Monday, 11th December 2017  

Vijayavani

1. ಜಮ್ಮುವಿನಲ್ಲಿ ಗುಂಡಿನ ಚಕಮಕಿ- ಯೋಧರ ಗುಂಡೇಟಿಗೆ ಮೂವರು ಉಗ್ರರು ಮಟಾಶ್​​​- ಒಬ್ಬ ಜೀವಂತವಾಗಿ ಸೆರೆ, ವಿಚಾರಣೆ 2. ರವಿ ಬೆಳಗೆರೆ ಕಸ್ಟಡಿ ಅವಧಿ ಇಂದಿಗೆ ಅಂತ್ಯ- ಮಧ್ಯಾಹ್ನ ನ್ಯಾಯಾಲಯಕ್ಕೆ ಪತ್ರಕರ್ತ ಹಾಜರು- ಜಾಮೀನು ಕೊಡ್ತಾರಾ ನ್ಯಾಯಾಧೀಶರು..? 3. ಮಕ್ಕಳ ಮೊಟ್ಟೆ ಗುತ್ತಿಗೆದಾರರ ಹೊಟ್ಟೆಗೆ- ಕೊಪ್ಪಳದಲ್ಲಿ ನಡೆದಿದೆ ಮೊಟ್ಟೆ ಗೋಲ್​​ಮಾಲ್​- ಡಿಸಿ ಸೇರಿ ನಾಲ್ವರ ವಿರುದ್ಧ ಲೋಕಾಯುಕ್ತಕ್ಕೆ ದೂರು 4. ಸರ್ಕಾರಿ ಜಾಗದ ಮೇಲೆ ಬಿಲ್ಡರ್​ ಕಣ್ಣು- ರಾತ್ರೋರಾತ್ರೊ ಮನೆ ಖಾಲಿಗೆ ಆವಾಜ್​​- ಹುಬ್ಬಳ್ಳಿಯಲ್ಲಿ ದಯಾಮರಣಕ್ಕೆ 12 ಕುಟುಂಬದಿಂದ ಅರ್ಜಿ 5. ಗುತ್ತಿಗೆದಾರರ ಬಳಿ ಸರ್ಕಾರಿ ಫೈಲ್​​​​​ ಪ್ರಕರಣ- ಸ್ಪಷ್ಟನೆ ಕೋರಿ ಎಇಇಗೆ ನೋಟಿಸ್​​​- ಇದು ದಿಗ್ವಿಜಯ ನ್ಯೂಸ್​​ ಬಿಗ್​​ ಇಂಪ್ಯಾಕ್ಟ್​​​​
Breaking News :

2ನೇ ಕ್ವಾಲಿಫೈಯರ್​ನಲ್ಲಿ ಗೆದ್ದು ಫೈನಲ್ ಪ್ರವೇಶಿಸಿದ ಮುಂಬೈ

Friday, 19.05.2017, 11:24 PM       No Comments

ಬೆಂಗಳೂರು: ಬೌಲಿಂಗ್ ಮತ್ತು ಬ್ಯಾಟಿಂಗ್ ವಿಭಾಗದಲ್ಲಿ ಅತ್ಯುತ್ತಮ ನಿರ್ವಹಣೆ ತೋರಿದ ಮುಂಬೈ ಇಂಡಿಯನ್ಸ್ ತಂಡ ಐಪಿಎಲ್-10ನೇ ಆವೃತ್ತಿಯ 2ನೇ ಕ್ವಾಲಿಫೈಯರ್ ಪಂದ್ಯದಲ್ಲಿ ಕೆಕೆಆರ್ ವಿರುದ್ಧ 6 ವಿಕೆಟ್​ಗಳ ಗೆಲುವು ದಾಖಲಿಸಿ ಫೈನಲ್​ಗೆ ಪ್ರವೇಶಿಸಿದೆ.

ಕೆಕೆಆರ್ ನೀಡಿದ 108 ರನ್ ಗುರಿಯನ್ನು ಬೆನ್ನತ್ತಿದ ಮುಂಬೈ 14.3 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 111 ರನ್ ಗಳಿಸುವ ಮೂಲಕ ಸುಲಭವಾಗಿ ಜಯ ಗಳಿಸಿತು. ಮುಂಬೈ ಇಂಡಿಯನ್ಸ್ ಪರ ಕೃನಾಲ್ ಪಾಂಡ್ಯ (45*) ಮತ್ತು ರೋಹಿತ್ ಶರ್ಮಾ (26) ಅತ್ಯುತ್ತಮ ನಿರ್ವಹಣೆ ತೋರಿದರು. ಕೆಕೆಆರ್ ಪರ ಪಿಯೂಶ್ ಚಾವ್ಲಾ 34 ಕ್ಕೆ 2 ವಿಕೆಟ್ ಪಡೆದರು.

ಇದಕ್ಕೂ ಮೊದಲು ಮೊದಲ ಇನಿಂಗ್ಸ್​ನಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್​ಗೆ ಇಳಿದ ಕೆಕೆಆರ್ ತಂಡ ಬೂಮ್ರಾ (7 ಕ್ಕೆ 3) ಮತ್ತು ಕರ್ಣ್ ಶರ್ಮಾ (16 ಕ್ಕೆ 4) ನಡೆಸಿದ ಕರಾರುವಕ್ ಬೌಲಿಂಗ್ ದಾಳಿಗೆ ಸಿಲುಕಿ 18.5 ಓವರ್​ಗಳಲ್ಲಿ ಕೇವಲ 107 ರನ್​ಗಳಿಗೆ ಆಲೌಟಾಯಿತು. ಕೆಕೆಆರ್ ಪರ ಸೂರ್ಯಕುಮಾರ್ ಯಾದವ್ (31) ಮತ್ತು ಇಶಾಂಕ್ ಜಗ್ಗಿ (28) ಮಾತ್ರ ಮುಂಬೈ ಬೌಲಿಂಗ್ ದಾಳಿಯನ್ನು ಎದುರಿಸಿ ಸ್ವಲ್ಪ ಸಮಯ ಕ್ರೀಸ್​ನಲ್ಲಿ ಉಳಿದು ತಂಡದ ಮೊತ್ತವನ್ನು ಹೆಚ್ಚಿಸಿದರು.

ಮುಂಬೈ ಇಂಡಿಯನ್ಸ್ ತಂಡ ಭಾನುವಾರ ಹೈದರಾಬಾದ್​ನಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ರೈಸಿಂಗ್ ಪುಣೆ ಸೂಪರ್ ಜೈಂಟ್ ತಂಡವನ್ನು ಎದುರಿಸಲಿದೆ.

– ಏಜೆನ್ಸೀಸ್

(ವೈವಿಧ್ಯಮಯ ಸುದ್ದಿಗಳಿಗೆ ವಿಜಯವಾಣಿ ಪತ್ರಿಕೆ ಓದಿರಿ)

Leave a Reply

Your email address will not be published. Required fields are marked *

Back To Top