Monday, 25th September 2017  

Vijayavani

1. ರಾಜ್ಯದೆಲ್ಲೆಡೆ ವರುಣನ ಆರ್ಭಟ- ಬೆಂಗಳೂರು, ದಾವಣೆಗೆರೆಯಲ್ಲಿ ಮಳೆ ಅವಾಂತರ- ಕೆರೆಗಳೆಲ್ಲ ಭರ್ತಿ, ಮಂಡ್ಯದಲ್ಲಿ ಜಮೀನಿಗೆ ನುಗ್ಗಿತು ನೀರು 2. ಕಲ್ಯಾಣಿಯಲ್ಲಿ ಮುಳುಗಿ ವಿದ್ಯಾರ್ಥಿ ಸಾವು ಪ್ರಕರಣ- ಬೆಂಗಳೂರಿನ ನ್ಯಾಷನಲ್​ ಕಾಲೇಜು ವಿರುದ್ಧ ನಿರ್ಲಕ್ಷ್ಯದ ಆರೋಪ- ಸಿಬ್ಬಂದಿ ವಿರುದ್ಧ ಪೋಷಕರ ಆಕ್ರೋಶ 3. ಇಂದು ದೀನ್​ ದಯಾಳ್​​ ಜನುಮದಿನ- ಲೋಕಾರ್ಪಣೆಗೊಳ್ಳಲಿದೆ ವಿದ್ಯುತ್​ ಭವನ- ಕುಸಿದ ಅರ್ಥವ್ಯವಸ್ಥೆಗೆ ಮೋದಿ ನೀಡ್ತಾರಾ ಟಾನಿಕ್​ 4. ಜೆಮ್​ಶೆಡ್​ಪುರದಲ್ಲಿ ಭೀಕರ ಅಗ್ನಿ ಅವಘಡ- 8 ಜನ ಸಜೀವ ದಹನ, 25 ಮಂದಿಗೆ ಗಾಯ- ಪಟಾಕಿ ಕಾರ್ಖಾನೆಗೆ ಧಗಧಗಿಸಿದ ಕಿಡಿ 5. ಹುಟ್ಟಿದ ಆರೇ ನಿಮಿಷದಲ್ಲಿ ಮಗುವಿಗೆ ಆಧಾರ್- ಜನನ ಪ್ರಮಾಣಪತ್ರಕ್ಕೆ ಲಿಂಕ್​ ಮಾಡಿಸಿದ ಪೋಷಕರು- ಒಸ್ಮಾನಾಬಾದ್​ ಆಸ್ಪತ್ರೆಯಲ್ಲಿ ಭಾರಿ ಕಮಾಲ್​
Breaking News :

ಬರಿಗೈಯಲ್ಲಿ ಮ್ಯಾನ್​ಹೋಲ್​ ಕ್ಲೀನ್​ ಮಾಡಿಸಿದ ಪಾಲಿಕೆ ಅಧಿಕಾರಿ

Thursday, 07.09.2017, 4:27 PM       No Comments

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಯಾವುದೇ ಸುರಕ್ಷತಾ ಸಾಧನಗಳನ್ನು ನೀಡದೆ ಪೌರ ಕಾರ್ಮಿಕರಿಂದ ಬರಿ ಗೈಲಿ ಮ್ಯಾನ್​ ಹೋಲ್​ ಸ್ವಚ್ಛಗೊಳಿಸಿರುವ ಅಮಾನವೀಯ ಘಟನೆ ನಡೆದಿದೆ.

ಮೈಸೂರಿನ ಜೆ.ಪಿ. ನಗರದ ಅಕ್ಕಮಹಾದೇವಿ ರಸ್ತೆಯಲ್ಲಿ ಬುಧವಾರ ಈ ಘಟನೆ ನಡೆದಿದೆ. ಧಾರಾಕಾರ ಮಳೆಯಿಂದಾಗಿ ಒಳಚರಂಡಿ ಕಟ್ಟಿಕೊಂಡಿತ್ತು. ಈ ಸಂದರ್ಭದಲ್ಲಿ ಪಾಲಿಕೆ ಅಧಿಕಾರಿ ಶಿವಕುಮಾರ್​ ಪೌರ ಕಾರ್ಮಿಕರನ್ನು ಕರೆಸಿ ಮ್ಯಾನ್​ ಹೋಲ್​ ಕ್ಲೀನ್​ ಮಾಡಿಸಿದ್ದಾರೆ.

Pls download Vijayavani Android App

ಪೌರ ಕಾರ್ಮಿಕರು ಯಾವುದೇ ಸುರಕ್ಷತಾ ಕ್ರಮಗಳಿಲ್ಲದೆ ಬರಿಗೈಯಲ್ಲಿಯೇ ಕೊಳಚೆಯನ್ನು ಕ್ಲೀನ್​ ಮಾಡಿದ್ದಾರೆ. ಪಾಲಿಕೆ ಅಧಿಕಾರಿಯ ಈ ಕ್ರಮಕ್ಕೆ ಸಾರ್ವಜನಿಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲವು ತಿಂಗಳ ಹಿಂದೆ ಚಾಮುಂಡಿ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲೂ ಸಹ ಇಂತಹುದೇ ಘಟನೆ ನಡೆದಿತ್ತು. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *

Back To Top