Friday, 21st September 2018  

Vijayavani

Breaking News

ಬೇರೆ ಕೆಲಸ ಹುಡುಕಿಕೊಳ್ಳುವಂತೆ ತನ್ನ ಕಂಪನಿ ಉದ್ಯೋಗಿಗಳಿಗೆ ಪತ್ರ ಬರೆದ ನೀರವ್​

Wednesday, 21.02.2018, 9:01 AM       No Comments

ಮುಂಬೈ: ಪಂಜಾಬ್​ ನ್ಯಾಷನಲ್​ ಬ್ಯಾಂಕ್​ನಿಂದ ಸಾವಿರಾರು ಕೋಟಿ ರೂ. ಸಾಲ ಪಡೆದು ವಂಚಿಸಿ ದೇಶ ತೊರೆದಿರುವ ಉದ್ಯಮಿ ನೀರಜ್​ ಮೋದಿ ತಮ್ಮ ಕಂಪನಿಯ ಉದ್ಯೋಗಿಗಳಿಗೆ ಬೇರೆ ಕೆಲಸ ಹುಡುಕಿಕೊಳ್ಳುವಂತೆ ಪತ್ರ ಬರೆದಿದ್ದಾರೆ.

ನಮ್ಮ ಕಂಪನಿಯ ಭವಿಷ್ಯ ಡೋಲಾಯಮಾನವಾಗಿದೆ. ಸಿಬಿಐ ಮತ್ತು ಜಾರಿ ನಿದೇಶನಾಲಯ ನಮ್ಮ ಕಂಪನಿ ಮತ್ತು ಶೋರೂಂಗಳಿದ್ದ ದಾಸ್ತಾನನ್ನು ವಶಕ್ಕೆ ಪಡೆದಿದ್ದಾರೆ. ಅಷ್ಟೇ ಅಲ್ಲದೆ ಆದಾಯ ತೆರಿಗೆ ಇಲಾಖೆ ನಮ್ಮ ಕಂಪನಿಯ ಬ್ಯಾಂಕ್​ ಅಕೌಂಟ್​ಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ. ಹಾಗಾಗಿ ಮುಂದಿನ ದಿನಗಳಲ್ಲಿ ನಿಮಗೆ ಸಂಬಳ ನೀಡಲು ಸಾಧ್ಯವಿಲ್ಲ. ನೀವು ಬೇರೆ ಕೆಲಸ ಹುಡುಕಿಕೊಳ್ಳುವುದು ಸೂಕ್ತ ಎಂದು ನೀರವ್​ ಮೋದಿ ತಮ್ಮ ಉದ್ಯೋಗಿಗಳಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಅಷ್ಟೇ ಅಲ್ಲದೆ ತನಿಖೆ ಸಾಗುತ್ತಿರುವ ಹಾದಿ ಮತ್ತು ವೇಗವನ್ನು ನೋಡಿದರೆ ನಿಷ್ಟಪಕ್ಷಪಾತ ತನಿಖೆ ನಡೆಯುವ ವಿಶ್ವಾಸವಿಲ್ಲ ಎಂದು ನೀರವ್​ ಪತ್ರದಲ್ಲಿ ತಮ್ಮ ಆತಂಕವನ್ನು ಹೊರಹಾಕಿದ್ದಾರೆ.

ನೀರವ್​ ಮೋದಿ ಪಂಜಾಬ್​ ನ್ಯಾಷನಲ್​ ಬ್ಯಾಂಕ್​ಗೆ 11,400 ಕೋಟಿ ರೂ. ವಂಚಿಸಿ ದೇಶ ತೊರೆದಿದ್ದಾರೆ. ಈ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಮತ್ತು ಜಾರಿ ನಿರ್ದೇಶನಾಲಯ ನೀರವ್​ ಸೇರಿದ ಕಂಪನಿಗಳು ಮತ್ತು ಶೋರೂಂ ಗಳ ಮೇಲೆ ದಾಳಿ ನ ಡೆಸಿ ಸುಮಾರು 5,700 ಕೋಟಿ ರೂ. ಮೌಲ್ಯದ ಚಿನ್ನ, ಹರಳುಗಳೂ ಮತ್ತು ಇತರ ಬೆಲೆಬಾಳುವ ಕಲ್ಲುಗಳನ್ನು ವಶಪಡಿಸಿಕೊಂಡಿದ್ದಾರೆ. (ಏಜೆನ್ಸೀಸ್​)

Leave a Reply

Your email address will not be published. Required fields are marked *

Back To Top