Saturday, 22nd September 2018  

Vijayavani

ಸಂಕಷ್ಟ ತಂದ ದಂಗೆ ಹೇಳಿಕೆ - ಬಿಜೆಪಿ ನಿಯೋಗದಿಂದ ರಾಜ್ಯಪಾಲರಿಗೆ ದೂರು - ರಾಷ್ಟ್ರಪತಿಗಳಿಗೆ ಮಾಹಿತಿ ರವಾನೆ ಸಾಧ್ಯತೆ        ಸಿಎಂ ಬೇಜವಾಬ್ಧಾರಿ ಹೇಳಿಕೆಗೆ ರಾಜ್ಯಾದ್ಯಂತ ಖಂಡನೆ - ಬಿಜೆಪಿ ಕಾರ್ಯಕರ್ತರ ಪ್ರೊಟೆಸ್ಟ್​ - ಬಾಗಲಕೋಟೆಯಲ್ಲಿ ಬ್ಯಾನರ್​ ದಹನ        ಮಲೆನಾಡಲ್ಲಿ ಪ್ರವಾಹದ ಬೆನ್ನಲ್ಲೇ ಮತ್ತೊಂದು ಬರೆ - ನೆರೆ ಬಳಿಕ ಬತ್ತುತ್ತಿವೆ ನದಿಗಳು - ಆತಂಕದಲ್ಲಿ ಚಿಕ್ಕಮಗಳೂರು ಜನತೆ        ಶತಮಾನದ ಆಸ್ಪತ್ರೆಗೆ ಸರ್ಕಾರದ ಬೀಗ - ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆಗೆ ಜಾಗ - ಉಡುಪಿಯಲ್ಲಿ ಉಚಿತ ಚಿಕಿತ್ಸೆ ಇನ್ನು ಮರೀಚಿಕೆ..?        ಮೈಸೂರಲ್ಲಿ ನಾಡಹಬ್ಬಕ್ಕೆ ತಯಾರಿ - ಮಾವುತರಿಗೆ ಜಿಲ್ಲಾಡಳಿತದ ಭೂರಿ ಭೋಜನ - ಕೇರಂ ಆಡಿ ಸಂತಸಪಟ್ಟ ಕಾವಾಡಿಗರು        ಹುಬ್ಬಳ್ಳಿಯಲ್ಲಿ ಅಷ್ಟವಿನಾಯಕ ಸ್ಪರ್ಧೆ - ಅಲಂಕಾರದಲ್ಲಿ ಹಿರೇಪೇಟೆಯ ವಿನಾಯಕ ಪ್ರಥಮ- ಗಾಂಧಿ ಚೌಕ್ ಗಣಪ ಉತ್ತಮ ವಿಗ್ರಹ       
Breaking News

ಏಕಕಾಲ ಚುನಾವಣೆಗೆ ಸ್ಥಿರ ಅವಧಿ ಸೂತ್ರ: ನೀತಿ ಆಯೋಗ ಶಿಫಾರಸು

Monday, 16.04.2018, 8:15 PM       No Comments

ನವದೆಹಲಿ: ಚುನಾವಣಾ ಪ್ರಕ್ರಿಯೆಯಲ್ಲಿ ಸುಸ್ಥಿರತೆ ತರುವ ಉದ್ದೇಶದಿಂದ ಏಕಕಾಲಕ್ಕೆ ಚುನಾವಣೆ ನಡೆಸಲು ಕೇಂದ್ರ ಸರ್ಕಾರದಿಂದ ಚಿಂತನೆ ನಡೆದಿರುವ ಬೆನ್ನಿಗೆ ನೀತಿ ಆಯೋಗ ಲೋಕಸಭಾ ಮತ್ತು ವಿಧಾನಸಭೆಗಳಿಗೆ ಸ್ಥಿರ ಅವಧಿ ನಿಗದಿಪಡಿಸುವಂತೆ ಕೇಂದ್ರಕ್ಕೆ ಶಿಫಾರಸು ಮಾಡಿದೆ. ಮಧ್ಯಂತರ ಚುನಾವಣೆಗಳು ಉದ್ಭವಿಸದಂತೆ ತಡೆಯುವ ನಿಟ್ಟಿನಲ್ಲಿ ಐದು ವರ್ಷಗಳ ಸ್ಥಿರ ಅವಧಿಯನ್ನು ನಿಗದಿಪಡಿಸಬೇಕು ಎಂದು ಆಯೋಗ ಅಭಿಪ್ರಾಯಪಟ್ಟಿದೆ.

ಪ್ರಸ್ತುತ ಸಂವಿಧಾನದಲ್ಲಿ ಲೋಕಸಭೆ ಮತ್ತು ವಿಧಾನಸಭೆಗೆ ಸ್ಥಿರ ಅವಧಿ ನಿಗದಿಪಡಿಸಲು ಅವಕಾಶವಿಲ್ಲ. ಆದರೆ ಏಕಕಾಲಕ್ಕೆ ಚುನಾವಣೆ ನಡೆದಿದ್ದೇ ಆದರೆ ಕೆಲ ಸಮಯದ ನಂತರ ರಾಜಕೀಯ ಮೇಲಾಟಗಳಿಂದ ಮಧ್ಯಂತರ ಮತ್ತು ಉಪಚುನಾವಣೆಗಳು ಎದುರಾಗುತ್ತಲೇ ಇರುತ್ತದೆ. ಪರಿಣಾಮ ಅನಗತ್ಯ ವೆಚ್ಚ ಮಾಡಬೇಕಾಗುತ್ತದೆ ಹಾಗೂ ಚುನಾವಣೆ ಪ್ರಕ್ರಿಯೆ ಮೇಲೆ ಜನರ ವಿಶ್ವಾಸ ಕಡಿಮೆಯಾಗುತ್ತದೆ ಎಂದು ಆಯೋಗ ತನ್ನ ವರದಿಯಲ್ಲಿ ವಿವರಿಸಿದೆ.

ಒಂದೇ ಬಾರಿಗೆ ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಗಳನ್ನು ನಡೆಸುವ ಮಹತ್ವಾಕಾಂಕ್ಷಿ ಯೋಜನೆ ಕೈಗೆತ್ತಿಕೊಂಡಿರುವ ಕೇಂದ್ರ ಸರ್ಕಾರ ಈಗಾಗಲೇ ಮಹತ್ವದ ಹೆಜ್ಜೆ ಇಟ್ಟಿದೆ. ಕೆಲ ರಾಜ್ಯಗಳಲ್ಲಿ ಸರ್ಕಾರದ ಅಧಿಕಾರಾವಧಿ 2019ರ ಜನವರಿಗೆ ಅಂತ್ಯವಾಗಲಿದೆ. ಇಂಥ ರಾಜ್ಯಗಳಲ್ಲಿ ರಾಷ್ಟ್ರಪತಿ ಆಡಳಿತ ಹೇರುವ ಮೂಲಕ ಅಲ್ಲಿನ ಚುನಾವಣೆಗಳನ್ನು ಮುಂದೂಡುವ ಕುರಿತು ಕೇಂದ್ರ ಸರ್ಕಾರ ಪರಾಮರ್ಶೆ ನಡೆಸುತ್ತಿದೆ.

ಇದನ್ನೂ ಓದಿ: ಏಕಕಾಲ ಚುನಾವಣೆಗೆ ಮೊದಲ ಹೆಜ್ಜೆ

Leave a Reply

Your email address will not be published. Required fields are marked *

Back To Top