Tuesday, 20th February 2018  

Vijayavani

ಹ್ಯಾರಿಸ್ ಪುತ್ರ ಆಯ್ತು ಮತ್ತೊಬ್ಬ ಕೈ ಮುಖಂಡನ ದರ್ಪ- ಸರ್ಕಾರಿ ಕಚೇರಿಗೆ ನುಗ್ಗಿ ಅಧಿಕಾರಿಗೆ ಧಮ್ಕಿ- ಜಲಮಂಡಳಿ ಸದಸ್ಯ ನಾರಾಯಣಸ್ವಾಮಿ ಗೂಂಡಾಗಿರಿ        ನಾನು ಎರಚಿದ್ದು ಪೆಟ್ರೋಲ್ ಅಲ್ಲ, ನೀರು- ಕಿವಿಗೆ ಕಲರ್ ಕಲರ್ ಹೂವಿಟ್ಟ ನಾರಾಯಣಸ್ವಾಮಿ- ನಿಮ್ಮ ಏರಿಯಾದಲ್ಲಿ ನೀರಿಗೆ ಬಣ್ಣ ಇರುತ್ತಾ...?        ಸಿದ್ದರಾಮಯ್ಯ ಆಪ್ತನ ದರ್ಪ ಕಾಂಗ್ರೆಸ್‌ಗೆ ಕಾಣಿಸಲ್ವಾ- ಪರಮೇಶ್ವರ್‌ ಅವರೇ ಗೂಂಡಾನ ವಿರುದ್ಧ ಕ್ರಮ ಇಲ್ವಾ..?- ಕಾಂಗ್ರೆಸ್‌ ಸರ್ಕಾರದಲ್ಲಿ ಅಧಿಕಾರಿಗಳಿಷ್ಟು ಸೇಫ್..?        ದಕ್ಷಿಣ ಕರ್ನಾಟಕದಲ್ಲಿ ಅಮಿತ್ ಷಾ ದಂಡಯಾತ್ರೆ- ಕುಕ್ಕೆ ಸನ್ನಿಧಿಯಲ್ಲಿ ವಿಶೇಷ ಪೂಜೆ- ಜ್ವರದ ನಡುವೆಯೂ ಹತ್ತು ಹಲವು ಕಾರ್ಯಕ್ರಮದಲ್ಲಿ ಭಾಗಿ        ಮೇಯ್ತಿದ್ದ ಮದಗಜ ಕೆಣಕಿದ ಶ್ವಾನ- ನಾಯಿ ತುಂಟಾಟಕ್ಕೆ ತಿರುಗಿ ಬಿದ್ದ ಆನೆ- ಮಡಿಕೇರಿಯ ಕಾಫಿತೋಟದಲ್ಲಿ ಆನೆ, ನಾಯಿ ಕಾಳಗ       
Breaking News

ಕಾಂಗ್ರೆಸ್ ಶಾಸಕ ಸೋಮಶೇಖರ್ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ

Thursday, 07.12.2017, 11:58 AM       No Comments

<< ಸುಳ್ಳು ಮಾಹಿತಿ ನೀಡಿ ಗ್ಯಾಸ್ ಏಜೆನ್ಸಿ ಪಡೆದಿರುವ ಆರೋಪ ಪ್ರಕರಣ>>

ಮೈಸೂರು: ಕಾಂಗ್ರೆಸ್​ ಶಾಸಕ ಎಂ. ಕೆ ಸೋಮಶೇಖರ್​ ಅವರ ವಿರುದ್ಧ ಮೈಸೂರಿನ ಜೆಎಂಎಫ್​ ನ್ಯಾಯಾಲಯ ಜಾಮೀನು ರಹಿತ ವಾರಂಟ್​ ಜಾರಿ ಮಾಡಿದೆ.

ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಕೆ.ಸೋಮಶೇಖರ್ ಅವರು ಸುಳ್ಳು ಮಾಹಿತಿ ನೀಡಿ ಗ್ಯಾಸ್ ಏಜೆನ್ಸಿ ಪಡೆದಿದ್ದಾರೆಂದು ಮೈಸೂರು ಪಾಲಿಕೆ ಮಾಜಿ ಸದಸ್ಯ ಎಂ.ಸಿ.ಚಿಕ್ಕಣ್ಣನವರು ಆರೋಪ ಮಾಡಿದ್ದರು. ಈ ಸಂಬಂಧ 2008ರ ಮೇ ತಿಂಗಳಲ್ಲಿ ದಾಖಲೆ ಸಹಿತ ಹೇಳಿಕೆ ನೀಡಿದ್ದರು.

ಈ ವೇಳೆ ಎಂ.ಸಿ.ಚಿಕ್ಕಣ್ಣ ವಿರುದ್ಧ ಸೋಮಶೇಖರ್​ ಅವರು ಅವಹೇಳನಕಾರಿ ಹೇಳಿಕೆ ನೀಡಿದ್ದರು. ಅವರ ವಿರುದ್ಧ ಚಿಕ್ಕಣ್ಣನವರು ಕೂಡ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಈ ಸಂಬಂಧ ಅರ್ಜಿಯ ವಿಚಾರಣೆಗೆ ಹಲವು ಬಾರಿ ಹಾಜರಾಗದ ಕಾರಣ ಶಾಸಕರನ್ನು ಬಂಧಿಸುವಂತೆ ಜಾಮೀನ ರಹಿತ ವಾರಂಟ್​ ಜಾರಿ ಮಾಡಿದೆ. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *

Back To Top