Friday, 20th October 2017  

Vijayavani

1. ಲಿಂಗಾಯತ ಪ್ರತಿಪಾದಕರಾಗಿದ್ದಕ್ಕೆ ಕಲಬುರ್ಗಿ ಹತ್ಯೆ – ಲಿಂಗಾಯತ ವಿಚಾರ ಬರೆದಿದ್ದಕ್ಕೆ ಗೌರಿ ಲಂಕೇಶ್​ ಕೊಲೆ ಶಂಕೆ – ಬೆಂಗಳೂರಿನಲ್ಲಿ ಜಾಮದಾರ್​ ವಿವಾದಾತ್ಮಕ ಹೇಳಿಕೆ 2. ಬಿಜೆಪಿ ಬಿಟ್ಟು ಕಾಂಗ್ರೆಸ್​ ಸೇರಿದಕ್ಕೆ ಮಾರಣಾಂತಿಕ ಹಲ್ಲೆ – ಮಾಜಿ ಕಾರ್ಪೊರೇಟರ್​ ರವೀಂದ್ರ ವಿರುದ್ಧ ಮಹಿಳೆ ಆರೋಪ – ಗಾಯಾಳುವಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ 3. ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾರಥೋತ್ಸವ – ರಥೋತ್ಸವದ ವೇಳೆ ನೂಕು ನುಗ್ಗಲು – ಭಕ್ತರ ನಿಯಂತ್ರಿಸಲು ಪೊಲೀಸರಿಂದ ಲಾಠಿ ಚಾರ್ಜ್ 4. ಹಾಲಿವುಡ್, ಬಾಲಿವುಡ್​ ಬೇರೆ ಅಲ್ಲ – ಎರಡೂ ಕಡೆ ಲೈಂಗಿಕ ಶೋಷಣೆ ಇದ್ದೆ ಇದೆ – ಸಂದರ್ಶನದಲ್ಲಿ ಸತ್ಯ ತೆರೆದಿಟ್ಟ ಪ್ರಿಯಾಂಕ ಚೋಪ್ರಾ 5. ದೀಪಾವಳಿಗೆ ಪ್ರಧಾನಿ ತಾಯಿ ಫುಲ್ ಖುಷ್​ – ರಾಮನ ಹಾಡಿಗೆ ಸಖತ್ ಸ್ಟೆಪ್ಸ್​ – 97ರ ಹರೆಯದಲ್ಲೂ ಹೀರಾಬೆನ್​ ಜೀವನ ಪ್ರೀತಿ
Breaking News :

ನಮ್ಮ ಮೆಟ್ರೋ ನೌಕರ ಅರಸೀಕೆರೆ ಸಂತೋಷ್ ನೇಣಿಗೆ ಶರಣು

Thursday, 05.10.2017, 11:52 AM       No Comments

ಬೆಂಗಳೂರು: ಹಿರಿಯ ಅಧಿಕಾರಿಗಳ ಕಿರುಕುಳ ಹಿನ್ನೆಲೆ ಮೆಟ್ರೋ ಸಿಬ್ಬಂದಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ಬೆಳಗ್ಗೆ ಸುಂಕದಕಟ್ಟೆಯ ಮೆಟ್ರೋ ವಸತಿ ಗೃಹದಲ್ಲಿ ನಡೆದಿದೆ.

ಮೆಟ್ರೋ ನೌಕರ ಸಂತೋಷ್(25) ಎಂಬಾತನೇ ಆತ್ಮಹತ್ಯೆ ಮಾಡಿಕೊಂಡಾತ. ಸಂತೋಷ್ ಮೂಲತಃ ಹಾಸನ ಜಿಲ್ಲೆಯ ಅರಸೀಕೆರೆ ಮೂಲದವರು. ಹಿರಿಯ ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಅಧಿಕಾರಿಗಳ ವಿರುದ್ಧ ಆರೋಪ ಕೇಳಿಬಂದಿದೆ.

ಇನ್ನು ಮೆಟ್ರೋ ಸಿಬ್ಬಂದಿ ಆತ್ಮಹತ್ಯೆ ಹಿನ್ನೆಲೆಯಲ್ಲಿ ಮೆಟ್ರೋ ಆಡಳಿತ ಮಂಡಳಿ ವಿರುದ್ಧ ಮೆಟ್ರೋ ಸಿಬ್ಬಂದಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಬೆಂಗಳೂರಿನ ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *

Back To Top