Wednesday, 22nd November 2017  

Vijayavani

1. ಉಗ್ರನ ವಿರುದ್ಧ ಕೊಡಲಿಲ್ಲ ಪಾಕ್ ಸಾಕ್ಷ್ಯ – LET ಕ್ರಿಮಿ ಹಫೀಜ್ ಸಯೀದ್​ಗೆ ಕ್ಲೀನ್​ಚಿಟ್ – ಮನೆಯಿಂದ ಹೊರಬರ್ತಾನೆ ಮುಂಬೈ ದಾಳಿ ಮಾಸ್ಟರ್ ಮೈಂಡ್ 2. ಅಲೆಮಾರಿಗಳ ಮನೆ ತೆರವು ವೇಳೆ ಅಮಾನವೀಯ ವರ್ತನೆ – ನಡುರಸ್ತೆಯಲ್ಲಿ ಮಹಿಳೆಗೆ ಹೆರಿಗೆ – ದಿಗ್ವಿಜಯ ನ್ಯೂಸ್​ ವರದಿಗೆ ಡಿಸಿ ಸ್ಪಂದನೆ 3. ಹೆರಿಗೆ ವೇಳೆ ಮೃತಪಟ್ಟಿದ್ದಾಳೆ ಅಂದ್ರು ಡಾಕ್ಟರ್ಸ್​ – ಅಂತ್ಯ ಸಂಸ್ಕಾರದ ವೇಳೆ ಕಣ್ಣು ಬಿಟ್ಲಂತೆ ಬಾಣಂತಿ – ಮನೆಗೆ ತರೋವಷ್ಟರಲ್ಲಿ ಮತ್ತೆ ಸಾವಿನ ದರ್ಶನ 4. ಕೊಪ್ಪಳ ಜಿಲ್ಲಾಪ್ರವಾಸದಲ್ಲಿ ಎಚ್​ಡಿಡಿ – ಗವಿಮಠಕ್ಕೆ ಮಾಜಿ ಪ್ರಧಾನಿ ಭೇಟಿ – ಇಳಿವಯಸ್ಸಿನಲ್ಲೂ ಕಿಂಡಿಯಲ್ಲೆ ತೆರಳಿ ದರ್ಶನ 5. ಯೂರ್ಟನ್​ ವೇಳೆ ಕಾರಿಗೆ ಲಾರಿ ಡಿಕ್ಕಿ – ಡಿಕ್ಕಿ ಹೊಡೆದ ಲಾರಿಗೆ ಟ್ರಕ್ ಡ್ಯಾಶ್ – ಸೌದಿ ಹೈವೇಯಲ್ಲಿ ಹಾರಿಬಲ್ ಆಕ್ಸಿಡೆಂಟ್
Breaking News :

ಬ್ಲೂಗೇಮ್‌ ಹುಡುಕಾಟ: ರಾಜ್ಯದಲ್ಲೇ ಮೊದಲು ಮೈಸೂರು, ನಂತರ ಬೆಂಗಳೂರು

Saturday, 09.09.2017, 1:38 PM       No Comments

ಮೈಸೂರು: ವಿಶ್ವಾದ್ಯಂತ ತೀವ್ರ ತಲ್ಲಣ ಸೃಷ್ಟಿಸಿರುವ ಡೆಡ್ಲಿ ಗೇಮ್ ಎಂಬ ಖ್ಯಾತಿಯ ಬ್ಲೂವೇಲ್‌ಗೆ ರಾಜ್ಯದ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅತಿ ಹೆಚ್ಚು ಹುಡುಕಾಟ ನಡೆಸಿರುವ ಆಘಾತಕಾರಿ ಸಂಗತಿ ಬೆಳಕಿಗೆ ಬಂದಿದೆ.

ಈ ಆತಂಕಕಾರಿ ಮಾಹಿತಿ ಹೊರಬೀಳುತ್ತಿದ್ದಂತೆ ಎಚ್ಚೆತ್ತ ಶಿಕ್ಷಣ ಇಲಾಖೆ ಮೈಸೂರು ನಗರ ಹಾಗೂ ಜಿಲ್ಲಾದ್ಯಂತ ಇರುವ ಒಟ್ಟು 3,387 ಶಾಲೆಗಳಲ್ಲಿ ಅಪಾಯಕಾರಿ ಬ್ಲೂವೇಲ್ ಗೇಮ್ ಬಗ್ಗೆ ಜಾಗೃತಿ ಮೂಡಿಸುವಂತೆ ಸುತ್ತೋಲೆ ಹೊರಡಿಸಿದೆ.

To download Vijayavani Android App, click here

ಮೈಸೂರು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಡಾ. ಬಿ.ಕೆ.ಎಸ್ ವರ್ಧನ್ ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸುತ್ತೋಲೆ ರವಾನಿಸಿ ಬ್ಲೂವೇಲ್ ಗೇಮ್ ನ ಅಪಾಯದ ಬಗ್ಗೆ ಶಾಲಾ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವಂತೆ ಸೂಚಿಸಿದ್ದಾರೆ.

ಗೂಗಲ್ ಟ್ರೆಂಡ್ಸ್ ಅಂಕಿ ಅಂಶಗಳಿಂದ ಬಹಿರಂಗವಾಗಿರುವ ಸಂಗತಿಯಂತೆ ಬ್ಲೂವೇಲ್ ಗೇಮ್‌ಗಾಗಿ ಹುಡುಕಾಟ ನಡೆಸಿರುವ ದೇಶದ ಪ್ರಮುಖ ನಗರಗಳ ಪೈಕಿ ಇಡೀ ದೇಶದಲ್ಲೇ 9 ನೇ ಸ್ಥಾನದಲ್ಲಿರುವ ಮೈಸೂರು, ಇಡೀ ರಾಜ್ಯದಲ್ಲಿ 1 ನೇ ಸ್ಥಾನದಲ್ಲಿದೆ. ಮೈಸೂರಿನ ನಂತರ ರಾಜ್ಯದಲ್ಲಿ ಎರಡನೇ ಸ್ಥಾನವನ್ನು ಬೆಂಗಳೂರು ಪಡೆದಿದ್ದು, ಇಡೀ ದೇಶದಲ್ಲೇ ಬ್ಲೂವೇಲ್ ಗೇಮ್ ಹುಡುಕಾಟದಲ್ಲಿ ಬೆಂಗಳೂರು 23ನೇ ಸ್ಥಾನದಲ್ಲಿದೆ.

ಕಳೆದ ಮೂರು ತಿಂಗಳ ಅವಧಿಯಲ್ಲಿ ಮೈಸೂರಿನಲ್ಲಿ ಅತಿ ಹೆಚ್ಚು ಮಂದಿ ಅಪಾಯಕಾರಿ ಬ್ಲೂವೇಲ್ ಗೇಮ್‌ಗಾಗಿ ತೀವ್ರ ಹುಡುಕಾಡ ನಡೆಸಿದ್ದಾರೆ. ಇದರಿಂದ ಎಚ್ಚೆತ್ತಿರುವ ಶಿಕ್ಷಣ ಇಲಾಖೆ ಶಾಲಾ ಹಂತದಲ್ಲೇ ಬ್ಲೂವೇಲ್ ಗೇಮ್‌ನ ಅಪಾಯ, ದುಷ್ಪರಿಣಾಮದ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸಲು ಕ್ರಮ ಕೈಗೊಂಡಿದೆ. ಅಗತ್ಯ ಬಿದ್ದಲ್ಲಿ ಮಕ್ಕಳ ಸಹಾಯವಾಣಿ ಸಂಖ್ಯೆ 1098ಕ್ಕೆ ಕರೆ ಮಾಡಿ ಅದರ ನೆರವು ಪಡೆಯುವಂತೆಯೂ ಸೂಚಿಸಲಾಗಿದೆ. (ದಿಗ್ವಿಜಯ ನ್ಯೂಸ್‌)

 

Leave a Reply

Your email address will not be published. Required fields are marked *

Back To Top