Monday, 20th August 2018  

Vijayavani

ಕೊಡಗಿನ ಸಂತ್ರಸ್ತರಿಗೆ ಗಾಯದ ಮೇಲೆ ಬರೆ - ಫೈನಾನ್ಸ್​ ಕಂಪನಿಗಳಿಂದ ಕಿರುಕುಳ - ಕೊಟ್ಟ ಸಾಲ ವಾಪಸ್​ ಕೊಡುವಂತೆ ಪಟ್ಟು        ಮಣಿಪಾಲ್ ಆಸ್ಪತ್ರೆ ವೈದ್ಯನ ಹುಚ್ಚಾಟ - ಕುಡಿದ ಮತ್ತಿನಲ್ಲಿ ಬಿಎಂಡಬ್ಲ್ಯೂ ಕಾರು ಚಾಲನೆ - ಪಾದಾಚಾರಿ ಬಲಿ ಪಡೆದ ಡಾಕ್ಟರ್        ಹೋಪ್ ಫಾರಂ ಬಳಿ ಕುಸಿದ ಲೈಟ್ ಕಂಬ - ಸ್ಥಳದಲ್ಲೇ ವಿದ್ಯಾರ್ಥಿನಿ ದುರ್ಮರಣ - ಬಿಬಿಎಂಪಿ, ಬೆಸ್ಕಾಂ ನಿರ್ಲಕ್ಷ್ಯಕ್ಕೆ ಮತ್ತೊಂದು ಬಲಿ        ವೈಮಾನಿಕ ಸಮೀಕ್ಷೆಯಲ್ಲಿ ಸಿಎಂ ಪೇಪರ್ ರೀಡಿಂಗ್ - ಸಂತ್ರಸ್ತರಿಗೆ ಬಿಎಸ್ಕೆಟ್ ಎಸೆದ ರೇವಣ್ಣ - ಸಾರ್ವಜನಿಕರಿಂದ ಆಕ್ರೋಶ        ಮಹಾರಾಷ್ಟ್ರದಲ್ಲಿ ಮಹಾ ಮಳೆಯ ಅಬ್ಬರ - ಚಿಕ್ಕೋಡಿಯಲ್ಲಿ 6 ಸೇತುವೆಗಳು ಮತ್ತೆ ಮುಳುಗಡೆ - ಜನರಿಗೆ ಸಂಕಷ್ಟ        ಮರಿಗೆ ತೊಂದರೆ ನೀಡ್ತಿದ್ದಾರೆಂದು ರೊಚ್ಚಿಗೆದ್ದ ಆನೆ - ಫೋಟೋ ತೆಗೆದ ಪ್ರವಾಸಿರ ಮೇಲೆ ಅಟ್ಯಾಕ್       
Breaking News

ನಾಳೆ ಬಹುಮತ ಸಾಬೀತುಪಡಿಸೇ ತೀರುತ್ತೇವೆ: ಶೋಭಾ ಕರಂದ್ಲಾಜೆ

Friday, 18.05.2018, 5:03 PM       No Comments

ಬೆಂಗಳೂರು: ಕೆ.ಜಿ.ಬೋಪಯ್ಯ ಅವರು ನೂತನ ಸಭಾಧ್ಯಕ್ಷರಾಗಿ ಆಯ್ಕೆಯಾಗಿದ್ದು, ಅವರು ಸ್ಪೀಕರ್‌ ಆಗಿದ್ದ ಅವಧಿಯಲ್ಲಿ ಅತ್ಯಂತ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದರು. ಇದಕ್ಕೂ ಕಾಂಗ್ರೆಸ್‌ ಆಕ್ಷೇಪ ವ್ಯಕ್ತಪಡಿಸುತ್ತಿರುವುದು ಸರಿಯಲ್ಲ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 5 ವರ್ಷ ಆಡಳಿತ ಕೊಟ್ಟ ಕಾಂಗ್ರೆಸ್‌ ಕೇವಲ 78 ಸೀಟು ಗಳಿಸಿ ಮಾನಸಿಕ ತೊಳಲಾಟದಿಂದ ಬಳಲುತ್ತಿದೆ. ಕೆ.ಜಿ.ಬೋಪಯ್ಯ ಅವರ ನೇಮಕಕ್ಕೆ ವಿರೋಧ ವ್ಯಕ್ತಪಡಿಸುತ್ತಿದೆ. ಈ ಹಿಂದೆಯೂ ಯುಪಿಎ ಅವಧಿಯಲ್ಲಿಯೇ ಹಂಸರಾಜ್ ಬಾರದ್ವಾಜ್ ಅವರು ಕೆ.ಜಿ.ಬೋಪಯ್ಯ ಅವರನ್ನು ನೇಮಿಸಿದ್ದರು. ಅಂದು ಇಲ್ಲದ ಭಯ ಇಂದೇಕೆ ಎಂದು ಪ್ರಶ್ನಿಸಿದರು.

ಹಂಗಾಮಿ ಸಭಾಧ್ಯಕ್ಷರೇ ನಾಳಿನ ವಿಧಾನ ಮಂಡಲದ ಅಧಿವೇಶನ ನಡೆಸಿ, ಎಲ್ಲ ಶಾಸಕರಿಗೂ ಪ್ರಮಾಣ ವಚನ ಬೋಧಿಸಲಿದ್ದಾರೆ. ಸಂಜೆ ನಡೆಯುವ ಬಹುಮತ ಸಾಬೀತುವಿನಲ್ಲೂ ಕೂಡ ಅವರೇ ಕಾರ್ಯನಿರ್ವಹಿಸುತ್ತಾರೆ ಎಂದು ಸುಪ್ರೀಂ ಕೋರ್ಟ್‌ ತಿಳಿಸಿದೆ. ಹೀಗಿದ್ದರೂ ಬೋಪಯ್ಯ ಅವರ ನೇಮಕಕ್ಕೆ ಕಾಂಗ್ರೆಸ್‌ ಆಕ್ಷೇಪ ವ್ಯಕ್ತಪಡಿಸುತ್ತಿದೆ.

ಕಾಂಗ್ರೆಸ್ ಶಾಸಕರಿಗೆ ಹತಾಶೆ

ಕಾಂಗ್ರೆಸ್‌ನ ಶಾಸಕರು ಇಂದು ಹತಾಶರಾಗಿದ್ದಾರೆ. ಜೆಡಿಎಸ್‌ ತಮ್ಮನ್ನು ನಡೆಸಿಕೊಳ್ಳುವ ಕುರಿತು ಅವರು ಭಯದಲ್ಲಿದ್ದಾರೆ. 78 ಸೀಟುಗಳನ್ನು ಗೆದ್ದ ಕಾಂಗ್ರೆಸ್‌ ಇಂದು ಕಡಿಮೆ ಸೀಟುಗಳನ್ನು ಪಡೆದ ಜೆಡಿಎಸ್‌ನೊಂದಿಗೆ ಮೈತ್ರಿ ಮಾಡಿಕೊಂಡಿದೆ. ಹೀಗಿರುವಾಗ ನಾವು ನಾಳೆ ಬಹುಮತ ಸಾಬೀತುಪಡಿಸುತ್ತೇವೆ ಎನ್ನುವ ವಿಶ್ವಾಸದಿಂದಲೇ ಮುಂದುವರಿಯುತ್ತಿದ್ದೇವೆ ಎಂದು ಹೇಳಿದರು.

ರಾಜ್ಯದಲ್ಲಿ ಕಾಂಗ್ರೆಸ್​ನವರು ಹಿಟ್ಲರ್​ ರೀತಿ ನಡೆದುಕೊಂಡರು. ಅದಕ್ಕಾಗಿ ಕರ್ನಾಟಕದ ಜನರು ಅವರಿಗೆ ಸರಿಯಾದ ದಾರಿ ತೋರಿಸಿದ್ದಾರೆ. ಹೀಗಾಗಿಯೇ ಕಾಂಗ್ರೆಸ್​, ಜೆಡಿಎಸ್​ಗೆ ಅಷ್ಟು ಮತ ಹಾಕಿದ್ದಾರೆ. ನಿಮ್ಮ ದುರಹಂಕಾರಕ್ಕೆ ಜನತೆ ಸರಿಯಾದ ಪಾಠ ಕಲಿಸಿದ್ದಾರೆ. ನರೇಂದ್ರ ಮೋದಿ ಅತ್ಯಂತ ಹೆಚ್ಚು ರಾಜ್ಯದಲ್ಲಿ ಬಿಜೆಪಿಯನ್ನು ಬಲಪಡಿಸಿದ್ದಾರೆ. ನಾವು 22 ರಾಜ್ಯಗಳಲ್ಲಿ ಅಧಿಕಾರವನ್ನು ನಡೆಸುತ್ತಿದ್ದೇವೆ. ನಮ್ಮ ದೇಶದ ಪ್ರಧಾನಿ ಬೇರೆ ದೇಶಕ್ಕೆ ಹೋದರು ಜನರು ಗೌರವ ಕೊಡುತ್ತಾರೆ. (ದಿಗ್ವಿಜಯ ನ್ಯೂಸ್)

Leave a Reply

Your email address will not be published. Required fields are marked *

Back To Top