Monday, 19th February 2018  

Vijayavani

ನನ್ನ ಮಗನನ್ನ ನಾನೇ ಸರೆಂಡರ್​ ಮಾಡಿಸುತ್ತೇನೆ - ಪೊಲೀಸರಿಗೆ ಶೀಘ್ರವೇ ಒಪ್ಪಿಸುತ್ತೇನೆ - ಗೂಂಡಾ ನಲಪಾಡ್​​ ಕುರಿತು ಹ್ಯಾರಿಸ್​ ಪ್ರತಿಕ್ರಿಯೆ        ನಿನ್ನೆ ಚಿಕ್ಕವನು.. ಇಂದು ಬೆಳೆದ ಮಗ - ಬೈದ ನಂತರ ಮೊಬೈಲ್​ ಸ್ವಿಚ್​​ ಆಫ್​​ ಮಾಡ್ಕೊಂಡಿದ್ದ - ಕೇಸ್​ ಭೀತಿಯಲ್ಲಿ ಉಲ್ಟಾ ಹೊಡೆದ ಹ್ಯಾರಿಸ್​​        ರಾಜ್ಯದಲ್ಲಿ ಇಡೀ ದಿನ ಮೋದಿ ಮೇನಿಯಾ - ಮಧ್ಯಾಹ್ನ ಬಾಹುಬಲಿ ಸನ್ನಿಧಿಗೆ ಪ್ರಧಾನಿ - ಮತ್ತಷ್ಟು ಮೇಳೈಸಲಿದೆ ಮಹಾಮಜ್ಜನ        ಪರಿವರ್ತನಾ ರ‍್ಯಾಲಿಯಲ್ಲಿಂದು ಮೋದಿ ಅಬ್ಬರ - ಬಿಜೆಪಿಯಿಂದ ಗಣಪತಿ ಉಡುಗೊರೆ - ಮೈಸೂರು ಪೇಟ ತೊಡಿಸಿ ಸ್ವಾಗತ        ರೈತ ನಾಯಕ, ಶಾಸಕ ಕೆ.ಎಸ್ ಪುಟ್ಟಣ್ಣಯ್ಯ ವಿಧಿವಶ - ವಿದೇಶದಿಂದ ಮಕ್ಕಳ ಬಂದ ಬಳಿಕ ಅಂತ್ಯಕ್ರಿಯೆ - ಕಂಬನಿ ಮಿಡಿದ ಗಣ್ಯರು       
Breaking News

ಗಂಡನೆಂಬ ವರದಕ್ಷಿಣೆ ಭೂತ: ವರ್ಷದ ಹಿಂದಷ್ಟೆ ಮದ್ವೆಯಾಗಿದ್ದ ಗೃಹಿಣಿ ಬಲಿ

Friday, 06.10.2017, 11:33 AM       No Comments

ಮೈಸೂರು: ವರದಕ್ಷಿಣೆ ಕಿರುಕುಳಕ್ಕೆ ಗೃಹಣಿಯೋಬ್ಬಳು ಅಮಾನವೀಯವಾಗಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ರಂಗಯ್ಯನ ಕೊಪ್ಪಲಿನಲ್ಲಿ ಶುಕ್ರವಾರ ನಡೆದಿದೆ.

ವಿಡಿಯೋ ನೋಡಿ:  ವರ್ಷದ ಹಿಂದಷ್ಟೆ ಮದ್ವೆಯಾಗಿದ್ದ ಗೃಹಿಣಿ ಬಲಿ

ತೇಜಶ್ವಿನಿ ಎಂಬಾಕೆಯೇ ಮೃತ ದುರ್ದೈವಿ. ತೇಜಶ್ವಿನಿ 10 ತಿಂಗಳ ಹಿಂದಷ್ಟೇ ವಿವಾಹವಾಗಿದ್ದಳು. ಹುಣಸೂರಿನ ರಂಗಯ್ಯನಕೊಪ್ಪಲಿನ ನಿವಾಸಿ ರಾಘವೇಂದ್ರನೊಂದಿಗೆ ವಿವಾಹವಾಗಿದ್ದಳು.

ಪಾಪಿ ಗಂಡ ವರದಕ್ಷಿಣೆ ತರುವಂತೆ ಪೀಡಿಸುತ್ತಿದ್ದನಂತೆ, ತರದಿದ್ದಕ್ಕೆ ಹೆಂಡತಿಯ ಮೇಲೆ ಅಮಾನವೀಯವಾಗಿ ವರ್ತಿಸಿ ಹಲ್ಲೆ ಮಾಡಿದ್ದಾನೆ. ಹಲ್ಲೆಗೊಳಗಾದ ತೇಜಶ್ವಿನಿಯನ್ನು ಮೈಸೂರಿನ ಬೃಂದಾವನ ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ.

ಇನ್ನು ತೇಜಶ್ವಿನಿ ಪೋಷಕರಲ್ಲಿ ದುಃಖ ಮಡುಗಟ್ಟಿದ್ದು, ಮಗಳ ಸಾವಿಗೆ ಗಂಡನೇ ನೇರ ಕಾರಣ ಎಂದು ಆರೋಪಿಸಿದ್ದಾರೆ. ವಿವಾಹ ಸಂದರ್ಭದಲ್ಲಿ ವರನಿಗೆ ಸಾಕಷ್ಟು ಹಣ ನೀಡಿದ್ದೇವೆ. ಆದರೂ ವರದಕ್ಷಿಣೆ ತರುವಂತೆ ಪೀಡಿಸುತ್ತಿದ್ದ. ವರದಕ್ಷಿಣೆ ತರದ ಹಿನ್ನೆಲೆಯಲ್ಲಿ ತೇಜಶ್ವಿನಿ ಮೇಲೆ ಹಲ್ಲೆ ಮಾಡಿ ಕೊಲೆ ಮಾಡಿದ್ದಾನೆ ಎಂದು ಆರೋಪಿಸಿದ್ದಾರೆ.

ಈ ಸಂಬಂಧ ಜಯಲಕ್ಷ್ಮೀಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *

Back To Top