದರು.

    ಕರೊನಾದಿಂದ ಜಗತ್ತು ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಇಂತಹ ಪರಿಸ್ಥಿತಿಯಲ್ಲಿ ರಾಷ್ಟ್ರೀಕೃತ ಬ್ಯಾಂಕ್‌ಗಳ ಜತೆ ಸ್ಪರ್ಧೆ ನಡೆಸುವ ಸಹಕಾರ ಬ್ಯಾಂಕ್​ಗಳು ಆಧುನಿಕ ತಂತ್ರಜ್ಞಾನನ್ನು ಅಳವಡಿಸಿಕೊಳ್ಳುವ ಮೂಲಕ ಗ್ರಾಹಕರಿಗೆ ಉತ್ತಮ ಸೌಲಭ್ಯ ಒದಗಿಸಲು ಮುಂದಾಗಿರುವುದು ಸಂತಸದ ವಿಚಾರ. ಆಧುನಿಕತೆ ಅಳವಡಿಸಿಕೊಳ್ಳುವುದು ಎಲ್ಲ ಸಂಸ್ಥೆಗಳಿಗೂ ಅನಿವಾರ್ಯ. ಜಗತ್ತಿನ ವೇಗದ ಜತೆ ಹೆಜ್ಜೆ ಹಾಕದಿದ್ದಲ್ಲಿ ಸಂಸ್ಥೆಗಳ ಅಭಿವೃದ್ಧಿ ಸಾಧ್ಯವಿಲ್ಲ ಎಂದು ಮನು ಬಳಿಗಾರ್ ಅಭಿಪ್ರಾಯಪಟ್ಟರು.

    ಚರಣ್ ಬ್ಯಾಂಕಿನ ಸಂಸ್ಥಾಪಕ ಅಧ್ಯಕ್ಷ ಬಿ.ವಿ. ದ್ವಾರಕಾನಾಥ್ ಮಾತನಾಡಿ, ಆಧುನಿಕ ತಂತ್ರಜ್ಞಾನ ಮೂಲಕ ಗ್ರಾಹಕರಿಗೆ ಹೊಸ ಯೋಜನೆ ನೀಡುವುದು ಬ್ಯಾಂಕಿನ ಪ್ರಮುಖ ಆದ್ಯತೆ. ಮೊಬೈಲ್ ಬ್ಯಾಂಕಿಂಗ್ ಸೇವೆಯಲ್ಲಿ ಗ್ರಾಹಕರಿಗೆ 24 ಗಂಟೆ ಬ್ಯಾಂಕ್ ಖಾತೆ ಮತ್ತು ಹಣ ವರ್ಗಾವಣೆ ಮತ್ತಿತರರ ಮಾಹಿತಿಗಳು ಸಿಗಲಿವೆ ಎಂದರು.

    ನ.17ಕ್ಕೆ ಕಾಲೇಜು ಆರಂಭ, ತರಗತಿಗೆ ಬರೋದು-ಬಿಡೋದು ವಿದ್ಯಾರ್ಥಿಗಳಿಗೆ ಬಿಟ್ಟದ್ದು!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts