Tuesday, 21st November 2017  

Vijayavani

1. ಇಂಧನ ಇಲಾಖೆಯಲ್ಲಿ ಅವ್ಯವಹಾರ ಆರೋಪ – ವಿಧಾನಸಭೆಯಲ್ಲಿ ಸದನ ಸಮಿತಿ ವರದಿ ಮಂಡನೆ – ಸಂಸದೆ ಶೋಭಾ ವಿರುದ್ಧ ಡಿಕೆಶಿ ಅಸ್ತ್ರ 2. ಮದ್ಯಪಾನ ನಿಷೇಧಕ್ಕೆ ಸದನದಲ್ಲಿ ಗುದ್ದಾಟ – ಮದ್ಯ ವಿರೋಧಿ ಹೋರಾಟಕ್ಕೆ ಶೆಟ್ಟರ್​ ಸಾಥ್​​​​​ – ಸಿಎಂ ವಿರುದ್ಧ ಸಂಜಯ್​​ ಪಾಟೀಲ್​​ ಕಟು ಟೀಕೆ 3. 63ರಲ್ಲಿ ಬಿಡುಗಡೆಯಾಗಿತ್ತು ಪದ್ಮಾವತಿ ಚಿತ್ರ – ಆಗಿಲ್ಲದ ವಿವಾದ ಈಗ ಸೃಷ್ಟಿ – ವಿರೋಧಿ ಪಡೆಗೆ ಪ್ರಶ್ನೆ ಮುಂದಿಟ್ಟ ಚಿತ್ರತಂಡ 4. ತ್ರಿವಳಿ ತಲಾಖ್​ಗೆ ಸದ್ಯದಲ್ಲೇ ಬ್ರೇಕ್​ – ಚಳಿಗಾಲದ ಅಧಿವೇಶನದಲ್ಲಿ ವಿಧೇಯಕ ಮಂಡನೆ – ಕೇಂದ್ರ ಸರ್ಕಾರದ ಮಹತ್ವದ ನಡೆ 5. ಐಶ್ವರ್ಯ ಫೋಟೋ ತೆಗೆಯಲು ನೂಕುನುಗ್ಗಲು – ಮಾಧ್ಯಮದವರ ನಡೆಗೆ ಬಚ್ಚನ್​​​​​​​ ಸೊಸೆ ಕಣ್ಣೀರು – ಕೈಮುಗಿದು ಕಣ್ಣೀರಿಟ್ಟ ಐಶ್ವರ್ಯ
Breaking News :

ಜೀವದ ಜತೆ ಚೆಲ್ಲಾಟ: ಹುಳು ಬಿದ್ದ ಗ್ಲೂಕೋಸ್​ ಹಾಕಲು ಮುಂದಾದ ಆಸ್ಪತ್ರೆ

Monday, 10.07.2017, 12:19 PM       No Comments

ದೊಡ್ಡಬಳ್ಳಾಪುರ: ವೈದ್ಯರು ಸಾಕ್ಷಾತ್​ ದೇವರ ರೂಪ, ರೋಗಿಗಳ ಜೀವ ರಕ್ಷಣೆಗಾಗಿ ಅವರು ಸಂಪೂರ್ಣವಾಗಿ ಪ್ರಯತ್ನಿಸುತ್ತಾರೆ ಎಂಬ ನಂಬಿಕೆ ಇದೆ. ಅದರಂತೆ ರೋಗಿಗಳು ವೈದ್ಯರನ್ನು ಸಂಪೂರ್ಣವಾಗಿ ನಂಬಿ ಅವರಿಂದ ಚಿಕಿತ್ಸೆ ಪಡೆಯುತ್ತಾರೆ. ಆದರೆ ರೋಗಿಯ ನಂಬಿಕೆಯನ್ನು ಸುಳ್ಳಾಗಿಸುವಂತಹ ಒಂದು ಘಟನೆ ದೊಡ್ಡಬಳ್ಳಾಪುರದಲ್ಲಿ ಇಂದು ನಡೆದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಮುತ್ತಸಂದ್ರ ಗ್ರಾಮದ ಶಾಂತಮ್ಮ ಎಂಬುವವರು ಜ್ವರಕ್ಕೆ ಚಿಕಿತ್ಸೆ ಪಡೆಯಲು ನಗರದ ಡಿ. ಕ್ರಾಸ್​ನಲ್ಲಿರುವ ನಂದಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಬಂದಿದ್ದರು. ಶಾಂತಮ್ಮ ಅವರನ್ನು ಪರೀಕ್ಷಿಸಿದ ವೈದ್ಯರು ಅವರಿಗೆ ಗ್ಲೂಕೋಸ್​ ಹಾಕಬೇಕೆಂದು ತಿಳಿಸಿದ್ದಾರೆ.

ರೋಗಿಯ ಸಂಬಂಧಿಕರು ಆಸ್ಪತ್ರೆಯಲ್ಲಿನ ಮೆಡಿಕಲ್​ ಸ್ಟೋರ್​ನಲ್ಲಿ ಗ್ಲೂಕೋಸ್​ ಖರೀದಿದ್ದಾರೆ. ಆದರೆ ಗ್ಲೂಕೋಸ್​ ಬಾಟಲ್​ನಲ್ಲಿ ಹುಳು ಬಿದ್ದಿರುವುದು ಪತ್ತೆಯಾಗಿದೆ. ಇದನ್ನು ಆಸ್ಪತ್ರೆಯ ಸಿಬ್ಬಂದಿಯ ಗಮನಕ್ಕೆ ತಂದಿದ್ದಾರೆ. ಆದರೆ ಆಸ್ಪತ್ರೆ ಸಿಬ್ಬಂದಿ ಕೀಳಾಗಿ ಮಾತನಾಡಿ ನಿಂದಿಸಿದ್ದಾರೆ ಎಂದು ರೋಗಿಯ ಸಂಬಂಧಿಕರು ತಿಳಿಸಿದ್ದಾರೆ.

ಇದರಿಂದ ಆಕ್ರೋಶಗೊಂಡ ರೋಗಿಯ ಸಂಬಂಧಿಕರು ಆಸ್ಪತ್ರೆಯ ಸಿಬ್ಬಂದಿ ಬೇಜವಾಬ್ದಾರಿತನದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.

(ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *

Back To Top