Friday, 20th April 2018  

Vijayavani

ಬಿಜೆಪಿ ಅಭ್ಯರ್ಥಿಗಳ 3 ನೇ ಪಟ್ಟಿ ರಿಲೀಸ್​- 59 ಅಭ್ಯರ್ಥಿಗಳ ಹೆಸರು ಪ್ರಕಟ- ವರುಣಾ, ಬಾದಾಮಿ ಇನ್ನೂ ನಿಗೂಢ        ಜೆಡಿಎಸ್​ನಿಂದ ಸೆಕೆಂಡ್​ ಲಿಸ್ಟ್​ ರಿಲೀಸ್​- ಕೈ, ಕಮಲ ರೇಬಲ್​ಗಳಿಗೆ ಮಣೆ- 57 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ        ಎಚ್​ಡಿಕೆ ಆಸ್ತಿ ವಿವರ ಘೋಷಣೆ- ಕುಮಾರಸ್ವಾಮಿ 12 ಕೋಟಿ ಒಡೆಯ- ಗುತ್ತೇದಾರ್​ಗಿಂತ ಪತ್ನಿ ಶ್ರೀಮಂತೆ        ನಟಿ ಉಮಾಶ್ರೀ ಆಸ್ತಿ ವಿವರ ಘೋಷಣೆ- ಸಾಕವ್ವ 1 ಕೆ.ಜಿ ಚಿನ್ನಾಭರಣದ ಒಡತಿ- ಅವಲಂಬಿತರು ಯಾರು ಇಲ್ಲವೆಂದು ಪ್ರಮಾಣಪತ್ರ        ಚಾಮುಂಡೇಶ್ವರಿಯಲ್ಲಿ ಸಿಎಂ, ವರುಣಾದಲ್ಲಿ ಯತೀಂದ್ರ- ಅಪ್ಪ-ಮಗ ನಾಮಪತ್ರ ಸಲ್ಲಿಕೆ- ಭಾರಿ ಬೆಂಬಲಿಗರ ಜತೆ ತೆರಳಿ ನಾಮಿನೇಷನ್​​​​​​        ಬೆಂಗಳೂರಿನಲ್ಲಿ ಗಾಳಿ ಸಹಿತ ಮಳೆ- ಮನೆಗೆ ಹೋಗಲು ವರುಣನ ಅಡ್ಡಿ- ಸಂಜೆಯ ಮಳೆಗೆ ವಾಹನ ಸವಾರರು ಕಂಗಾಲು       
Breaking News

ಕಾಂಗ್ರೆಸ್​ ಸಂಪರ್ಕದಲ್ಲಿ ಮೊಳಕಾಲ್ಮೂರು ಶಾಸಕ ತಿಪ್ಪೇಸ್ವಾಮಿ

Thursday, 12.04.2018, 4:58 PM       1 Comment

ಚಿತ್ರದುರ್ಗ: ಬಿಜೆಪಿ ಟಿಕೆಟ್​ ಸಿಗದೆ ಅಸಮಾಧಾನಗೊಂಡಿರುವ ಮೊಳಕಾಲ್ಮೂರು ಕ್ಷೇತ್ರದ ಶಾಸಕ ತಿಪ್ಪೇಸ್ವಾಮಿ ಸಚಿವ ಆಂಜನೇಯ ಮತ್ತು ಸಿದ್ದರಾಮಯ್ಯ ಅವರ ಸಂಪರ್ಕದಲ್ಲಿದ್ದಾರೆ ಎನ್ನಲಾಗಿದ್ದು, ಕಾಂಗ್ರೆಸ್​ ಸೇರುವ ಮುನ್ಸೂಚನೆ ನೀಡಿದ್ದಾರೆ.

ಇತ್ತೀಚೆಗಷ್ಟೇ ಬಿಡುಗಡೆಯಾದ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಮೊಳಕಾಲ್ಮೂರು ಕ್ಷೇತ್ರದ ಶಾಸಕ ತಿಪ್ಪೇಸ್ವಾಮಿ ಅವರಿಗೆ ಟಿಕೆಟ್​ ತಪ್ಪಿಸಿ ಸಂಸದ ಶ್ರೀರಾಮುಲು ಅವರ ಸ್ಪರ್ಧೆಗೆ ಅವಕಾಶ ನೀಡಲಾಗಿತ್ತು. ಅಂದಿನಿಂದಲೂ ಅಸಮಾಧಾನಗೊಂಡಿರುವ ತಿಪ್ಪೇಸ್ವಾಮಿ ನಿನ್ನೆಯಷ್ಟೇ ಬಳ್ಳಾರಿಗೆ ಭಾರಿ ಸಂಖ್ಯೆಯಲ್ಲಿ ಬೆಂಬಲಿಗರನ್ನು ಕರೆದೊಯ್ದು ಶ್ರೀರಾಮುಲು ಮನವೊಲಿಸಲು ಪ್ರಯತ್ನಿಸಿದ್ದರು. ಆದರೆ, ಇದ್ಯಾವುದೂ ಸಫಲವಾಗದ ಹಿನ್ನೆಲೆಯಲ್ಲಿ ಅವರು, ಶ್ರೀರಾಮುಲು ಮತ್ತು ಬಿಜೆಪಿಗೆ ಸೆಡ್ಡು ಹೊಡೆಯಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ತಿಪ್ಪೇಸ್ವಾಮಿ ಅವರು ಇಂದು ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಮಾತುಕತೆ ನಡೆಸುವ ಸಾಧ್ಯತೆಗಳಿವೆ ಎನ್ನಲಾಗಿದೆ. ಅಲ್ಲದೆ, ಕಾಂಗ್ರೆಸ್ ಟಿಕೆಟ್ ಪಡೆಯಲು ತಿಪ್ಪೇಸ್ವಾಮಿ ಅವರು ತೆರೆಮರೆಯಲ್ಲಿ ಕಸರತ್ತು ನಡೆಸುತ್ತಿದ್ದಾರೆ.

One thought on “ಕಾಂಗ್ರೆಸ್​ ಸಂಪರ್ಕದಲ್ಲಿ ಮೊಳಕಾಲ್ಮೂರು ಶಾಸಕ ತಿಪ್ಪೇಸ್ವಾಮಿ

Leave a Reply

Your email address will not be published. Required fields are marked *

Back To Top